ಬೆಂಗಳೂರು: ವಲಸಿಗ ಸಚಿವರು ನಮ್ಮ ಪಕ್ಷಕ್ಕೆ ಬರುತ್ತಾರೋ, ಇಲ್ಲವೋ ಗೊತ್ತಿಲ್ಲ. ಅವರು ಬಂದರೂ ನಾವು ವಾಪಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವಲಸಿಗ ಸಚಿವರನ್ನು ಮತ್ತೆ ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.


BS Yediyurappa) ರಾಜೀನಾಮೆ ಹಗ್ಗಜಗ್ಗಾಟದ ಬೆನ್ನಲ್ಲೇ ವಲಸಿಗ ಸಚಿವರು ಕೂಡ ರಾಜೀನಾಮೆ ನೀಡುತ್ತಾರೆಂಬ ಮಾತುಗಳು ಕೇಳಿಬಂದಿದ್ದವು. ಒಂದು ವೇಳೆ ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪನವರು ರಾಜೀನಾಮೆ ನೀಡಿದರೆ ತಾವೆಲ್ಲಿ ತಮ್ಮ ಸಚಿವ ಸ್ಥಾನ ಕಳೆದುಕೊಳ್ಳುತ್ತೇವೋ ಎಂಬ ಆತಂಕ ವಲಸಿಗರಲ್ಲಿ ಮೂಡಿದೆ. ಹೀಗಾಗಿ ಕೆಲ ವಲಸಿಗ ಸಚಿವರು ರಾಜೀನಾಮೆ ನೀಡಿ ಸ್ವಪಕ್ಷಕ್ಕೆ ಸೇರಿಕೊಳ್ಳಲು ಸಜ್ಜಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.  


COMMERCIAL BREAK
SCROLL TO CONTINUE READING

ಇದನ್ನೂ ಓದಿ:  OMG: ಹಸುವಿನ ಹೊಟ್ಟೆಯಲ್ಲಿತ್ತು ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ..!


‘ವಲಸಿಗ ಸಚಿವರು ನಮ್ಮ‌ ಪಕ್ಷಕ್ಕೆ ಬರುತ್ತಾರೋ, ಇಲ್ಲವೋ ಎನ್ನುವುದು ನನಗಂತೂ ಗೊತ್ತಿಲ್ಲ. ಪಕ್ಷಕ್ಕೆ ಅವರನ್ನು ವಾಪಾಸು ಸೇರಿಸಿಕೊಳ್ಳುವುದಿಲ್ಲ ಎಂದು ಈ ಹಿಂದೆ ಸದನದಲ್ಲೇ ಹೇಳಿದ್ದೇನೆ. ಅದಕ್ಕೆ ನಾನು ಈಗಲೂ ಬದ್ಧನಿದ್ದೇನೆ’ ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ‘ದಲಿತರ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ನೈಜ ಕಾಳಜಿ ಇದ್ದರೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ದಲಿತರನ್ನೇ ಮುಖ್ಯಮಂತ್ರಿ ಮಾಡಲಿ. ಇದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ನನ್ನ ಸವಾಲು’ ಎಂದು ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.  


ಬಿ.ಎಸ್.ಯಡಿಯೂರಪ್ಪ ಬದಲಾದರೆ ಬಿಜೆಪಿಗೆ ದೊಡ್ಡ ಹೊಡೆತ: ಮಠಾಧಿಪತಿಗಳ ಖಡಕ್ ಎಚ್ಚರಿಕೆ..!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ