ನವದೆಹಲಿ: ಸಚಿವ ಸಂಪುಟ ವಿಸ್ತರಣೆ, ಪುನರ್‌ರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮದವರೇ ಹೊರತು ನಾನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮತ್ತೆ ಶುರುವಾಗ್ತಿದೆ ʼಕನ್ನಡದ ಕೋಟ್ಯಾಧಿಪತಿʼ... ಪುನೀತ್‌ ರಾಜ್‌ಕುಮಾರ್‌ ಬದಲಿಗೆ ನಿರೂಪಕ ಇವರೇ! ಅಪ್ಪು ಪ್ರಾಣಸ್ನೇಹಿತನಿಗೆ ಅರಸಿ ಬಂತಾ ಈ ಆಫರ್!?


ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸದ್ಯಕ್ಕಿಲ್ಲ. ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನರ್‌ರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದರು.


ಸಂಪುಟ ಪುನರ್‌ರಚನೆ, ವಿಸ್ತರಣೆ ಕುರಿತಂತೆ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಜೊತೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ಸ್ಪಷ್ಟನೆ ನೀಡಿದರು.  


ಇದನ್ನೂ ಓದಿ: ಒಂದು ಚಿಟಿಕೆ ಉಪ್ಪನ್ನು ಈ ರೀತಿ ಬಳಸಿದರೆ ಬೋಳುತಲೆಯಲ್ಲೂ ದಟ್ಟವಾಗಿ ಕೂದಲು ಬೆಳೆಯುತ್ತೆ! ಬಿಳಿ ಕೂದಲಿನ್ನೂ ಶಾಶ್ವತವಾಗಿ ಕಪ್ಪಾಗಿಸಲು ಇದು ರಾಮಬಾಣವಿದ್ದಂತೆ


ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ. ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ. ಸಮಾವೇಶ ಕುರಿತಂತೆ ಹೈಕಮಾಂಡ್‌ಗೆ ಅನಾಮಧೇಯ ಪತ್ರ ಬರೆದಿರುವ ಬಗ್ಗೆ ಮಾಹಿತಿ ಇಲ್ಲ. ಖರ್ಗೆ ಅವರೂ ಈ ಬಗ್ಗೆ ಚರ್ಚೆ ಮಾಡಲಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ