ಮಂಡ್ಯ: ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಮಾತನಾಡಿದರು.‌ 


COMMERCIAL BREAK
SCROLL TO CONTINUE READING

ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. 


ಇದನ್ನೂ ಓದಿ-ನಾವು ಚಳವಳಿ ಹೋರಾಟ ನಡೆಸುತ್ತಿದ್ದರೂ ಕ್ಯಾರೇ ಎನ್ನುತ್ತಿಲ್ಲ


ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ. ಆದರೂ ಮೊದಲು 5000 ಕ್ಯೂಸೆಕ್ಸ್ ನೀರು ಬಿಡಲು ಹೇಳಿದರು, ಬಳಿಕ 3000 ಕ್ಯೂಸೆಕ್ಸ್ ನೀರು ಬಿಡಲು ಆದೇಶ ಬಂತು. ಅದಕ್ಕೂ ನಾವು ಒಪ್ಪಲಿಲ್ಲ. 


ಈಗ ನೆನ್ನೆ ದಿನ 2600 ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ. ಆದರೆ ನಾವು ಕುಡಿಯುವ ನೀರಿಗೆ ಮತ್ತು ಬೆಳೆ ಉಳಿಸಿಕೊಳ್ಳಲು ಮೊದಲ ಆದ್ಯತೆ ನೀಡುತ್ತೇವೆ. ಮುಂಗಾರು ಬೆಳೆಯನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತೇವೆ. ನಾನೂ ರೈತ ಹೋರಾಟದಲ್ಲಿ ಬಂದಿರುವ ರೈತರ ಮಗ. ನಾವೂ ಅಚ್ಚುಕಟ್ಟೆ ಪ್ರದೇಶದಲ್ಲೇ ಇದ್ದೇವೆ. ಆದ್ದರಿಂದ ರೈತರ ಸಂಕಷ್ಟ ನನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ನಿಮ್ಮ ಹಿತ ಕಾಯಲು ಹಿಂದೆ ಬೀಳುವುದಿಲ್ಲ. ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ. ನಾವು ಕೇವಲ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವವರಲ್ಲ ಎಂದು ಸ್ಪಷ್ಟವಾಗಿ ನುಡಿದರು. 


ಇದನ್ನೂ ಓದಿ-ಮಹಾರಾಷ್ಟ್ರ ಸಚಿವರು, ಸಂಸದರಿಗೆ ಬೆಳಗಾವಿ ಡಿಸಿ ಶಾಕ್


ರೈತರ ಹಿತ ಕಾಯಲು ಗಂಭೀರವಾದ, ಪ್ರಾಯೋಗಿಕವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. 


ಕಬ್ಬು ಬೆಳೆಗಾರರ ಹಿತಕ್ಕಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ 50 ರೂ ಬಿಡುಗಡೆ ಮಾಡಿದ್ದೇವೆ. ನಾವು ನಿಮ್ಮ ಪರವಾಗಿ ಇರುವವರು. ಅನುಮಾನ ಬೇಡವೇ ಬೇಡ ಎಂದರು. 


ಕೃಷಿ ಸಚಿವರಾದ ಚಲುವರಾಯಸ್ವಾಮಿ, ಶಾಸಕರಾದ ರವಿ ಗಣಿಗ, ದಿನೇಶ್ ಗೂಳಿಗೌಡ, ನರೇಂದ್ರಸ್ವಾಮಿ ಸೇರಿದಂತೆ ಹಲವು ಮಂದಿ ನಾಯಕರು ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.