ಬೆಂಗಳೂರು : ಹೀನಾಯ ಸೋಲಿನ ಬಳಿಕ ಬಿಜೆಪಿ ಇಂದು ಆತ್ಮವಲೋಕನ ಸಭೆಯನ್ನು ನಡೆಸಲಿದೆ. ಗೆದ್ದ-ಸೋತ ಅಭ್ಯರ್ಥಿಗಳ ಜೊತೆ ಸಮಾಲೋಚನೆ ನಡೆಸಿದ ಬಳಿಕ ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ಸೇರಲಿದೆ. ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕನ ಹೆಸರು ಫೈನಲ್ ಆಗಲಿದೆ. ಜೊತೆಗೆ ರಾಜ್ಯಾಧ್ಯಕ್ಷ ಕೂಡಾ ಬದಲಾಗುವ ಸಂಭವವಿದೆ ಎಂದು ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ಇಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಸೋತ ಹಾಗೂ ಗೆದ್ದ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ನೂತನವಾಗಿ ಚುನಾಯಿತರಾದ ಬಿಜೆಪಿ ಶಾಸಕರ ಸಭೆ, ನಂತರ ಮಧ್ಯಾಹ್ನ 3.00 ಗಂಟೆಗೆ ಎಲ್ಲಾ ಸೋತ ಅಭ್ಯರ್ಥಿಗಳ ಸಭೆ ನಡೆಯಲಿದೆ. ಇದಾದ ಬಳಿಕ ಸಂಜೆ 6ಕ್ಕೆ ಕೋರ್ ಕಮಿಟಿ ಸಭೆ ನಡೆಯಲಿದ್ದು,ಈ ಸಂಧರ್ಭದಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆ ಬಗ್ಗೆ ಸಮಾಲೋಚನೆ ನಡೆಯಲಿದೆ. ಈ ಸಭೆಯಲ್ಲಿ  ಬಿಜೆಪಿ ರಾಜ್ಯ ಅಧ್ಯಕ್ಷ  ನಳಿನ್ ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ  ಬಿ.ಎಸ್. ಯಡಿಯೂರಪ್ಪ,  ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಪ್ರಭಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಮಾಜಿ ಸಚಿವ ಆರ್. ಅಶೋಕ್ ಅವರು ಭಾಗವಹಿಸಲಿದ್ದಾರೆ.


ಇದನ್ನೂ ಓದಿ : "ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡುತ್ತೇವೆ"


ಯಾರಾಗಲಿದ್ದಾರೆ ವಿರೋಧ ಪಕ್ಷದ ನಾಯಕ ?  :
ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪೇಶ್ವೆ ಬ್ರಾಹ್ಮಣ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹಲ್ಲಾದ್ ಜೋಶಿ ಹಾಗೂ ಬಿ ಎಲ್ ಸಂತೋಷ್ ಕಡೆ ಬೆಟ್ಟು ಮಾಡಿದ್ದರ  ಪರಿಣಾಮದ ಜೊತೆ ಲಿಂಗಾಯತ ಸಮುದಾಯದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಲಕ್ಷಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದು ಲಿಂಗಾಯತ ಸಮುದಾಯದ ಮತ ವಿಭಜನೆಯಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಲಿಂಗಾಯತ ಸಮುದಾಯದ ಮತ ಕ್ರೋಢೀಕರಿಸಬೇಕು ಎಂದು ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ನೀಡಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.


ಸ್ವತಃ ಮಾಜಿ ಸಿಎಂ ಬೊಮ್ಮಾಯಿಯವರೇ ವಿಪಕ್ಷ ಸ್ಥಾನ ನಿರಾಕರಿಸಿರುವ ಹಿನ್ನೆಲೆಯಲ್ಲಿ ಶಾಸಕರಾದ ಅರವಿಂದ್ ಬೆಲ್ಲದ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ರೇಸ್ ನಲ್ಲಿ ಇದ್ದಾರೆ.  ಈ ಪೈಕಿ ಅರವಿಂದ್ ಬೆಲ್ಲದ್ ಬಗ್ಗೆ ಹೈ ಕಮಾಂಡ್ ಹೆಚ್ಚಿನ ಒಲವು ತೋರಿದೆ. 


ಇದನ್ನೂ ಓದಿ :  "ಕಾಂಗ್ರೆಸ್ ಆಕಾಶದಲ್ಲಿ ಇದೆ, ನಾವು ನೆಲದಲ್ಲಿ ಇದ್ದೇವೆ ಬಿಡಿ" : ಹೆಚ್.ಡಿ.ಕುಮಾರಸ್ವಾಮಿ


ರಾಜ್ಯಾಧ್ಯಕ್ಷ ರೇಸ್ ನಲ್ಲಿ ಯಾರು ಮುಂದು? : 
ಕರ್ನಾಟಕದಲ್ಲಿ ಒಕ್ಕಲಿಗ ಮತ್ತು ಲಿಂಗಾಯತ ಎರಡು ಪ್ರಬಲ ಸಮುದಾಯವೆಂದು ಅರಿತುಕೊಂಡ ಹೈ ಕಮಾಂಡ್
ಈ ಎರಡು ಸಮುದಾಯಕ್ಕೆ ಪ್ರಾಮುಖ್ಯತೆ ನೀಡಲು ನಿರ್ಧಾರ ಮಾಡಿದೆ.ಈ ಪೈಕಿ ಒಕ್ಕಲಿಗ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ಎಂದು ಹೈಕಮಾಂಡ್ ರಾಜ್ಯ ನಾಯಕರಿಗೆ ಮಾಹಿತಿ ತಿಳಿಸಿದೆ.


ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅಥವಾ ಆರ್.ಅಶೋಕ್ ಗೆ ಬಹುತೇಕ ರಾಜ್ಯಾಧ್ಯಕ್ಷ ಹುದ್ದೆ ಎನ್ನಲಾಗುತ್ತಿದೆ. ಮುಂದಿನ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬಂದಿರುವ ಕೇಂದ್ರ ಬಿಜೆಪಿ ನಾಯಕರು, ಜಾತಿ ಲೆಕ್ಕಾಚಾರದ ಮೂಲಕ ಪ್ರಬಲ ಹುದ್ದೆಗಳನ್ನು ನೀಡಲು ನಿರ್ಧಾರ ಮಾಡಿದೆ.


 
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.