ಕರ್ನಾಟಕದಲ್ಲಿ ಬ್ಯಾನ್ ಆಗುತ್ತಾ TikTok?

'ಟಿಕ್‌ ಟಾಕ್‌' ಆ್ಯಪ್‌ ಬ್ಯಾನ್ ಮಾಡುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ.

Last Updated : Apr 9, 2019, 12:12 PM IST
ಕರ್ನಾಟಕದಲ್ಲಿ ಬ್ಯಾನ್ ಆಗುತ್ತಾ TikTok? title=

ಬೆಂಗಳೂರು: ಅಶ್ಲೀಲ ಚಿತ್ರ ಹಾಗೂ ವೀಡಿಯೊಗಳನ್ನು ಒಳಗೊಂಡ ಆರೋಪದ ಹಿನ್ನೆಲೆಯಲ್ಲಿ 'ಟಿಕ್‌ ಟಾಕ್‌' ಆ್ಯಪ್‌ ಬ್ಯಾನ್ ಮಾಡುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ.

ಈ ಆಪ್ ನಲ್ಲಿ ಮಹಿಳೆಯರನ್ನು ಅಸಭ್ಯವಾಗಿ ತೋರಿಸಿ ಅಸುರಕ್ಷತೆ ಸೃಷ್ಟಿಸಲಾಗುತ್ತಿದೆ. ರಾಜ್ಯವಷ್ಟೇ ಅಲ್ಲದೆ ದೇಶಾದ್ಯಂತ ಈ ಟ್ರೆಂಡ್ ಶುರುವಾಗಿದೆ. ಮಹಿಳೆಯರ ಘನತೆಗೆ ಧಕ್ಕೆ ತರುತ್ತಿರುವ ಈ ಆ್ಯಪ್ ವಿರುದ್ಧ ಕ್ರಮ ಜರುಗಿಸುವಂತೆ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಹೇಳಿದ್ದಾರೆ.

ಈಗಾಗಲೇ ಹಲವು ಬಾರಿ ರಾಜ್ಯ ಟಿಕ್ ಟಾಕ್ ನಿಷೇಧ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಕೋರ್ಟ್ ಮೊರೆ ಹೋಗಲು ನಾಗಲಕ್ಷ್ಮಿ ಬಾಯಿ ನಿರ್ಧರಿಸಿದ್ದಾರೆ.

ಈಗಾಗಲೇ ಅಶ್ಲೀಲತೆಗೆ ಪ್ರಚೋದನೆ ನೀಡುತ್ತದೆ ಎಂಬ ಆರೋಪದ ಹಿನ್ನೆಲೆಯಲ್ಲಿ 'ಟಿಕ್‌ ಟಾಕ್‌' ಆ್ಯಪ್‌ ಆ್ಯಪ್‌ ಡೌನ್‌ಲೋಡ್‌ ಮೇಲೆ ಮದ್ರಾಸ್ ನ್ಯಾಯಾಲಯ ಏ.3ರಂದು ನಿರ್ಬಂಧ ಹೇರಿದೆ. ಅಲ್ಲದೆ, ಈ ವಿವಾದಿತ ಆ್ಯಪ್‌ ನಿಷೇಧಿಸಿ ಆದೇಶ ಹೊರಡಿಸುವಂತೆ ಕೇಂದ್ರ ಸರಕಾರಕ್ಕೂ ಮದ್ರಾಸ್‌ ಹೈಕೋರ್ಟ್‌ ಸೂಚನೆ ನೀಡಿದೆ. ಒಟ್ಟಾರೆ ಟಿಕ್ ಟಾಕ್ ಆಪ್ ನಿಷೇಧಕ್ಕೆ ದೇಶಾದ್ಯಂತ ಒಮ್ಮತ ವ್ಯಕ್ತವಾಗಿದ್ದು, ಸದ್ಯ ಈ ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

Trending News