ಗದಗ: ಆಸ್ಪತ್ರೆಗೆ ಹೋಗುತ್ತಿದ್ದಾಗ ಗರ್ಭಿಣಿಯೊಬ್ಬರು ಅಂಬ್ಯುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಗದಗ ತಾಲೂಕಿನಲ್ಲಿ ನಡೆದಿದೆ. ಬಳಗಾನೂರು ಗ್ರಾಮದ ಸಲೀಮಾ ಮೆಹಬೂಬಸಾಬ ಮುದೆಪ್ಪನವರ ಅಂಬ್ಯುಲೆನ್ಸ್‍ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ.


COMMERCIAL BREAK
SCROLL TO CONTINUE READING

ದಾರಿ ಮಧ್ಯೆ 108 ಅಂಬ್ಯುಲೆನ್ಸ್ ವಾಹನದಲ್ಲಿ ಹೆಣ್ಣು ಮಗುವಿಗೆ ಮಹಿಳೆಯು ಜನ್ಮ ನೀಡಿದ್ದು, ಸಕಾಲದಲ್ಲಿ ಅಂಬ್ಯುಲೆನ್ಸ್ ಸಿಬ್ಬಂದಿ ಆಕೆಗೆ ನೆರವಾಗಿದ್ದಾರೆ.


ಇದನ್ನೂ ಓದಿ: HD Kumaraswamy Health Updates: ಎಚ್​​ಡಿಕೆ ಆರೋಗ್ಯದ ಬಗ್ಗೆ ಅನಿತಾ ಕುಮಾರಸ್ವಾಮಿ​ ಹೇಳಿದ್ದೇನು..?


ಬುಧವಾರ ಬೆಳಗ್ಗೆ ಮಹಿಳೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಅಂಬ್ಯುಲೆನ್ಸ್ ಗ್ರಾಮಕ್ಕೆ ತೆರಳಿತ್ತು. ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಕರೆತರುವಾಗ ಹೆರಿಗೆ ನೋವು ಹೆಚ್ಚಾಗಿತ್ತು.


ತಕ್ಷಣ‌ ಎಚ್ಚೆತ್ತ ಅಂಬ್ಯುಲೆನ್ಸ್ ಸಿಬ್ಬಂದಿ ಆಸ್ಪತ್ರೆ‌ ತಲುಪುವುದಕ್ಕಿಂತ ಮುಂಚೆಯೇ ವಾಹನದಲ್ಲಿಯೇ ಹೆರಿಗೆ ಕಾರ್ಯ ಮಾಡಿಸಿದರು. ಸಮಯೋಚಿತ ಚಿಕಿತ್ಸೆ ನೀಡುವ ಮೂಲಕ ನರ್ಸಿಂಗ್ ಆಫೀಸರ್ ರವಿ ಬಡಿಗೇರ ಹಾಗೂ ಅಂಬ್ಯುಲೆನ್ಸ್ ಚಾಲಕ ದಸ್ತಗೀರಸಾಬ ಸುಸೂತ್ರ ಹೆರಿಗೆ ಮಾಡಿಸಿದ್ದಕ್ಕೆ ಕುಟುಂಬಸ್ಥರಿಂದ ಮೆಚ್ಚುಗೆ ವ್ಯಕ್ತವಾಗಿದೆ.


ಇದನ್ನೂ ಓದಿ: "ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುತ್ತದೆ"


ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದು, ಗದಗ ನಗರದ ದಂಡಪ್ಪ ಮಾನ್ವಿ ಸರ್ಕಾರಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.