ಅಧಿಕಾರಿಗಳ ತಪ್ಪಿಗೆ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು? ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಪ್ರತಿಪಕ್ಷಗಳಿಗೆ ಸದನದ ಕಲಾಪಗಳು ನಡಾವಳಿಗಳ ತಿಳುವಳಿಕೆಯಿಲ್ಲ. ಅವರಿಗೆ ನಾವು ಮಾತನಾಡಲು ಅವಕಾಶ ನೀಡಿದ್ದೇವೆ. ಮುಖ್ಯಮಂತ್ರಿಗಳಿಗೆ ಮಾತನಾಡಲು ಅವಕಾಶ ನೀಡಬೇಕಿತ್ತು ಆದರೆ ನೀಡಿಲ್ಲ. ಈ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿದ್ದು, ನಮಗೂ ರಾಜಕೀಯ ಮಾಡಲು ಬರುತ್ತದೆ" ಎಂದರು.

Written by - Prashobh Devanahalli | Last Updated : Jul 18, 2024, 09:39 PM IST
    • ಅಕ್ರಮ ಹಣ ವರ್ಗಾವಣೆಯಲ್ಲಿ ತಪ್ಪು ಮಾಡಿರುವುದು ಬ್ಯಾಂಕ್ ಮ್ಯಾನೇಜರ್.
    • ಇದಕ್ಕೆ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ಕೊಡಬೇಕು
    • ಡಿಸಿಎಂ ಡಿ. ಕೆ. ಶಿವಕುಮಾರ್ ಖಾರವಾಗಿ ಪ್ರಶ್ನಿಸಿದರು
ಅಧಿಕಾರಿಗಳ ತಪ್ಪಿಗೆ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು? ಡಿಸಿಎಂ ಡಿಕೆ ಶಿವಕುಮಾರ್ title=
File Photo

ಬೆಂಗಳೂರು: "ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆಯಲ್ಲಿ ತಪ್ಪು ಮಾಡಿರುವುದು ಬ್ಯಾಂಕ್ ಮ್ಯಾನೇಜರ್. ಇದಕ್ಕೆ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ಕೊಡಬೇಕು" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಖಾರವಾಗಿ ಪ್ರಶ್ನಿಸಿದರು.

ಇದನ್ನೂ ಓದಿ: ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆಗೆ ಬಲವಂತವಾಗಿ ಕಿಸ್‌ ಮಾಡಿದ ಖ್ಯಾತ ನಿರ್ದೇಶಕ! ಸೆನ್ಸೇಷನಲ್‌ ವಿಡಿಯೋ ವೈರಲ್

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು "ಹಗರಣಕ್ಕೂ ಸಿದ್ದರಾಮಯ್ಯ ಅವರಿಗೂ ಏನು ಸಂಬಂಧವಿದೆ? ಅಧಿಕಾರಿ ತಪ್ಪು ಮಾಡಿದರೆ ಮುಖ್ಯಮಂತ್ರಿಗಳು ಜವಾಬ್ದಾರರಾಗುತ್ತಾರೆಯೇ? ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಆರೋಪಿಗಳಿಗೆ ಸಾಲ ಮಂಜೂರು ಮಾಡಿದ್ದಾರೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ?" ಎಂದು ಖಡಕ್ಕಾಗಿ ಉತ್ತರಿಸಿದರು.

ಪ್ರತಿಪಕ್ಷಗಳಿಗೆ ಸದನದ ಕಲಾಪಗಳು ನಡಾವಳಿಗಳ ತಿಳುವಳಿಕೆಯಿಲ್ಲ. ಅವರಿಗೆ ನಾವು ಮಾತನಾಡಲು ಅವಕಾಶ ನೀಡಿದ್ದೇವೆ. ಮುಖ್ಯಮಂತ್ರಿಗಳಿಗೆ ಮಾತನಾಡಲು ಅವಕಾಶ ನೀಡಬೇಕಿತ್ತು ಆದರೆ ನೀಡಿಲ್ಲ. ಈ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿದ್ದು, ನಮಗೂ ರಾಜಕೀಯ ಮಾಡಲು ಬರುತ್ತದೆ" ಎಂದರು.

ನಾವು ಯಾವುದೇ ತಪ್ಪು ಮಾಡಿಲ್ಲ, ಸರ್ಕಾರ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಕೆಲವು ಅಧಿಕಾರಿಗಳು ತಪ್ಪು ಮಾಡಿದ್ದು, ಇದನ್ನು ರಾಜಕೀಯವಾಗಿ ನಮ್ಮ ವಿರುದ್ಧ ಬಳಸಿಕೊಳ್ಳುತ್ತಿದ್ದಾರೆ. ಎಸ್ ಐಟಿ ರಚನೆ ಮಾಡಿದ್ದೇವೆ. ಇಡಿ, ಸಿಬಿಐನಿಂದ ತನಿಖೆ ನಡೆಸಲಾಗುತ್ತಿದೆ" ಎಂದು ಹೇಳಿದರು.

ಇದನ್ನೂ ಓದಿ: ಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಊಹೆಗೂ ಸಿಗದ ಆಟಗಾರನಿಗೆ ನಾಯಕತ್ವ ಹಸ್ತಾಂತರ

ಅಧಿಕಾರಗಳು ಮಾಡಿದ ತಪ್ಪಿಗೆ ಮುಖ್ಯಮಂತ್ರಿಗಳನ್ನು ಗುರಿ ಮಾಡುವುದು ತಪ್ಪು. ದೊಡ್ಡ ಕಾರ್ಪೋರೇಟ್ ಕಂಪನಿಯಲ್ಲಿ ಯಾರೋ ನೌಕರ ಕ್ರಿಮಿನಲ್ ತಪ್ಪು ಮಾಡುತ್ತಾನೆ, ಅದಕ್ಕೆ ಕಂಪನಿಯ ಮುಖ್ಯಸ್ಥನನ್ನು ಗುರಿ ಮಾಡಲು ಆಗುತ್ತದೆಯೇ?" ಎಂದು ತಿರುಗೇಟು ನೀಡಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News