ಬೆಂಗಳೂರು : ಮತದಾನಕ್ಕೆ ಆಗಮಿಸಿದ ಮಹಿಳೆಗೆ ಹೃದಯ ಸ್ತಂಭನವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿಣ್ಣೆ ಬಳಿ ಘಟನೆ ನಡೆದಿದೆ.ಸ್ಥಳದಲ್ಲೇ ಇದ್ದ ವೈದ್ಯರು ಮಹಿಳೆಯ ಪ್ರಾಣ ಉಳಿಸಿದ್ದಾರೆ.
ಇಂದು ಮುಂಜಾನೆಯಿಂದಲೇ ಬಿರುಸಿನಿಂದ ಮತದಾನ ನಡೆದಿದೆ. ಮತಗಟ್ಟೆಗಳಿಗೆ ಆಗಮಿಸಿದ ಜನರು ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿದ್ದರೆ. ಬಿಸಿಲು ಹೆಚ್ಚಾಗಿರುವುದರಿಂದ ಕೆಲವೆಡೆ ಮತದಾರರು ಕುಸಿದು ಬಿದ್ದಿರುವ ಘಟನೆ ನಡೆದಿದೆ. ಈ ಮಧ್ಯೆ ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿಣ್ಣೆ ಬಳಿ ಮತದಾನಕ್ಕೆ ಬಂದಿರುವ ಮಹಿಳೆಗೆ ಹೃದಯ ಸ್ತಂಭನವಾಗಿರುವ ಘಟನೆ ನಡೆದಿದೆ.
ಇದನ್ನೂ ಓದಿ : ಮುಸ್ಲಿಂರಿಗೆ ಒಬಿಸಿ ಮೀಸಲಾತಿ ಸತ್ಯ- ನನ್ನ ಬಳಿ ನೋಟಿಸ್ ಇದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಮತ ಚಲಾಯಿಸಲು ಮತಗಟ್ಟೆಗೆ ಬಂದಿರುವ ಸುಮಾರು ೫೦ ವರ್ಷದ ಆಸುಪಾಸಿನ ಮಹಿಳೆಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದೆ. ಸರತಿ ಸಾಲಿನಲ್ಲಿ ಕಾಡು ನಿಂತಿದ್ದ ಮಹಿಳೆ ನೀರು ಕುಡಿಯಲು ಹೋದಾಗ ಕುಸಿದಿದ್ದಾರೆ. ಅದೃಷ್ಟವಶಾತ್ ಅದೇ ವೇಳೆ ವೋಟ್ ಮಾಡಲು ಬಂದಿರುವ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ ಅಲ್ಲೇ ಇದ್ದರು. ಹೀಗಾಗಿ ಅವರು ತಕ್ಷಣ ಮಹಿಳೆಗೆ ತುರ್ತು ಚಿಕಿತ್ಸೆ ನೀಡಿದ್ದಾರೆ.
ವೈದ್ಯರು ಮಹಿಳೆಯ ನಾಡಿಮಿಡಿತವನ್ನು ಪರಿಶೀಲಿಸಿದಾಗ ತುಂಬಾ ಕಡಿಮೆಯಾಗಿತ್ತು. ದೇಹ ಕೂಡಾ ಯಾವುದೇ ಪ್ರತಿಕ್ರಿಯೆಯನ್ನು ತೋರಿಸುತ್ತಿರಲಿಲ್ಲ. ತಕ್ಷಣ ವೈದ್ಯರು CPR ಮಾಡಿದ್ದಾರೆ. ನಂತರ ಮಹಿಳೆಯ ಆರೋಗ್ಯ ಸುಧಾರಿಸಿದೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ : Lokasabha Election 2024 : ದೇವೇಗೌಡರ ಕುಟುಂಬದಿಂದ ಹಕ್ಕು ಚಲಾವಣೆ : ಮತದಾನಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ಪೂಜೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.