ಮುಸಲ್ಮಾನರಿಗೆ ಪಕ್ಷದ ಟಿಕೆಟ್ ನೀಡಲ್ಲ: ಸಚಿವ ಕೆ.ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ರೈಲ್ವೆ ಖಾತೆಯ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ (Suresh Angadi) ಅವರು ಸಾವನ್ನಪ್ಪಿದ್ದರಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರ (Belgavi Lok Sabha constituency)ಕ್ಕೆ ಅಭ್ಯರ್ಥಿ ಯಾರು? ಎಂಬ ಚರ್ಚೆ ಶುರುವಾಗಿದೆ.

Written by - Yashaswini V | Last Updated : Nov 30, 2020, 03:03 PM IST
  • ಬೆಳಗಾವಿ ಲೋಕಸಭೆ ಟಿಕೆಟ್ ನ್ನು ನಾವು ಮುಸ್ಲಿಮರಿಗಂತೂ ನೀಡಲ್ಲ, ಹಿಂದೂಗಳಿಗೇ ನೀಡುತ್ತೇವೆ-ಕೆ. ಎಸ್. ಈಶ್ವರಪ್ಪ
  • ಕುರುಬರಿಗೆ ಟಿಕೆಟ್ ಕೊಟ್ಟರೆ ಬಿಜೆಪಿಗೆ ಠೇವಣಿ ಕೂಡ ಸಿಗುವುದಿಲ್ಲ-ಕೆ. ಎಸ್. ಈಶ್ವರಪ್ಪ
  • ಬೆಳಗಾವಿಯಲ್ಲಿ ಕುರುಬರಿಗೋ, ಲಿಂಗಾಯತರಿಗೋ, ಒಕ್ಕಲಿಗರಿಗೋ, ಬ್ರಾಹ್ಮಣರಿಗೋ ಟಿಕೆಟ್ ಕೊಡುತ್ತೇವೆ. ಆದರೆ ಯಾವ ಕಾರಣಕ್ಕೂ ಮುಸ್ಲಿಮರಿಗೆ ಟಿಕೆಟ್ ಕೊಡುವುದಿಲ್ಲ-ಕೆ. ಎಸ್. ಈಶ್ವರಪ್ಪ
ಮುಸಲ್ಮಾನರಿಗೆ ಪಕ್ಷದ ಟಿಕೆಟ್ ನೀಡಲ್ಲ: ಸಚಿವ ಕೆ.ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಸದಾ ವಿವಾದಾತ್ಮಕ ಹೇಳಿಕೆ ನೀಡುವ, 'ಮೆದುಳಿಗೂ ನಾಲಿಗೆಗೂ ಸಂಪರ್ಕ ಇಲ್ಲದ ನಾಯಕ' ಎಂದು ವಿಪಕ್ಷ ನಾಯಕರಿಂದ ಆರೋಪಕ್ಕೆ ಒಳಗಾಗುವ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಈಗ 'ನಾವು ಮುಸ್ಲೀಮರಿಗೆ ಟಿಕೆಟ್ ನೀಡುವುದಿಲ್ಲ' ಎಂದು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರೈಲ್ವೆ ಖಾತೆಯ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ (Suresh Angadi) ಅವರು ಸಾವನ್ನಪ್ಪಿದ್ದರಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರ (Belgavi Lok Sabha constituency)ಕ್ಕೆ ಅಭ್ಯರ್ಥಿ ಯಾರು? ಎಂಬ ಚರ್ಚೆ ಶುರುವಾಗಿದೆ. ಇಲ್ಲಿಂದ ಯಾವ ಮುಸ್ಲಿಂ ಅಭ್ಯರ್ಥಿಯೂ ಬಿಜೆಪಿ ಟಿಕೆಟ್ ಕೇಳಿಲ್ಲ. ಆದರೂ ಕೆ.ಎಸ್. ಈಶ್ವರಪ್ಪ (KS Eshwarappa) 'ಬೆಳಗಾವಿ ಹಿಂದುತ್ವದ ಕೇಂದ್ರವಾಗಿದೆ. ಆದುದರಿಂದ ಬೆಳಗಾವಿ ಲೋಕಸಭೆ ಟಿಕೆಟ್ ನ್ನು ನಾವು ಮುಸ್ಲಿಮರಿಗಂತೂ ನೀಡಲ್ಲ, ಹಿಂದೂಗಳಿಗೇ ನೀಡುತ್ತೇವೆ' ಎಂದು ಹೇಳಿದ್ದಾರೆ. ಈ ಮೂಲಕ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

ಈ ಮಧ್ಯೆ ಬೆಳಗಾವಿ ಲೋಕಸಭಾ ಟಿಕೆಟ್ ಅನ್ನು ಕುರುಬ ಸಮುದಾಯಕ್ಕೆ ಕೊಡಬೇಕೆನ್ನುವ ಚರ್ಚೆಗಳು ಕೂಡ ನಡೆಯುತ್ತಿವೆ. ಇದರ ಬಗ್ಗೆ ಮಾತನಾಡಿದ ಈಶ್ವರಪ್ಪ, ಇಲ್ಲಿ ಕುರುಬ, ಒಕ್ಕಲಿಗ, ಲಿಂಗಾಯತ ಅಥವಾ ಬ್ರಾಹ್ಮಣ ಎಂಬ ಪ್ರಶ್ನೆ ಬರುವುದಿಲ್ಲ. ಹಿಂದೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಕುರುಬರಿಗೆ ಟಿಕೆಟ್ ಕೊಟ್ಟಿದೆ. ಆದರೆ ಅವರು ಗೆದ್ದಿಲ್ಲ.‌ ಠೇವಣಿ ಕಳೆದುಕೊಳ್ಳುವವರಿಗೆ ಟಿಕೆಟ್ ಕೊಡಬೇಕೆ?" ಎಂದು ಪ್ರಶ್ನಿಸಿದರು. ಆ ಮೂಲಕ ಈಶ್ವರಪ್ಪ "ಕುರುಬರಿಗೆ ಟಿಕೆಟ್ ಕೊಟ್ಟರೆ ಬಿಜೆಪಿಗೆ ಠೇವಣಿ ಕೂಡ ಸಿಗುವುದಿಲ್ಲ" ಎಂದು ಹೇಳಿದರು.

ಸಿದ್ದರಾಮಯ್ಯ ಒಬ್ಬ ಹುಚ್ಚ ಎಂದು ವಾಗ್ಧಾಳಿ ನಡೆಸಿದ ಕೆ.ಎಸ್. ಈಶ್ವರಪ್ಪ ಹಾಕಿದ ಸವಾಲೇನು?

ಒಂದು ಕಡೆ ಕುರುಬ ಸಮುದಾಯವನ್ನು ಪರಿಶಿಷ್ಟ ಜನಾಂಗಕ್ಕೆ ಸೇರಿಸಿ ಎಂದು 'ಹೋರಾಟ' ನಡೆಸುವ ಕೆ.ಎಸ್. ಈಶ್ವರಪ್ಪ ಇನ್ನೊಂದೆಡೆ 'ಕುರುಬರಿಗೆ ಟಿಕೆಟ್ ಬೇಡ' ಎಂದು ಹೇಳುತ್ತಿದ್ದಾರೆ. ಇದು ಈಶ್ವರಪ್ಪ ಅವರ ದ್ವಿಮುಖ ನೀತಿಗೆ ಕನ್ನಡಿ ಹಿಡಿದಂತಾಗಿದೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಬೆಳಗಾವಿಯಲ್ಲಿ ಕುರುಬರಿಗೋ, ಲಿಂಗಾಯತರಿಗೋ, ಒಕ್ಕಲಿಗರಿಗೋ, ಬ್ರಾಹ್ಮಣರಿಗೋ ಟಿಕೆಟ್ ಕೊಡುತ್ತೇವೆ. ಆದರೆ ಯಾವ ಕಾರಣಕ್ಕೂ ಮುಸ್ಲಿಮರಿಗೆ ಟಿಕೆಟ್ ಕೊಡುವುದಿಲ್ಲ" ಎಂದಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆ ಮಲಗಿದೆ, ಸಚಿವ ಈಶ್ವರಪ್ಪ ಎಲ್ಲಿದ್ದಾರೋ ಗೊತ್ತಿಲ್ಲ: ಡಿ‌.ಕೆ. ಶಿವಕುಮಾರ್

ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar), 'ಅದು ಬಿಜೆಪಿಯವತ ಸಿದ್ದಾಂತ. ಅವರು ಸಂವಿಧಾನವನ್ನು ಸುಟ್ಟುಹಾಕಲಿ ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಶ್ವರಪ್ಪ ಮೊದಲು ಸಂವಿಧಾನವನ್ನು ಓದಬೇಕು. ಅದರಲ್ಲಿರುವ ಆಶಯ ಏನು ಎಂದು ತಿಳಿದುಕೊಳ್ಳಬೇಕು. ಬಿಜೆಪಿಯವರ ಸಿದ್ಧಾಂತವೇ ಅದು. ಅವರಿಗೆ ಸಂವಿಧಾನದ ಬಗ್ಗೆ ಗೊತ್ತಿಲ್ಲ. ಅದರ ಬಗ್ಗೆ ಗೌರವವೂ ಇಲ್ಲ. ಅವರು ಸಂವಿಧಾನ ಸುಡಬೇಕು ಅಂತಲೇ ಕಾಯುತ್ತಿದ್ದಾರೆ. ಈಶ್ವರಪ್ಪ ಅವರಿಂದ ಸಂವಿಧಾನವನ್ನು ಓದಿಸಿ. ಅವರಿಗೆ ಅದರ ಆಶಯಗಳು ಅರ್ಥವಾಗಲಿ. ಹೀಗೆ ಮಾತನಾಡುವ ಬಿಜೆಪಿಯವರು ತಮ್ಮ ಪಕ್ಷದಲ್ಲಿರುವ ಅಲ್ಪಸಂಖ್ಯಾತರ ಘಟಕವನ್ನು ವಿಸರ್ಜಿಸುವುದು ಉತ್ತಮ' ಎಂದು ಟೀಕಿಸಿದರು.

More Stories

Trending News