ಬೆಂಗಳೂರು: ಬಿಜೆಪಿ ಹಾಗೂ ಆರೆಸೆಸ್ಸ್ ವಿರುದ್ಧ ಟೀಕಾ ಪ್ರಹಾರ ಮುಂದುವರೆಸಿರುವ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ 'ಹಿಂದುಗಳೆಲ್ಲ ಒಂದು ಎನ್ನುವ ನಿಮ್ಮ ಸಂಘದ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ?' ಎಂದು ಪ್ರಶ್ನಿಸಿದ್ದಾರೆ.ಆರ್.ಎಸ್.ಎಸ್ ನಲ್ಲಿ ಉತ್ತರ ಇಲ್ಲ ಎನ್ನುವುದೇ ಈ ಸಂಘಟನೆಯ ಡೋಂಗಿತನಕ್ಕೆ ಸಾಕ್ಷಿ" ಎಂದು ಅವರು ಕುಟುಕಿದ್ದಾರೆ.


COMMERCIAL BREAK
SCROLL TO CONTINUE READING

'ನನ್ನ ಸರಳ ಪ್ರಶ್ನೆಗೆ ಉತ್ತರಿಸಲಾಗದ ಆರ್.ಎಸ್.ಎಸ್, ಬಿಜೆಪಿಯ ಕೂಗುಮಾರಿಗಳನ್ನು ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಲು ಛೂ ಬಿಟ್ಟಿದೆ. 97 ವರ್ಷಗಳ ಇತಿಹಾಸವಿರುವ ಆರ್.ಎಸ್.ಎಸ್ ನನ್ನದೊಂದು ಸರಳ ಪ್ರಶ್ನೆಗೆ ಉತ್ತರಿಸಲಾಗದಷ್ಟು ದುರ್ಬಲ ಸಂಘಟನೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ : Type 2 Diabetes: ಈ ಬೆಳಗಿನ ಪಾನೀಯ ಟೈಪ್ 2 ಡಯಾಬಿಟಿಸ್ ರೋಗಿಗಳಿಗೆ ರಾಮಬಾಣವಿದ್ದಂತೆ!


ಬಿಜೆಪಿಯ ಒಬ್ಬ ನಾಯಕರು ಆರ್.ಎಸ್.ಎಸ್ ಶಾಖೆಗೆ ಬನ್ನಿ ಎಂದು ಕರೆಯುತ್ತಿದ್ದಾರೆ, ಇನ್ನೊಬ್ಬರು ಆರ್.ಎಸ್.ಎಸ್ ಪುಸ್ತಕ ಓದಿ ಎಂದು ಸಲಹೆ ನೀಡಿದ್ದಾರೆ. ಅಲ್ಲಿಗೆ ಹೋಗಿ, ಓದಿ ಏನನ್ನು ಕಲಿಯುವುದು? 40% ಕಮಿಷನ್ ಹೊಡೆಯುವುದಾ? ದುಡ್ಡು ಪಡೆದು ಪಕ್ಷಾಂತರ ಮಾಡುವುದಾ? ಎಂದು ಅವರು ಪ್ರಶ್ನಿಸಿದ್ದಾರೆ.


'ನನ್ನ ಮೇಲೆ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ನಾಯಕರ ಮಾತುಗಳೇ, ಆರ್.ಎಸ್.ಎಸ್ ತನ್ನ ಸ್ವಯಂಸೇವಕರಿಗೆ ಕಲಿಸಿಕೊಡುವ ಸಂಸ್ಕಾರ- ಸಂಸ್ಕೃತಿ ಏನು ಎನ್ನುವುದನ್ನು ಸೂಚಿಸುತ್ತದೆ.ಆರ್.ಎಸ್.ಎಸ್ ಶಾಖೆಗಳಿಗೆ ಹೋದರೆ ಏನಾಗುತ್ತದೆ ಎನ್ನುವುದಕ್ಕೆ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೇ ಜೀವಂತ ಉದಾಹರಣೆ' ಎಂದು ಅವರು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ : ಈ ಅನ್ನವನ್ನು ಸೇವಿಸುವುದರಿಂದ ಹೆಚ್ಚುವುದಿಲ್ಲ ದೇಹ ತೂಕ .! ಕರಗುತ್ತದೆ belly fat


ಸಂಸ್ಕೃತಿ, ಸಂಸ್ಕಾರ, ಸಚ್ಛಾರಿತ್ರ್ಯದಂತಹ ಮೌಲ್ಯಗಳಿಗೂ, ನಿತ್ಯ ಶಬ್ದಭೇದಿ ಮಾಡುತ್ತಿರುವ ಕಟೀಲ್ ಅವರಿಗೂ ಏನಾದರೂ ಸಂಬಂಧವಿದೆಯೇ?  ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗೌರವಾನ್ವಿತ ನಾಯಕರಲ್ಲಿ ಮತ್ತೊಮ್ಮೆ ಮನವಿ ಮಾಡುತ್ತಿದ್ದೇನೆ. ಹಿಂದುಗಳೆಲ್ಲ ಒಂದು ಎನ್ನುವ ನಿಮ್ಮ ಸಂಘದ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಉಳಿದ ಜಾತಿಗಳು ಯಾಕೆ ಅಸ್ಪೃಶ್ಯವಾಗಿವೆ? ದಯವಿಟ್ಟು ಉತ್ತರಿಸಿ' ಎಂದು ಅವರು ಸವಾಲು ಹಾಕಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.