ಮಹಿಳೆಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ಸಚಿವ ಸೋಮಣ್ಣ
ಹಂಗಳ ಗ್ರಾಮದಲ್ಲಿ ಹಕ್ಕುಪತ್ರ ವಿತರಣೆ ಸಂಬಂಧ ಮಹಿಳೆಗೆ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ ಕ್ಷಮೆ ಯಾಚನೆ ಮಾಡಿದ್ದಾರೆ.
ಚಾಮರಾಜನಗರ : ಹಂಗಳ ಗ್ರಾಮದಲ್ಲಿ ಹಕ್ಕುಪತ್ರ ವಿತರಣೆ ಸಂಬಂಧ ಮಹಿಳೆಗೆ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ ಕ್ಷಮೆ ಯಾಚನೆ ಮಾಡಿದ್ದಾರೆ.
ಇದನ್ನೂ ಓದಿ : Men Health Tips : ಪುರುಷರೆ 'ಟೈಟ್ ಜೀನ್ಸ್' ಧರಿಸುವುದು ಬಂಜೆತನ ಸಮಸ್ಯೆಗೆ ಕಾರಣ!
ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,45 ವರ್ಷ ಹಲವು ಏಳು ಬೀಳು ಕಂಡಿದ್ದೇನೆ. ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಣ್ಣ ಅಪಚಾರವನ್ನು ಮಾಡಿಲ್ಲ ಪ್ರಾಯಶಃ ಯಾರಿಗಾದರು ಮನಸ್ಸಿಗೆ ನೋವಾಗಿದ್ದಾರೆ ಕ್ಷಮೆ ಯಾಚಿಸುತ್ತೇನೆ ಎಂದು ವಿಷಾದ ವ್ಯಕ್ತಪಡಿಸಿದರು.ಸದ್ಗುರು ವಿರುದ್ಧ ಹೇಳಿಕೆ : ಕಾಂಗ್ರೆಸ್ ಮಾಜಿ ಎಂಎಲ್‌ಸಿ ವಿರುದ್ಧ ಲೀಗಲ್ ನೋಟಿಸ್
ಹಂಗಳದ ಘಟನೆ ಘಟನೆಯೇ ಅಲ್ಲಹೆಣ್ಣು ಮಗಳು ಪದೇಪದೇ ವೇದಿಕೆ ಮೇಲೆ ಬರ್ತಾ ಇದ್ದಳು.ತಾಯಿ ಎಷ್ಟು ಸಾರಿ ಬರ್ತೀಯ ತಾಯಿ ಅಂತ ವಿಚಾರಿಸಿದೆ, ನಿನ್ನ ಸಮಸ್ಯೆ ಬಗೆ ಹರಿಸ್ತೇನೆ ಎಂದು ಕೈಯಲ್ಲಿ ಪಕ್ಕಕ್ಕೆ ಸರಿಸಿದ್ದೇನೆ ಅಷ್ಟೇ ವಿನಃ ಇನ್ನೇನು ಉದ್ದೇಶ ಇರಲ್ಲಿಲ್ಲ.ಹೆಣ್ಣು ಮಕ್ಕಳ ಬಗ್ಗೆ ನನಗೆ ಅಪಾರವಾದ ಗೌರವ, ಮಮಕಾರ ಇದೆ.ನಾನು ಪ್ರತಿಯೊಬ್ಬರನ್ನು ಅಮ್ಮ, ತಾಯಿ ಎಂದೇ ಕರೆಯುತ್ತೇನೆ.ಆ ಹೆಣ್ಣು ಮಗಳಿಗೆ ಸಹ ಹಕ್ಕು ಪತ್ರ ಕೊಡಿಸಿದ್ದೇನೆ.ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಅವರು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.