ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಂಸದೆ ಶೋಭಾ ಕರಂದ್ಲಾಜೆ
ಯಶವಂತಪುರ ವಿಧಾನಸಭೆ ಟಿಕೆಟ್ ಗೊಂದಲಕ್ಕೆ ತೆರೆ ಎಳೆದ ಶೋಭಾ ಕರಂದ್ಲಾಜೆ
ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಯಶವಂತಪುರ ವಿಧಾನಸಭೆ ಟಿಕೆಟ್ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಪ್ರಸ್ತುತ ಲೋಕಸಭೆ ಸದಸ್ಯರಾಗಿರುವ ಶೋಭಾ ಕರಂದ್ಲಾಜೆ ವಿಧಾನಸಭೆ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹ ಹರಿದಾಡುತ್ತಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಶೋಭಾ ಕರಂದ್ಲಾಜೆ, ತಾವು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಬಸವೇಶ್ವರ ಪುತ್ತಳಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ಲೋಕಸಭಾ ಸದಸ್ಯತ್ವದ ಅವಧಿ ಇನ್ನೂ ಒಂದು ವರ್ಷ ಇದೆ. ನಂತರ ಪಕ್ಷ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.