ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ಈ ಸೋಲಿನ ಹೊಣೆ ಯಾರದ್ದು ಬಿಜೆಪಿ? ಅಮಿತ್ ಷಾ ಅವರದ್ದೋ? ಬಸವರಾಜ್ ಬೊಮ್ಮಾಯಿಯವರದ್ದೋ? ಪ್ರಧಾನಿ ಮೋದಿಯವರದ್ದೋ? ಅಥವಾ ನಳೀನ್ ಕುಮಾರ್ ಕಟೀಲರದ್ದೋ? ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?!’ ಎಂದು ಟೀಕಿಸಿದೆ.
ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!?
ಸೋಲಿನ ಹೊಣೆ ಯಾರದ್ದು @BJPKarnataka ?
ಅಮಿತ್ ಷಾಅವರದ್ದೋ?
ಬೊಮ್ಮಾಯಿಯವರದ್ದೋ?
ಮೋದಿಯವರದ್ದೋ ?
ನಳಿನ್ ಕಟೀಲರದ್ದೋ?ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?!
— Karnataka Congress (@INCKarnataka) May 25, 2023
ಇದನ್ನೂ ಓದಿ: ಅಶೋಕ್ ಪಟ್ಟಣ್ ಮತ್ತು ಸಚಿವ ಸ್ಥಾನದ ಆಕಾಂಕ್ಷಿಗಳ ದಂಡು
‘ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ಬಿಜೆಪಿ ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ 'ವಿರೋಧ ಪಕ್ಷದ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿದ್ದಾರೆ. ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ಇದೀಗ ಅವುಗಳನ್ನು ಜಾರಿಗೊಳಿಸಲು ಷರತ್ತು ವಿಧಿಸುತ್ತಿದೆ. ಇದು ಯಾವ ನ್ಯಾಯ, ಕಾಂಗ್ರೆಸ್‍ನವರದ್ದು ಬರೀ ಹೆಸರಿಗಷ್ಟೇ ನುಡಿದಂತೆ ನಡೆಯುವ ಸರ್ಕಾರ. ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ರಾಜ್ಯದ ಜನರಿಗೆ ನೀಡಿರುವ ಗ್ಯಾರಂಟಿಗಳನ್ನು ಜಾರಿಗೆ ತರಲೇಬೇಕೆಂದು ಬಿಜೆಪಿ ಆಗ್ರಹಿಸಿದೆ.
ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ.
ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ.@BJPKarnataka ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ 'ವಿರೋಧಪಕ್ಷದ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ.— Karnataka Congress (@INCKarnataka) May 25, 2023
ಇದನ್ನೂ ಓದಿ: ಹೈಕಮಾಂಡ್ ಅಂಗಳದಲ್ಲಿ ಕಾಂಗ್ರೆಸ್ ಮಂತ್ರಿಗಿರಿ ಲೆಕ್ಕಾಚಾರ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.