ಸಿಎಂ ಸಿದ್ದು ವ್ಯಾಪ್ತಿ ಲೋಕಸಭೆ ಕ್ಷೇತ್ರದಲ್ಲಿ ಅಭ್ಯರ್ಥಿ ಆಗ್ತಾರಾ ಎಐಸಿಸಿ ಅಧ್ಯಕ್ಷ ಖರ್ಗೆ?
ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಟಿ. ನರಸೀಪುರ, ನಂಜನಗೂಡು, ಎಚ್.ಡಿ. ಕೋಟೆ ಹಾಗೂ ಸಿಎಂ ಸಿದ್ದರಾಮಯ್ಯ ಕ್ಷೇತ್ರವಾದ ವರುಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾಂಗ್ರೆಸ್ ಗೆದ್ದಿದೆ.
ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಕಾಂಗ್ರೆಸ್ ಟಿಕೆಟ್ ಗೆ ಭಾರಿ ಪೈಪೋಟಿ ನಡೆದಿದೆ. ಆಕಾಂಕ್ಷಿಗಳ ಸಂಖ್ಯೆ ಈಗ 8ಕ್ಕೆ ಏರಿಕೆಯಾಗಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರ ಚಾಮರಾಜನಗರ ಜಿಲ್ಲೆಯ 4 ಹಾಗೂ ಮೈಸೂರು ಜಿಲ್ಲೆಯ 4 ಸೇರಿ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಸದ್ಯ ಚಾಮರಾಜ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರಿದ್ದು ಇದೇ ವ್ಯಾಪ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಗೆ ಪ್ರತಿನಿಧಿಸುವ ವರುಣಾ ಕ್ಷೇತ್ರವೂ ಸೇರಲಿದೆ.
8 ಕ್ಷೇತ್ರದಲ್ಲಿ 7 ಕಾಂಗ್ರೆಸ್ ವಶ:
ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಟಿ. ನರಸೀಪುರ, ನಂಜನಗೂಡು, ಎಚ್.ಡಿ. ಕೋಟೆ ಹಾಗೂ ಸಿಎಂ ಸಿದ್ದರಾಮಯ್ಯ ಕ್ಷೇತ್ರವಾದ ವರುಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾಂಗ್ರೆಸ್ ಗೆದ್ದಿದೆ. ಹನೂರು ಕ್ಷೇತ್ರದಲ್ಲಿ ಜೆಡಿಎಸ್ ಶಾಸಕ ಎಂ.ಆರ್. ಮಂಜುನಾಥ್ ಇದ್ದಾರೆ.
8 ಕ್ಷೇತ್ರದಲ್ಲಿ 7 ಮಂದಿ ಕಾಂಗ್ರೆಸ್ ಶಾಸಕರಿರುವುದರಿಂದ ಕಾಂಗ್ರೆಸ್ ಟಿಕೆಟ್ ಪಡೆಯಲು ಪೈಪೋಟಿ ಜೋರಾಗಿಯೇ ನಡೆದಿದೆ. ಇದ್ದು ಈ ಬಾರಿ ಮತ್ತೇ ಕ್ಷೇತ್ರ ಕಾಂಗ್ರೆಸ್ ವಶವಾಗುವ ಉತ್ಸಾಹದಲ್ಲಿದೆ ಎನ್ನುವ ಕಾರಣಕ್ಕೆ ಪೈಪೋಟಿ ಏರ್ಪಟ್ಟಿದೆ.
ಇದನ್ನೂ ಓದಿ- ಭಾರತದಲ್ಲಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆ: ಫಿಚ್ ರೇಟಿಂಗ್ ಭವಿಷ್ಯ
ಸಿಎಂ ಸಿದ್ದರಾಮಯ್ಯ ಕ್ಷೇತ್ರ:
ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರವು ಒಳಪಡಲಿದ್ದು ಕಾಂಗ್ರೆಸ್ ಗೆಲ್ಲಿಸಬೇಕಾದ ಪ್ರತಿಷ್ಟೆಯೂ ಇರಲಿದೆ.
ಅಭ್ಯರ್ಥಿ ಆಗ್ತಾರಾ ಕಾಂಗ್ರೆಸ್ ಅಧಿನಾಯಕ!
ಸಚಿವ ಎಚ್.ಸಿ. ಮಹಾದೇವಪ್ಪ ಪುತ್ರ ಸುನೀಲ್ ಬೋಸ್, ಮಾಜಿ ಸಚಿವ ಮಳವಳ್ಳಿ ಸೋಮಶೇಖರ್, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಕಾಂಗ್ರೆಸ್ ಯುವ ಮುಖಂಡ ದೇಶವಳ್ಳಿ ನಟರಾಜು, ಕಾಂಗ್ರೆಸ್ ಕಾರ್ಮಿಕ ವಿಭಾಗದ ಮುಖಂಡ ಕಿರಣ್ ಸೇರಿದಂತೆ 8 ಮಂದಿ ಆಕಾಂಕ್ಷಿಗಳಿದ್ದಾರೆ. ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಟಿಕೆಟ್ ಪಡೆಯಲು ಸಾಕಷ್ಟು ಪೈಪೋಟಿ ನಡೆಸುತ್ತಿದ್ದು ಉಳಿದವರು ಈಗಾಗಲೇ ಮುಖಂಡರನ್ನು ಭೇಟಿ ಮಾಡುತ್ತಿದ್ದಾರೆ.
ಈಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗುತ್ತಾರೆ ಎಂಬ ಗುಲ್ಲು ಎದ್ದಿದೆ. ಕೆಲ ಆಕಾಂಕ್ಷಿಗಳೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ- ರಾಜ್ಯ ಬಿಜೆಪಿ ನಾಯಕರ ದಿಕ್ಕೆಟ್ಟ ಬರ ಅಧ್ಯಯನ ಯಾತ್ರೆ: ಸಿಎಂ ಸಿದ್ದರಾಮಯ್ಯ
ಮಲ್ಲಿಕಾರ್ಜುನ ಖರ್ಗೆ ದಲಿತ ನಾಯಕ ಆಗಿರುವ ಹಿನ್ನೆಲೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಸ್ಪರ್ಧೆ ಮಾಡಿದರೆ ಪಕ್ಷಕ್ಕೂ ಬೂಸ್ಟ್ ಸಿಕ್ಕಂತಾಗಲಿದೆ ಎಂದು ಒತ್ತಾಯ ಮಾಡುತ್ತಿದ್ದು ಚಾಮರಾಜನಗರ ಲೋಕ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಅಚ್ಚರಿ ಅಭ್ಯರ್ಥಿ ಆಗುತ್ತಾರೆ ಎನ್ನಲಾಗುತ್ತಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.