ಪ್ರಜ್ವಲ್ ವಿರುದ್ಧ ತಕ್ಷಣ ಏಕೆ FIR ಹಾಕಲಿಲ್ಲ? ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Prajwal Revanna Pen Drive Case: ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರುತ್ತಾರೆಂಬುದು ಕೇಂದ್ರಕ್ಕೆ ಕನಸು ಬೀಳುತ್ತದೆಯೇ? ರಾಜ್ಯ ಸರ್ಕಾರ ತನ್ನ ತಪ್ಪನ್ನು ಕೇಂದ್ರದ ಮೇಲೆ ಹಾಕಲು ನೋಡುತ್ತಿದೆ ಎಂದು ಜೋಶಿ ಹೇಳಿದರು.
Prajwal Revanna Pen Drive Case: ರೇವಣ್ಣ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದವಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Union Minister Pralhad Joshi) ಹೇಳಿದರು.
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಕಾಂಗ್ರೆಸ್ ಅತ್ಯಂತ ಬೇಜವಾಬ್ದಾರಿ ಆರೋಪ ಮಾಡುತ್ತಿದೆ ಎಂದು ಪ್ರತಿಕ್ರಿಯಿಸಿದರು.
ಪ್ರಜ್ವಲ್ ರೇವಣ್ಣ, ಎಫ್‌ಐಆರ್ (FIR) ಆಗುವ ಮೊದಲೇ ಹೋಗಿದ್ದಾರೆ. ರಾಜ್ಯ ಪೊಲೀಸರು ತಕ್ಷಣವೇ ಎಫ್ಐಆರ್ ಹಾಕಬೇಕಿತ್ತು. ಹೋಗಲು ಏಕೆ ಬಿಟ್ಟರು? ಎಂದು ಪ್ರಹ್ಲಾದ್ ಜೋಶಿ ಪ್ರಶ್ನಿಸಿದರು.
ಇದನ್ನೂ ಓದಿ- Hassan Pen Drive Case: ರೇವಣ್ಣ ಕುಟುಂಬವೇ ಬೇರೆ ನಮ್ಮ ಕುಟುಂಬವೇ ಬೇರೆ ಎಂದ ಕುಮಾರಸ್ವಾಮಿ!
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರುತ್ತಾರೆಂಬುದು ಕೇಂದ್ರಕ್ಕೆ ಕನಸು ಬೀಳುತ್ತದೆಯೇ? ರಾಜ್ಯ ಸರ್ಕಾರ ತನ್ನ ತಪ್ಪನ್ನು ಕೇಂದ್ರದ ಮೇಲೆ ಹಾಕಲು ನೋಡುತ್ತಿದೆ ಎಂದು ಜೋಶಿ ಹೇಳಿದರು.
ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿ ಬಂದ ತತ್ ಕ್ಷಣವೇ ರಾಜ್ಯ ಪೊಲೀಸರು ಏಕೆ ಎಫ್‌ಐಆರ್ ಹಾಕಲಿಲ್ಲ? ಎಂದು ಪ್ರಹ್ಲಾದ್ ಜೋಶಿ ಪ್ರಶ್ನಿಸಿದರು.
ಉಚ್ಚಾಟನೆಗೆ ನಮ್ಮ ವಿರೋಧವಿಲ್ಲ:
ಜೆಡಿಎಸ್ ಒಂದು ಸ್ವತಂತ್ರ ಪಕ್ಷ. ಆಗಲೇ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟಿಸಿದೆ. ಆ ಪಕ್ಷ ಕೈಗೊಂಡಿರುವ ಕ್ರಮಕ್ಕೆ ಬಿಜಿಪಿಯ ವಿರೋಧವಿಲ್ಲ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು.
ಇನ್ನು, ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಆಗಲೇ "ಉಪ್ಪು ತಿಂದವರು ನೀರು ಕುಡಿಯಬೇಕು" ಎಂದು ಹೇಳಿದ್ದಾರೆ. ಜೆಡಿಎಸ್ ಆಗಲಿ, ಬಿಜೆಪಿಯಾಗಲಿ ಪ್ರಜ್ವಲ್ ಉಚ್ಚಾಟನೆಗೆ ವಿರೋಧ ವ್ಯಕ್ತಪಡಿಸಿಲ್ಲ ಎಂದು ಹೇಳಿದರು.
ಇದನ್ನೂ ಓದಿ- ಪೆನ್ ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ-NDA ನಿಲುವೇನು? ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ
ಕಾಂಗ್ರೆಸ್ ಬೇಜವಾಬ್ದಾರಿ ಆರೋಪ:
ಪ್ರಜ್ವಲ್ ರೇವಣ್ಣ ತಲೆ ಮರೆಸಿಕೊಳ್ಳಲು ಬಿಜೆಪಿ ಸಹಾಯ ಮಾಡಿದೆ ಎಂಬ ಆರೋಪ ಕಾಂಗ್ರೆಸ್ಸಿನ ಬೇಜವಾಬ್ದಾರಿತನದ್ದು ಎಂದು ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.
ಸ್ವಲ್ಪ ಬುದ್ಧಿ, ಜ್ಞಾನ ಇರಲಿ:
ಯಾರೇ ಆಗಲಿ ಆರೋಪ ಮಾಡುವಾಗ ಬುದ್ಧಿ, ಜ್ಞಾನ ಇಟ್ಟುಕೊಳ್ಳಬೇಕು. ದುರುದ್ದೇಶದಿಂದ ಕೂಡಿರಬಾರದು ಎಂದು ಜೋಶಿ ಕಾಂಗ್ರೆಸ್ಸಿಗರಿಗೆ ತಿರುಗೇಟು ನೀಡಿದರು.
ಪ್ರಜ್ವಲ್ ರೇವಣ್ಣ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಎಂಬ ಕಾರಣಕ್ಕೆ ಪ್ರಕರಣ ಸೆನ್ಸಿಟಿವ್ ಆಗಿದೆ. ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ ಎಂದು ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.