HSR ಲೇಔಟ್ ಮಳೆ ನೀರು ನುಗ್ಗುವ ಸಮಸ್ಯೆಗೆ ಈ ಬಾರಿಯಾದ್ರೂ ಸಿಗುತ್ತಾ ಪರಿಹಾರ??
ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳ ಜೊತೆ ಇಂದು ಪ್ರಗತಿ ಪರಿಶೀಲನೆ ನಡೆಸಿದರು.
ಬೆಂಗಳೂರು: ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳ ಜೊತೆ ಇಂದು ಪ್ರಗತಿ ಪರಿಶೀಲನೆ ನಡೆಸಿದರು.
ಸ್ಥಳೀಯ ನಾಗರಿಕರು ಮುಖ್ಯ ಆಯುಕ್ತರನ್ನು ಭೇಟಿಯಾಗಿ ಹೆಚ್.ಎಸ್.ಆರ್. ಲೇಔಟ್ ನಲ್ಲಿ ಪ್ರತಿ ಮಳೆಗಾಲದಲ್ಲೂ ಸಮಸ್ಯೆಯಾಗ್ತಿದ್ದು, ಅದಕ್ಕೆ ಶಾಶ್ವತ ಪರಿಹಾರ ನೀಡಲು ಮನವಿ ಮಾಡಿದರು.
ಹೆಚ್.ಎಸ್.ಆರ್ ಲೇಔಟ್ 6ನೇ ಸೆಕ್ಟರ್ ನ, 3ನೇ ಮುಖ್ಯ ರಸ್ತೆ, 16ನೇ ಅಡ್ಡ ರಸ್ತೆ ಪ್ರದೇಶವು ತಗ್ಗು ಪ್ರದೇಶದಲ್ಲಿರುವ ಕಾರಣ ಮಳೆಗಾದಲ್ಲಿ ಜಲಾವೃತವಾಗುತ್ತದೆ. ಇದಕ್ಕೆ ಹೊಸದಾಗಿ 286 ಮೀಟಿರ್ ಸೈಡ್ ಡ್ರೈನ್ ನಿರ್ಮಾಣ ಮಾಡಲಾಗುತ್ತಿದ್ದು, ಪ್ರಮುಖ ರಾಜಕಾಲುವೆಗೆ ಸಂಪರ್ಕ ಕಲ್ಪಿಸಲಾಗುತ್ತಿದೆ. ಇದರಿಂದ ಮಳೆಗಾಲದ ವೇಳೆ ಈ ಭಾಗದಲ್ಲಿ ಸಂಪೂರ್ಣವಾಗಿ ಜಾಲಾವೃತವಾಗುವ ಸಮಸ್ಯೆ ಬಗೆಹರಿಯಲಿದ್ದು, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.