ಬೆಳಗಾವಿ: ರಸ್ತೆ ಸಾರಿಗೆ ಸಂಸ್ಥೆಗಳ (ಆರ್‌ಟಿಸಿ) ನೌಕರರನ್ನು ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಮಾತುಕತೆಗೆ ಆಹ್ವಾನಿಸುವುದಿಲ್ಲ, ಬೇಕಾದರೆ ಅವರೇ ಮಾತುಕತೆಗೆ ಬರಲಿ ಎಂದು ಸಿಎಂ ಬಿಎಸ್ ಯಡಿಯುರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ(BS Yediyurappa), ರಸ್ತೆ ಸಾರಿಗೆ ನೌಕರರ ಒಂಬತ್ತು ಬೇಡಿಕೆಗಳಲ್ಲಿ ಎಂಟನ್ನು ಸರ್ಕಾರ ಪೂರೈಸಿದರೂ, ಮುಷ್ಕರಕ್ಕೆ ಮುಂದಾದ ನೌಕರರನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಅವರ ವಿರುದ್ಧ ಕಠಿಣ ಕ್ರಮ ಮಾತ್ರ ಉಳಿದಿತ್ತು ಹೇಳಿದ್ದಾರೆ.
ಇದನ್ನೂ ಓದಿ : KSRTC Strike: ಇಂದಿನಿಂದ ಸಾರಿಗೆ ನೌಕರರ ಮುಷ್ಕರ, ಬಸ್ ಸಂಚಾರದಲ್ಲಿ ವ್ಯತ್ಯಯ
"ನಾನು ಬೆಂಗಳೂರಿಗೆ(Bengaluru) ಹೋಗುತ್ತಿದ್ದೇನೆ ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತೇನೆ ಮತ್ತು ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಲಾಗುವುದು" ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : Karnataka Congress: 'ಬಿಜೆಪಿ ಸರ್ಕಾರ ಸಾರಿಗೆ ನೌಕರರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ'
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ(Mangala Angadi) ಪ್ರಚಾರಕ್ಕಾಗಿ ಏಪ್ರಿಲ್ 14 ರಂದು ಮತ್ತೆ ಬೆಳಗಾವಿಗೆ ಭೇಟಿ ನೀಡಲಿದ್ದು, ಅಂದು ರೋಡ್ ಶೋ ಆಯೋಜಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ : Sarkari Naukri 2021: 10ನೇ ತರಗತಿ ಪಾಸದವರಿಗೆ KSCCF ಯ ಈ ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ವೇಳೆ ಕಾಂಗ್ರೆಸ್(Congress) ನಾಯಕರು ನೀಡಿದ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಲು ಸಿಎಂ ಯಡಿಯುರಪ್ಪ ನಿರಾಕರಿಸಿದರು.
ಇದನ್ನೂ ಓದಿ : HD Deve Gowda: ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.