ವಲಸಿಗ ಸಚಿವರು ವಾಪಸ್ ಬಂದರೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ

ದಲಿತರನ್ನು ಸಿಎಂ ಮಾಡಲು ಬಿಜೆಪಿಗೆ ಅವಕಾಶವಿದೆ ಎಂದ ಸಿದ್ದರಾಮಯ್ಯ

Written by - Puttaraj K Alur | Last Updated : Jul 23, 2021, 04:33 PM IST
  • ‘ವಲಸಿಗ ಸಚಿವರು ವಾಪಸ್ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲವೆಂದು ಈ ಹಿಂದೆ ಸದನದಲ್ಲೇ ಹೇಳಿದ್ದೆ’
  • ‘ಬಿಜೆಪಿ ನಾಯಕರಿಗೆ ನೈಜ ಕಾಳಜಿ ಇದ್ದರೆ BSY ರಾಜೀನಾಮೆ ನೀಡದ ಬಳಿಕ ದಲಿತರನ್ನೇ ಮುಖ್ಯಮಂತ್ರಿ ಮಾಡಲಿ’
  • ‘ಯಾವುದೇ ಮಠಾಧೀಶರು ರಾಜಕಾರಣಕ್ಕೆ ಕೈಹಾಕಬಾರದು.‌ ಇಲ್ಲಿ ಜನಾಭಿಪ್ರಾಯವೇ ಅಂತಿಮ’ವೆಂದ ಸಿದ್ದರಾಮಯ್ಯ
ವಲಸಿಗ ಸಚಿವರು ವಾಪಸ್ ಬಂದರೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ title=
ಬಿಜೆಪಿ ಸವಾಲು ಹಾಕಿದ ಸಿದ್ದರಾಮಯ್ಯ

ಬೆಂಗಳೂರು: ವಲಸಿಗ ಸಚಿವರು ನಮ್ಮ ಪಕ್ಷಕ್ಕೆ ಬರುತ್ತಾರೋ, ಇಲ್ಲವೋ ಗೊತ್ತಿಲ್ಲ. ಅವರು ಬಂದರೂ ನಾವು ವಾಪಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವಲಸಿಗ ಸಚಿವರನ್ನು ಮತ್ತೆ ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(BS Yediyurappa) ರಾಜೀನಾಮೆ ಹಗ್ಗಜಗ್ಗಾಟದ ಬೆನ್ನಲ್ಲೇ ವಲಸಿಗ ಸಚಿವರು ಕೂಡ ರಾಜೀನಾಮೆ ನೀಡುತ್ತಾರೆಂಬ ಮಾತುಗಳು ಕೇಳಿಬಂದಿದ್ದವು. ಒಂದು ವೇಳೆ ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪನವರು ರಾಜೀನಾಮೆ ನೀಡಿದರೆ ತಾವೆಲ್ಲಿ ತಮ್ಮ ಸಚಿವ ಸ್ಥಾನ ಕಳೆದುಕೊಳ್ಳುತ್ತೇವೋ ಎಂಬ ಆತಂಕ ವಲಸಿಗರಲ್ಲಿ ಮೂಡಿದೆ. ಹೀಗಾಗಿ ಕೆಲ ವಲಸಿಗ ಸಚಿವರು ರಾಜೀನಾಮೆ ನೀಡಿ ಸ್ವಪಕ್ಷಕ್ಕೆ ಸೇರಿಕೊಳ್ಳಲು ಸಜ್ಜಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.  

ಇದನ್ನೂ ಓದಿ:  OMG: ಹಸುವಿನ ಹೊಟ್ಟೆಯಲ್ಲಿತ್ತು ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ..!

‘ವಲಸಿಗ ಸಚಿವರು ನಮ್ಮ‌ ಪಕ್ಷಕ್ಕೆ ಬರುತ್ತಾರೋ, ಇಲ್ಲವೋ ಎನ್ನುವುದು ನನಗಂತೂ ಗೊತ್ತಿಲ್ಲ. ಪಕ್ಷಕ್ಕೆ ಅವರನ್ನು ವಾಪಾಸು ಸೇರಿಸಿಕೊಳ್ಳುವುದಿಲ್ಲ ಎಂದು ಈ ಹಿಂದೆ ಸದನದಲ್ಲೇ ಹೇಳಿದ್ದೇನೆ. ಅದಕ್ಕೆ ನಾನು ಈಗಲೂ ಬದ್ಧನಿದ್ದೇನೆ’ ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ‘ದಲಿತರ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ನೈಜ ಕಾಳಜಿ ಇದ್ದರೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ದಲಿತರನ್ನೇ ಮುಖ್ಯಮಂತ್ರಿ ಮಾಡಲಿ. ಇದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ನನ್ನ ಸವಾಲು’ ಎಂದು ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.  

‘ಸಿದ್ದರಾಮಯ್ಯ ದಲಿತರನ್ನು ಸಿಎಂ ಮಾಡಲಿ ಎಂದು ನಳೀನ್ ಕುಮಾರ್ ಕಟೀಲ್ ನನಗೆ ಹೇಳಿದ್ದರು. ನಮ್ಮ ಪಕ್ಷದಲ್ಲಿ ದಲಿತರು ಸಿಎಂ ಆಗಿದ್ದಾರೆ.‌ ಹೀಗಾಗಿ ಸದ್ಯ ಬಿಜೆಪಿಗೆ ಆ ಅವಕಾಶ ಇದೆ, ನಳೀನ್ ಕುಮಾರ್ ಕಟೀಲ್ ಅವರು ಈಗ ದಲಿತರನ್ನು ಸಿಎಂ ಮಾಡಿ, ಸಾಮಾಜಿಕ ನ್ಯಾಯ ಎತ್ತಿಹಿಡಿಯಲಿ’ ಅಂತಾ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಬಿ.ಎಸ್.ಯಡಿಯೂರಪ್ಪ ಬದಲಾದರೆ ಬಿಜೆಪಿಗೆ ದೊಡ್ಡ ಹೊಡೆತ: ಮಠಾಧಿಪತಿಗಳ ಖಡಕ್ ಎಚ್ಚರಿಕೆ..!

‘ಯಾವುದೇ ಮಠಾಧೀಶರು ರಾಜಕಾರಣ(Politics)ಕ್ಕೆ ಕೈಹಾಕಬಾರದು.‌ ಇಲ್ಲಿ ಜನಾಭಿಪ್ರಾಯವೇ ಅಂತಿಮ. ಮಠಾಧೀಶರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗುವುದರಿಂದ ಮಠಗಳ ಬಗ್ಗೆ ಜನರಿಗಿರುವ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗುತ್ತದೆ’ ಎಂದು  ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘2019ರಲ್ಲಿ ಬಂದ ಪ್ರವಾಹದಿಂದ ಸಂತ್ರಸ್ತರಾದವರಿಗೇ ಇನ್ನೂ ಬಿಜೆಪಿ ಸರ್ಕಾರ(BJP Govt.) ಪರಿಹಾರ ಕೊಟ್ಟಿಲ್ಲ. ಈಗ ಎಲ್ಲಾ ಕಡೆ ಮಳೆ ಬಂದು ಜನ, ಜಾನುವಾರಗಳ ಪ್ರಾಣ ಹಾನಿಯಾಗಿದೆ, ಮನೆಗಳು ಬಿದ್ದಿವೆ. ಇಂತಹ ಸಮಯದಲ್ಲಿ ಸರ್ಕಾರ ಯುದ್ದೋಪಾದಿಯಲ್ಲಿ ಕೆಲಸ ಮಾಡುವ ಬದಲು ಸಿಎಂ ಬದಲಾವಣೆ ಮಾಡುವ ಕೆಲಸದಲ್ಲಿ ಮುಳುಗಿದೆ’ ಅಂತಾ ಕುಟುಕಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News