ಸಚಿವ ಸ್ಥಾನ ಕೈತಪ್ಪಿದ ಬಳಿಕ ಸುಳ್ಯ ಶಾಸಕ ಎಸ್.ಅಂಗಾರ ಹೇಳಿದ್ದೇನು?

ಸಚಿವರ ಆಯ್ಕೆಯಲ್ಲಿ ದಕ್ಷಿಣಕನ್ನಡಕ್ಕೆ ಅನ್ಯಾಯವಾಗಿದೆ. ಈ ಬಗ್ಗೆ ಇಂದು ಅಥವಾ ನಾಳೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

Last Updated : Aug 20, 2019, 03:59 PM IST
ಸಚಿವ ಸ್ಥಾನ ಕೈತಪ್ಪಿದ ಬಳಿಕ ಸುಳ್ಯ ಶಾಸಕ ಎಸ್.ಅಂಗಾರ ಹೇಳಿದ್ದೇನು? title=

ಬೆಂಗಳೂರು: ಇಂದು ನಡೆದ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಲ್ಲಿ ಕಡೆಯ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ಸುಳ್ಯ ಶಾಸಕ ಎಸ್.ಅಂಗಾರ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಸಚಿವರ ಆಯ್ಕೆಯಲ್ಲಿ ದಕ್ಷಿಣಕನ್ನಡಕ್ಕೆ ಅನ್ಯಾಯವಾಗಿದೆ. ಈ ಬಗ್ಗೆ ಇಂದು ಅಥವಾ ನಾಳೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ. ಸಚಿವರನ್ನು ಆಯ್ಕೆ ಮಾಡುವಾಗ ಪಕ್ಷದ ನಾಯಕರು ಗಮನಿಸಬೇಕಿತ್ತು. ಆದರೆ ಪಕ್ಷ ನಿಷ್ಠೆಯನ್ನು ಯಾರೂ ಗಮನಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸುಳ್ಯ ಮೀಸಲು ವಿಧಾನಸಭಾ ಕ್ಷೇತ್ರದಿಂದ ಸತತ ಆರು ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಎಸ್.ಅಂಗಾರ ಅವರು ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ 6 ಬಾರಿ ಶಾಸಕರಾಗಿ ಆಯ್ಕೆಯಾದ ಏಕೈಕ ಶಾಸಕ. ಅಷ್ಟೇ ಅಲ್ಲದೆ, ಸೋಲಿಲ್ಲದ ಸರದಾರ ಎಂದೇ ಹೆಸರಾಗಿರುವ ಇವರು ಸಾಕಷ್ಟು ಸಮಾಜಸೇವೆ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಹೀಗಿರುವಾಗ ಅಂಗಾರ ಅವರಿಗೆ ಖಂಡಿತಾ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ನಿರೀಕ್ಷೆ ಎಲ್ಲರಲ್ಲಿತ್ತು. ಇಂದು ಸಚಿವ ಸಂಪುಟ ವಿಸ್ತರಣೆ ಬಳಿಕ ಆ ನಿರೀಕ್ಷೆ ಹುಸಿಯಾಗಿದೆ.

Trending News