ದೇಶ, ಸಂವಿಧಾನ ಉಳಿಸಲು ಸ್ಟಾರ್ ಚಂದ್ರುರನ್ನು ಗೆಲ್ಲಿಸಿ, ಕಾಂಗ್ರೆಸ್ ಕೈ ಬಲಪಡಿಸಿ: ಬಿ.ಟಿ.ಲಲಿತಾ ನಾಯಕ್

BT Lalita Naik: ನರೇಂದ್ರ ಮೋದಿ ಅವರ ಸರ್ಕಾರ ಬಂದರೆ ಈ ದೇಶದಲ್ಲಿ ಚುನಾವಣೆ ಇರುವುದಿಲ್ಲ. ದೇಶ, ಸಂವಿಧಾನ ಉಳಿಸಲು ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ ಕಾಂಗ್ರೆಸ್ ಕೈ ಬಲಪಡಿಸಬೇಕು. ಇಲ್ಲದಿದ್ದರೆ ಸಂವಿಧಾನ ಕಳೆದುಕೊಂಡು ನೂರು ವರ್ಷ ಹಿಂದಕ್ಕೆ ಹೋಗಬೇಕಾಗುತ್ತದೆ ಎಂದು ಮಾಜಿ ಸಚಿವರು, ಲೇಖಕಿ, ಸಾಮಾಜಿಕ ಕಾರ್ಯಕರ್ತೆ ಬಿ.ಟಿ.ಲಲಿತಾ ನಾಯಕ್ ಹೇಳಿದರು.

Written by - Zee Kannada News Desk | Last Updated : Apr 19, 2024, 08:32 PM IST
  • ಬಡವರಿಗೆ ಉಚಿತ ಅಕ್ಕಿ ನೀಡಿದರೆ, ಮಹಿಳೆಯರಿಗೆ ಹಣ ನೀಡಿದರೆ ರಾಜ್ಯ ಬಡವಾಗುತ್ತದೆ ಎಂದರು
  • ಆದರೆ ರಾಹುಲ್ ಗಾಂಧಿ ಅವರು ಬಡವರ ಹಣ ಬಡವರಿಗೆ ಸೇರಬೇಕು ಎಂದರು
ದೇಶ, ಸಂವಿಧಾನ ಉಳಿಸಲು ಸ್ಟಾರ್ ಚಂದ್ರುರನ್ನು ಗೆಲ್ಲಿಸಿ, ಕಾಂಗ್ರೆಸ್ ಕೈ ಬಲಪಡಿಸಿ: ಬಿ.ಟಿ.ಲಲಿತಾ ನಾಯಕ್ title=

ಮಳವಳ್ಳಿ:  ತಾಲೂಕಿನ ಚಿಕ್ಕಮುಲಗೂಡು ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರವಾಗಿ ಮತಯಾಚಿಸುತ್ತ ದೇಶದ ಭವಿಷ್ಯದ ವಸ್ತುಸ್ಥಿತಿಯನ್ನು ವಿವರಿಸಿದರು.

ಬಡವರಿಗೆ ಉಚಿತ ಅಕ್ಕಿ ನೀಡಿದರೆ, ಮಹಿಳೆಯರಿಗೆ ಹಣ ನೀಡಿದರೆ ರಾಜ್ಯ ಬಡವಾಗುತ್ತದೆ ಎಂದರು. ಆದರೆ ರಾಹುಲ್ ಗಾಂಧಿ ಅವರು ಬಡವರ ಹಣ ಬಡವರಿಗೆ ಸೇರಬೇಕು ಎಂದರು. ಗ್ಯಾರಂಟಿಗಳಿಂದ ದೇಶ ಬಡವಾಗುವುದಿಲ್ಲ ಎಂದರು.

ಇದನ್ನೂ ಓದಿ-ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಬೆಂಬಲಿಸಲು ಸಚಿವ ಎಂ.ಬಿ.ಪಾಟೀಲ ಕರೆ

ಸ್ಟಾರ್ ಚಂದ್ರು ಅವರಿಗೆ ಎಲ್ಲಾ ಕಡೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಇಂತಹವರು‌ ಲೋಕಸಭಾ ಬರಬೇಕು. ದೇಶ, ಸಂವಿಧಾನ ಉಳಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಹೀಗಾಗಿ ಮತದಾರರು ಕಾಂಗ್ರೆಸ್ ಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಶಾಸಕ ನರೇಂದ್ರಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಜೊತೆಯಲ್ಲಿದ್ದರು.

ಇದನ್ನೂ ಓದಿ-ಕೊಪ್ಪಳ ಬಳಿಕ ಕಲಬುರಗಿ ಬಿಜೆಪಿ ನಾಯಕ ʻಕೈʼಸೇರ್ಪಡೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News