ರಾಮನಗರ/ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಚನ್ನಪಟ್ಟಣ ಕ್ಷೇತ್ರದ ವಿರೂಪಸಂದ್ರ ಗ್ರಾಮದಲ್ಲಿ ಮಾವಿನ ತೋಟ ಕಾಯುತ್ತಿದ್ದ ವೀರಭದ್ರಯ್ಯ ಅವರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಎಚ್ಡಿಕೆ, ಕಾಡಂಚಿನಲ್ಲಿ ರೈತರು ಆತಂಕ, ಭಯದಿಂದ ಬದುಕುವಂತಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು. ವೈಜ್ಞಾನಿಕವಾಗಿ ಬೇಲಿ ನಿರ್ಮಾಣ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಅನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಇಬ್ಬರ ಬಂಧನ
ಅನೆ ದಾಳಿಯಿಂದ ರೈತ ವೀರಭದ್ರಯ್ಯ ಅವರು ಅಸುನೀಗಿದ ಸುದ್ದಿ ಕೇಳಿ ಬಹಳ ದುಃಖ ಉಂಟಾಯಿತು. ಮೃತ ರೈತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಆ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್ಡಿಕೆ ಸಂತಾಪ ಸೂಚಿಸಿದ್ದಾರೆ. ಅರಣ್ಯ ಸಂರಕ್ಷಣೆ ಜೊತೆಗೆ ಕಾಡಿನ ಅಕ್ಕಪಕ್ಕ ಬೇಸಾಯ ಮಾಡುವ ರೈತರ ಹಿತವೂ ಮುಖ್ಯ. ರೈತಾಪಿ ಜನರ ಜೀವ ಅಮೂಲ್ಯ. ಈ ಕಾರಣಕ್ಕಾಗಿ ಅರಣ್ಯ ವಲಯದಲ್ಲಿ ವೈಜ್ಞಾನಿಕ ಬೇಲಿ ನಿರ್ಮಾಣ ಮಾಡಬೇಕೆಂದು ನಾನು ಅನೇಕ ಸಲ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಈ ಬಗ್ಗೆ ವಿಳಂಬ ಮಾಡಬಾರದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣ ಮಾತ್ರವಲ್ಲದೆ, ರಾಮನಗರ ಜಿಲ್ಲೆಯ ನಾನಾ ಭಾಗಗಳಲ್ಲಿ ಜನರ ಮೇಲೆ ಕಾಡುಪ್ರಾಣಿಗಳು ದಾಳಿ ನಡೆಸುವ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಅರಣ್ಯ ಸಚಿವ ಈಶ್ವರ ಖಂಡ್ರೆಯವರು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎನ್ನುವುದು ನನ್ನ ಆಗ್ರಹ. ಸಚಿವರು ಈಗಾಗಲೇ ತಿಳಿಸಿರುವಂತೆ ಕೂಡಲೇ ನೊಂದ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ಹಸ್ತಾಂತರ ಮಾಡಬೇಕು. ಕಾಡಂಚಿನಲ್ಲಿ ಎಲ್ಲಾ ಸುರಕ್ಷಿತ ಕ್ರಮಗಳನ್ನು ವಹಿಸಿ ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಶಾಶ್ವತವಾಗಿ ತಡೆಯುವ ಎಲ್ಲಾ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಚ್ಡಿಕೆ ಹೇಳಿದ್ದಾರೆ.
ಇದನ್ನೂ ಓದಿ: ಒಡಿಶಾ ರೈಲು ದುರಂತ: 50 ಸಾವು, 300 ಜನರಿಗೆ ಗಾಯ, ಸಿಎಂ ಸಿದ್ದರಾಮಯ್ಯ ಸಂತಾಪ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.