"ಅವರ ಬಗ್ಗೆ ವ್ಯಂಗ್ಯಚಿತ್ರಗಳು ಬಂದಾಗ ಯಾಕೆ ದೂರು ನೀಡಲಿಲ್ಲ? "

ಅವರ ಬಗ್ಗೆ ವ್ಯಂಗ್ಯಚಿತ್ರಗಳು ಬಂದಾಗ ಯಾಕೆ ದೂರು ನೀಡಲಿಲ್ಲ? ಇದರಲ್ಲಿ ತಪ್ಪೇನು? ಸಾರ್ವಜನಿಕ ಜೀವನದಲ್ಲಿ ಇರುವಾಗ ಇದನ್ನು ಸ್ವೀಕರಿಸಬೇಕು 'ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

Written by - Zee Kannada News Desk | Last Updated : Sep 21, 2022, 10:21 PM IST
  • ಅವರ ಬಗ್ಗೆ ವ್ಯಂಗ್ಯಚಿತ್ರಗಳು ಬಂದಾಗ ಯಾಕೆ ದೂರು ನೀಡಲಿಲ್ಲ? ಇದರಲ್ಲಿ ತಪ್ಪೇನು? ಸಾರ್ವಜನಿಕ ಜೀವನದಲ್ಲಿ ಇರುವಾಗ ಇದನ್ನು ಸ್ವೀಕರಿಸಬೇಕು 'ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
"ಅವರ ಬಗ್ಗೆ ವ್ಯಂಗ್ಯಚಿತ್ರಗಳು ಬಂದಾಗ ಯಾಕೆ ದೂರು ನೀಡಲಿಲ್ಲ? " title=

ಬೆಂಗಳೂರು: ಅವರ ಬಗ್ಗೆ ವ್ಯಂಗ್ಯಚಿತ್ರಗಳು ಬಂದಾಗ ಯಾಕೆ ದೂರು ನೀಡಲಿಲ್ಲ? ಇದರಲ್ಲಿ ತಪ್ಪೇನು? ಸಾರ್ವಜನಿಕ ಜೀವನದಲ್ಲಿ ಇರುವಾಗ ಇದನ್ನು ಸ್ವೀಕರಿಸಬೇಕು 'ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ನಾಡಿದ್ದು ಬೆಳಗ್ಗೆ ಯಾತ್ರೆಯ ಎಲ್ಲಾ ಸಮಿತಿ ಅಧ್ಯಕ್ಷರನ್ನು ರಾಷ್ಟ್ರೀಯ ನಾಯಕರಾದ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅವರು ಭೇಟಿ ಮಾಡಿ ಸಭೆ ನಡೆಸಲಿದ್ದಾರೆ. ಯಾತ್ರೆಯ ತಯಾರಿ ಕುರಿತು ಈ ಸಭೆಯಲ್ಲಿ ಪರಿಶೀಲನೆ ನಡೆಸಲಿದ್ದಾರೆ. ನಂತರ ಸುರ್ಜೇವಾಲ ಅವರು ಗುಂಡ್ಲುಪೇಟೆಯಿಂದ ರಾಯಚೂರಿನವರೆಗೆ ಯಾತ್ರೆಯ ಮಾರ್ಗದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ತಯಾರಿ ಕುರಿತು ಪರಿಶೀಲನೆ ಮಾಡಲಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ಭಾರತೀಯ ಸೇನೆಯಲ್ಲಿ ಬಂಪರ್ ನೇಮಕಾತಿ, ತಿಂಗಳಿಗೆ 63,200 ವರೆಗೆ ವೇತನ

ಮುಖ್ಯಮಂತ್ರಿಗಳ ವಿರುದ್ಧ ಕಾಂಗ್ರೆಸ್ ಅಭಿಯಾನ ಕುರಿತು ಕೇಳಿದ ಪ್ರಶ್ನೆಗೆ, ' ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರನ್ನು ನಿದ್ರಾಮಯ್ಯ ಎಂದು ಲೇವಡಿ ಮಾಡುತ್ತಿದ್ದರು. ನನ್ನನ್ನು ಕೊತ್ವಾಲ್ ರಾಮಚಂದ್ರನ ಶಿಷ್ಯ ಎಂದು ಕರೆಯುತ್ತಾರೆ. ರಾಜಕಾರಣದಲ್ಲಿ ಅಧಿಕಾರದಲ್ಲಿರುವವರು ಇವೆಲ್ಲವನ್ನೂ ಅರಗಿಸಿಕೊಳ್ಳಬೇಕು. ಈ ಸರ್ಕಾರ 40% ಕಮಿಷನ್ ಸರ್ಕಾರ ಎಂದು ನಾವು ಆರೋಪ ಮಾಡಿದ್ದೇವಾ? ಅಧಿಕಾರದಲ್ಲಿರುವವರು ಹಾಗೂ ಜವಾಬ್ದಾರಿ ಹೊತ್ತಿರುವವರ ಕಡೆ ಬೆಟ್ಟು ಮಾಡುವುದು ಸಹಜ. ವ್ಯಂಗಚಿತ್ರಗಳಲ್ಲಿ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳನ್ನು ಕ್ರಿಯಾತ್ಮಕ ರೀತಿಯಲ್ಲಿ ಲೇವಡಿ ಮಾಡುತ್ತಾರೆ. ಭ್ರಷ್ಟಾಚಾರ ವಿಚಾರವಾಗಿ ಬೊಮ್ಮಾಯಿ ಅವರ ಸರ್ಕಾರದ ವಿರುದ್ಧ ವಿವಿಧ ರೀತಿಯಲ್ಲಿ ಪ್ರಶ್ನಿಸಲಾಗಿದೆ. ವಿವಿಧ ರೀತಿಯಲ್ಲಿ ಜನರಿಗೂ ಈ ವಿಚಾರ ಮುಟ್ಟಿಸಬೇಕಾಗುತ್ತದೆ. ಹೀಗಾಗಿ ಈ ರೀತಿ ಮಾಡಲಾಗಿದೆ. ಇದರಲ್ಲಿ ಯಾವುದೇ ತಪ್ಪಿಲ್ಲ. ಇದು ಆರೋಗ್ಯಕರ ರಾಜಕೀಯ' ಎಂದು ತಿಳಿಸಿದರು.

ಇದನ್ನೂ ಓದಿ : BSF Recruitment 2022 : BSF ನಲ್ಲಿ 1312 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ : ಇಲ್ಲದೆ ಸಂಪೂರ್ಣ ಮಾಹಿತಿ

ಇದರ ವಿರುದ್ಧ ದೂರು ನೀಡಿ ಕ್ರಮ ಕೈಗೊಳ್ಳುತ್ತೇವೆ ಎಂಬ ಸಿಎಂ ಹೇಳಿಕೆ ಬಗ್ಗೆ ಕೇಳಿದಾಗ, ' ಅವರು ದೂರು ನೀಡಲಿ. ಅವರ ಬಗ್ಗೆ ವ್ಯಂಗ್ಯಚಿತ್ರಗಳು ಬಂದಾಗ ಯಾಕೆ ದೂರು ನೀಡಲಿಲ್ಲ? ಇದರಲ್ಲಿ ತಪ್ಪೇನು? ಸಾರ್ವಜನಿಕ ಜೀವನದಲ್ಲಿ ಇರುವಾಗ ಇದನ್ನು ಸ್ವೀಕರಿಸಬೇಕು ' ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News