)
Chamarajanagar: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದೊಡ್ಡ ಆಲತ್ತೂರು ಗ್ರಾಮದಲ್ಲಿ ಜಮೀನು ವಿವಾದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ರಾಜಮ್ಮ (52) ಎಂದು ಗುರುತಿಸಲಾಗಿದೆ. ಪಿತ್ರಾರ್ಜಿತವಾಗಿ ದೊರೆತ 90 ಸೆಂಟ್ ಭೂಮಿಯಲ್ಲಿ ತಮ್ಮ ಕುಟುಂಬದೊಂದಿಗೆ ಕೃಷಿ ನಡೆಸುತ್ತಾ ಜೀವನ ಸಾಗಿಸುತ್ತಿದ್ದರು. ಆದರೆ, ಕಳೆದ ವಾರ ಕಂದಾಯ ಇಲಾಖೆಯ ಅಧಿಕಾರಿಗಳು ಅವರ ಜಮೀನಿನ 20 ಸೆಂಟ್ ಭಾಗವನ್ನು ವಶಪಡಿಸಿಕೊಂಡಿದ್ದರು. ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಈ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು.
ತಮಗೆ ಆಪ್ತವಾದ ಭೂಮಿ ಕಳೆದುಕೊಂಡ ನೋವು, ಆಕ್ರೋಶವನ್ನು ತಡೆದುಕೊಳ್ಳಲಾಗದೆ ರಾಜಮ್ಮ ಇಂದು ಮುಂಜಾನೆ ತಮ್ಮ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆಯ ಸುದ್ದಿ ತಿಳಿದು ಗ್ರಾಮಸ್ಥರು ಮತ್ತು ಸಂಬಂಧಿಕರು ಸ್ಥಳಕ್ಕಾಗಮಿಸಿ ಕಂದಾಯ ಇಲಾಖೆಯ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀನಿನಲ್ಲೇ ರಾಜಮ್ಮರ ಶವವನ್ನು ಇಟ್ಟು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಈ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದೊಡ್ಡ ಆಲತ್ತೂರು ಗ್ರಾಮದಲ್ಲಿ ಜಮೀನು ವಿವಾದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ನಡೆದಿದೆ.