ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ: ಸ್ಪರ್ಧೆಗೆ ಟಾರ್ಗೆಟ್ ಯಾರು!?

ಹಾಲಿ & ಮಾಜಿ ಶಾಸಕರ ಸಂಬಂಧಿಕರು, ಪುತ್ರರಿಗೆ ಆಶ್ರಯ ಆಗುತ್ತಾ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಚರ್ಚೆ ಕೂಡ ಪ್ರಾರಂಭವಾಗಿದೆ. ಜೊತೆಗೆ ಜೆಡಿಎಸ್‍ನಿಂದ ಅಂತರ ಕಾಯ್ದುಕೊಂಡು ಶಾಸಕರತ್ತ ಇವರು ಸಂಪರ್ಕ ಮಾಡಲಿದ್ದಾರೆಂತೆ.

Written by - Prashobh Devanahalli | Edited by - Puttaraj K Alur | Last Updated : Dec 27, 2022, 11:33 AM IST
  • 2023ರ ಸಾರ್ವತ್ರಿಕ ಚುನಾವಣೆಯ ಅಖಾಡಕ್ಕಿಳಿಯಲು ಮಾಜಿ ಸಚಿವ ಜನಾರ್ದನ ರೆಡ್ಡಿ ಸಜ್ಜು
  • ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಡೆಯುತ್ತಿದೆ ಸಕಲ ಸಿದ್ಧತೆ
  • ಬಳ್ಳಾರಿ, ಗದಗ, ಕೊಪ್ಪಳ ಸೇರಿ ಉತ್ತರ ಕರ್ನಾಟಕದ ಭಾಗದಲ್ಲಿ ಹೆಚ್ಚು ಪೋಕಸ್ ಮಾಡಲು ರೆಡ್ಡಿ ತಂತ್ರ
ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ: ಸ್ಪರ್ಧೆಗೆ ಟಾರ್ಗೆಟ್ ಯಾರು!? title=
ಜರ್ನಾರ್ಧನ ರೆಡ್ಡಿ ರಾಜಕೀಯ ತಂತ್ರವೇನು?

ಬೆಳಗಾವಿ: ಇತ್ತೀಚೆಗಷ್ಟೇ ಗಣಿಧಣಿ ಎಂದೇ ಖ್ಯಾತಿಯಾಗಿರುವ ಮಾಜಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೊಸ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಘೋಷಣೆ ಮಾಡಿದ್ದಾರೆ. ಆದರೆ ಚುನಾವಣೆ ತಂತ್ರದಲ್ಲಿ ಇವರ ಟಾರ್ಗೆಟ್ ಯಾರು ಎಂಬ ಪ್ರಶ್ನೆ ಪ್ರತಿಯೊಬ್ಬರಲ್ಲಿಯೂ ಇದೆ. ಇದಕ್ಕೆ ಇಲ್ಲಿದೆ ನೋಡಿ ಉತ್ತರ.

2023ರ ಸಾರ್ವತ್ರಿಕ ಚುನಾವಣೆಗೆ‌ ಅಖಾಡಕ್ಕಿಳಿಯಲು ಜನಾರ್ದನ ರೆಡ್ಡಿ ಸಜ್ಜಾಗಿದ್ದು, ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಅಷ್ಟಕ್ಕೂ ಜನಾರ್ಧನ ರೆಡ್ಡಿಯವರ ಟಾರ್ಗೆಟ್ ವಲಸಿಗ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ಸಿಗದಿದ್ರೆ ತಮ್ಮ ಪಕ್ಷದಿಂದ ಟಿಕೆಟ್ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‍ನ ಮುಖಂಡರಿಗೆ ಗಾಳ ಹಾಕುವ ತಂತ್ರ ಕೂಡ ಅನುಸರಿಸುತ್ತಾರೆಂದು ತಿಳಿದುಬಂದಿದೆ.

ಇದನ್ನೂ ಓದಿ: ಪ್ರೇಯಸಿ ಆಸೆ ತೀರಿಸಲು ಅಣ್ಣನ ಮನೆಗೆ ಕನ್ನ: ಹುಡುಗಿ ಜೊತೆ ಗೋವಾದಲ್ಲಿ ಮಜಾ ಮಾಡುತ್ತಿದ್ದವ ಅಂದರ್!

ಜೆಡಿಎಸ್‍ನಿಂದ ಅಂತರ ಕಾಯ್ದುಕೊಂಡ ಶಾಸಕರತ್ತ ಇವರು ಸಂಪರ್ಕ ಹೊಂದುತ್ತಿದ್ದಾರೆಂಬ ಮಾಹಿತಿ ತಿಳಿದುಬಂದಿದೆ. ವಯಸ್ಸಿನ ಕಾರಣಕ್ಕೆ ಟಿಕೆಟ್ ಸಿಗದ ಶಾಸಕರನ್ನು ಪಕ್ಷಕ್ಕೆ ಕರೆತರಲು ತಯಾರಿ ನಡೆಯಲಿದೆ. ಹಾಲಿ & ಮಾಜಿ ಶಾಸಕರ ಸಂಬಂಧಿಕರು, ಪುತ್ರರಿಗೆ ಆಶ್ರಯ ಆಗುತ್ತಾ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಅನ್ನೋ ಚರ್ಚೆ ಕೂಡ ಪ್ರಾರಂಭವಾಗಿದೆ. ಇದಲ್ಲದೆ ಜನಾರ್ಧನ ರೆಡ್ಡಿ ಸಚಿವರಾಗಿದ್ದ ಸಂದರ್ಭದಲ್ಲಿದ್ದ ಆಪ್ತ ಅಧಿಕಾರಿಗಳಿಗೆ ಅವಕಾಶ ನೀಡುವ ಚಿಂತನೆ ನಡೆಸಲಿದ್ದಾರಂತೆ.

ಬಳ್ಳಾರಿ, ಗದಗ, ಕೊಪ್ಪಳ ಸೇರಿದಂತೆ ಉತ್ತರ ಕರ್ನಾಟಕದ ಭಾಗದಲ್ಲಿ ಹೆಚ್ಚು ಪೋಕಸ್ ಮಾಡಲು ರೆಡ್ಡಿ ತಂತ್ರ ರೂಪಿಸಿದ್ದು, ತಮ್ಮ ಸಂಪರ್ಕದಲ್ಲಿರುವ ಸಿನಿ ತಾರೆಯರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಪಕ್ಷಕ್ಕೆ ಕರೆ ತರಲು ಪ್ರಯತ್ನ ನಡೆಸುತ್ತಿದ್ದಾರಂತೆ. 6 ತಿಂಗಳು ಹಿಂದೆ ರೆಡ್ಡಿ ಅವರು, ‘ನನಗೆ ಶಾಸಕ ಆಗಬೇಕು, ಮಂತ್ರಿ ಆಗಬೇಕು ಅಂತಾ ಆಸೆಯಿಲ್ಲ. ನಾನು ಮನಸ್ಸು ಮಾಡಿದ್ರೆ ಇವತ್ತು ಒಂದೇ ಒಂದು ದಿನ ಆದ್ರೂ ಸಿಎಂ ಆಗುವೆ’ ಅಂತಾ ಚಾಲೆಂಜ್ ಮಾಡಿ ಹೇಳಿದ್ದರು.

ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಜಗಳ: ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರ ಬರ್ಬರ ಹತ್ಯೆ!

'ಸಾಮಾನ್ಯ ಲೋಕಸಭಾ ಕ್ಷೇತ್ರದ ಕೊನೆಯ ಸದಸ್ಯರಾಗಿ ಕರುಣಾಕರ ರೆಡ್ಡಿ ಕೆಲಸ ಮಾಡಿದ್ದರು. ಸೋಮಶೇಖರರೆಡ್ಡಿ ಬಳ್ಳಾರಿ ನಗರಸಭೆ ಅಧ್ಯಕ್ಷರಾಗಿ ಕೆಲಸ ಮಾಡಿದರು. ನನಗಂತೂ ಯಾರಿಗೂ ಕೊಡಲಾರದಷ್ಟು ಕಷ್ಟ ಕೊಟ್ಟರು. ನಾನಿಂದು ನಿಮ್ಮ ಮುಂದೆ ಬಂದು ನಿಂತಿದ್ದೇನೆ. ಅಂತಹ ವಿಶೇಷ ಆಶೀರ್ವಾದ ಶ್ರೀ ಕನಕದುರ್ಗಮ್ಮ ದೇವಿ ನನಗೆ ನೀಡಿದ್ದಾಳೆ' ಎಂದು ಜನಾರ್ದನ ರೆಡ್ಡಿ ತಮಗಾದ ನೋವು ತೊಡಿಕೊಂಡಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News