ಬೆಂಗಳೂರು: ಕಾವೇರಿ ನೀರು ವಿಚಾರವಾಗಿ ನಡೆಯುತ್ತಿರುವ ಹೋರಾಟಗಳ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಉತ್ತರಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು:


COMMERCIAL BREAK
SCROLL TO CONTINUE READING

“ಕಾವೇರಿ ಸಮಸ್ಯೆಗೆ ಮೇಕೆದಾಟು ಯೋಜನೆ ಒಂದೇ ಪರಿಹಾರ. ರಾಜಕಾರಣ ಮಾಡುವುದರಲ್ಲಿ ಪ್ರಯೋಜನ ಇಲ್ಲ. ಕಾವೇರಿ ನದಿ ನೀರಿನ ವಿಚಾರವಾಗಿ ಮಾತನಾಡುತ್ತಿರುವ ಈ ಸಂಘಟನೆಗಳಾಗಲಿ, ಬಿಜೆಪಿ, ಜನತಾ ದಳದ ನಾಯಕರುಗಳಾಗಲಿ ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರ್ಕಾರವನ್ನು ಏಕೆ ಆಗ್ರಹಿಸುತ್ತಿಲ್ಲ? ಪರಿಸರ ಇಲಾಖೆಯಿಂದ ಅನುಮತಿ ಯಾಕೆ ಕೊಡಿಸುತ್ತಿಲ್ಲ? ಈಗ ಹೋರಾಟ ಮಾಡುತ್ತಿರುವವರು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಲ್ಲವೇ?


ನಮ್ಮ ರೈತರ ಹಿತ ಕಾಯಲು ನಾವು ಬದ್ಧರಾಗಿದ್ದೇವೆ. ಅದೇ ಕಾರಣಕ್ಕೆ ತಮಿಳುನಾಡಿನವರು ನಿತ್ಯ 24 ಸಾವಿರ ಕ್ಯೂಸೆಕ್ ನೀರು ಕೇಳಿದ್ದರು. 3 ಸಾವಿರ ಕ್ಯೂಸೆಕ್ ಮಾತ್ರ ಬಿಡಲು ಸಾಧ್ಯ ಎಂದು ನಮ್ಮ ಅಧಿಕಾರಿಗಳು ಸಮರ್ಥವಾಗಿ ವಾದ ಮಾಡಿದರ ಪರಿಣಾಮ ಈಗ ಪ್ರಾಧಿಕಾರ 5 ಸಾವಿರ ಕ್ಯೂಸೆಕ್ ನೀರು ಬಿಡಲು ಅದೇಶಿಸಿದೆ.


ಇದನ್ನೂ ಓದಿ-ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಮಗನಿಗೆ ಗನ್ ಮ್ಯಾನ್ ಆಗಿದ್ದ ವ್ಯಕ್ತಿಯಿಂದ ಫೈರಿಂಗ್


ನ್ಯಾಯಾಲಯದಲ್ಲೂ ರಾಜ್ಯದ ಹಿತರಕ್ಷಣೆಗೆ ಹೋರಾಟ ಮಾಡಲು ನಾವು ಬದ್ಧರಾಗಿದ್ದೇವೆ. ಈ ವಿಚಾರವಾಗಿ ನಾನು ಕಾನೂನು ತಜ್ಞರ ತಂಡದ ಜತೆ ಚರ್ಚೆ ಮಾಡಿದ್ದೇನೆ. ನಮ್ಮ ಆಣೆಕಟ್ಟುಗಳ ವಾಸ್ತವ ಸ್ಥಿತಿ ಹೇಗಿದೆ ಎಂದು ಅವರಿಗೆ ಮನವರಿಕೆ ಮಾಡಲಿದ್ದೇವೆ.


ರಾಜ್ಯದಲ್ಲಿ ಬರದ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಈ ವಿಚಾರವಾಗಿ ಸಚಿವರು ಸಮೀಕ್ಷೆ ಮಾಡಿ, ವರದಿ ಚರ್ಚೆ ಮಂಡಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ಸಚಿವರು ಉತ್ತರ ನೀಡುತ್ತಾರೆ” ಎಂದು ತಿಳಿಸಿದರು.


ಕಾಂಗ್ರೆಸ್ ಸರ್ಕಾರ ಬ್ಲಾಕ್ ಮೇಲ್ ಮಾಡಿ ಶಾಸಕರನ್ನು ಸೆಳೆಯುತ್ತಿದ್ದಾರೆ ಎಂಬ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಹೇಳಿಕೆ ಬಗ್ಗೆ ಕೇಳಿದಾಗ, “ಬ್ಲಾಕ್ ಮೇಲ್ ಸಂಸ್ಕೃತಿ ಬಗ್ಗೆ "ನವರಂಗಿ ನಾರಾಯಣ" ಮಾತನಾಡಿದ್ದಾರೆ. ಅದಕ್ಕೆ ನಮ್ಮ ಎಂ.ಬಿ. ಪಾಟೀಲರು ಸರಿಯಾಗಿ ಉತ್ತರ ನೀಡಿದ್ದಾರೆ” ಎಂದು ತಿಳಿಸಿದರು.


ಇದನ್ನೂ ಓದಿ-ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ : ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.