ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ?

 ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ಕೊಡಬೇಕು ಎಂದು ಜೆಡಿಎಸ್ ಮುಖಂಡರು ಒತ್ತಾಯಿಸಿದ್ದಾರೆ.

Updated: Jan 10, 2019 , 07:22 PM IST
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ?

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಹಲವರು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಚಿತ್ರ ನಟರೂ ಆಗಿರುವ ನಿಖಿಲ್ ಕುಮಾರಸ್ವಾಮಿ, ಮಂಡ್ಯ ಜಿಲ್ಲೆಯ ಜನತೆ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ. ರೈತರ ಆತ್ಮಹತ್ಯೆ ಆದಾಗ, ಅಪಘಾತಗಳಾದಾಗ ಜನರ ಸಮಸ್ಯೆಗೆ ಸ್ಪಂದಿಸಿದ್ದಾರೆ. ಜೆಡಿಎಸ್ ಪಕ್ಷದ ಬಲರ್ಧನೆಗೆ ಶ್ರಮಿಸಿದ್ದಾರೆ. ಅಲ್ಲದೆ, ರೆಬಲ್ ಸ್ಟಾರ್ ಅಂಬರೀಶ್ ಮೃತಪಟ್ಟ ಸಂದರ್ಭದಲ್ಲಿ ಅಂತ್ಯಕ್ರಿಯೆಯಲ್ಲಿ ಕೊನೆವರೆಗೂ ಇದ್ದು ಜನರ ಪ್ರೀತಿ ಗಳಿಸಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಕೊಡಬೇಕು ಎಂದು ಜೆಡಿಎಸ್ ಮುಖಂಡರು ಒತ್ತಾಯಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪರವಾಗಿ ಪ್ರಚಾರ ಮಾಡಿದ್ದ ನಿಖಿಲ್ ಕುಮಾರಸ್ವಾಮಿ ಮುಂದಿನ ಬಾರಿ ರಾಜಕೀಯ ರಂಗ ಪ್ರವೇಶಿಸಲಿದ್ದಾರೆ ಎಂದೇ ಹೇಳಲಾಗಿತ್ತು. ಅಲ್ಲದೆ, ಮಂಡ್ಯದಿಂದಲೇ ಸ್ಪರ್ಧೆ ಮಾಡುವಂತೆ ಆ ಭಾಗದ ಜೆಡಿಎಸ್ ಶಾಸಕರು ದೇವೇಗೌಡರ ಮೇಲೆ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ. ಆದರೆ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಈ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕಾದುನೋಡಬೇಕಿದೆ.