ಬೆಂಗಳೂರು: ರಾಜ್ಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿರುವ ಟಿಪ್ಪು ಜಯಂತಿ ಆಚರಣೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬ್ರೇಕ್ ಹಾಕಲಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ರಾಜ್ಯದಲ್ಲಿ ಟಿಪ್ಪು ಜಯಂತಿಯನ್ನು ಸರಕಾರದ ವತಿಯಿಂದ ಆಚರಿಸಲು ನಿರ್ಧರಿಸಿದಾಗಿನಿಂದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಪರ-ವಿರೋಧ ಚರ್ಚೆಗಳು ದಿನನಿತ್ಯ ಕೇಳಿಬರುತ್ತಲೇ ಇವೆ. ಅಷ್ಟೇ ಅಲ್ಲದೆ, ರಾಜ್ಯಾದ್ಯಂತ ಹಲವು ಹಿಂದೂ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಗಲಭೆಗೆ ಕಾರಣವಾಗಿದೆ. ಕೊಡಗು ಜಿಲ್ಲೆಯಲ್ಲಂತೂ ಟಿಪ್ಪು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಭಾರೀ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೆ ಅಲ್ಲಿ ಪ್ರಕ್ಷುಬಧ ವಾತಾವರಣವೂ ನಿರ್ಮಾಣವಾಗಿತ್ತು.
ಹಾಗಾಗಿ ಕೇವಲ ಟಿಪ್ಪು ಜಯಂತಿ ಆಚರಣೆಯಿಂದ ಇಡೀ ರಾಜ್ಯದ ಶಾಂತಿ ಹದಗೆಡುತ್ತದೆ ಎನ್ನುವುದಾದರೆ ಅದನ್ನು ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಆಚರಿಸುವ ಕ್ರಮವನ್ನು ಕೈಬಿಡಲು ಸಿಎಂ ನಿರ್ಧರಿಸಿದ್ದಾರೆ ಎಂಬ ವದಂತಿ ಹಬ್ಬಿದೆ. ಆದರೆ ಈ ಬಗ್ಗೆ ಮುಸ್ಲಿಂ ಸಂಘಟನೆಗಳು ಏನು ಹೇಳುತ್ತವೆ ಎಂಬುದರ ಬಗ್ಗೆ ಮಾಹಿತಿ ದೊರೆತಿಲ್ಲ.