Child Birth: 2 ಗಂಡು.. 2 ಹೆಣ್ಣು 4 ಮಕ್ಕಳಿಗೆ ಜನ್ಮ ಕೊಟ್ಟ ಮಹಾತಾಯಿ

ಹೆರಿಗೆಯಾದ 2 ಗಂಡು ಮತ್ತು 2 ಹೆಣ್ಣು ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.

Written by - Zee Kannada News Desk | Last Updated : May 23, 2022, 04:24 PM IST
  • ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ
  • ಭದ್ರಾವತಿಯ ಅಲ್ಮಾಜ್​ ಬಾನು 2 ಗಂಡು & 2 ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ
  • ತಾಯಿ ಮತ್ತು 4 ಮಕ್ಕಳು ಆರೋಗ್ಯವಾಗಿದ್ದಾರೆಂದು ತಿಳಿಸಿದ ಆಸ್ಪತ್ರೆ ವೈದ್ಯರು
Child Birth: 2 ಗಂಡು.. 2 ಹೆಣ್ಣು 4 ಮಕ್ಕಳಿಗೆ ಜನ್ಮ ಕೊಟ್ಟ ಮಹಾತಾಯಿ title=
ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ

ಶಿವಮೊಗ್ಗ: ಭದ್ರಾವತಿ ತಾಲೂಕಿನ ತಡಸಾ ಗ್ರಾಮದ ಆರೀಫ್‌ರವರ ಪತ್ನಿ, 22 ವರ್ಷ ವಯಸ್ಸಿನ ಅಲ್ಮಾಜ್​ ಬಾನುರವರು 4 ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಸೋಮವಾರ ಬೆಳಗ್ಗೆ 7.30ಕ್ಕೆ ಶಿವಮೊಗ್ಗ ನಗರದ ಸರ್ಜಿ ಆಸ್ಪತ್ರೆಯಲ್ಲಿ 4 ಮಕ್ಕಳಿಗೆ ಜನ್ಮ ನೀಡಿರುವುದು ವಿಶೇಷವಾಗಿದೆ. ಹೆರಿಗೆಯಾದ 2 ಗಂಡು ಮತ್ತು 2 ಹೆಣ್ಣು ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ: ತಲೆಗೆ ಪಿಸ್ತೂಲ್ ಇಟ್ಟು ಬಾಡಿಗೆಗಿದ್ದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಮನೆ ಮಾಲೀಕ ಅರೆಸ್ಟ್

ವೈದ್ಯಕೀಯ ಕ್ಷೇತ್ರದ ಪ್ರಕಾರ ಒಟ್ಟಿಗೆ 4 ಮಕ್ಕಳಿಗೆ ಜನ್ಮ ನೀಡುವ ಪ್ರಕರಣಗಳು ತುಂಬಾ ವಿರಳ. 5.12 ಲಕ್ಷ ಜನರಲ್ಲಿ ಒಬ್ಬರು ಮಾತ್ರ ಈ ರೀತಿ 4 ಮಕ್ಕಳಿಗೆ ಜನ್ಮ ನೀಡುವುದು ಕಂಡು ಬರುತ್ತದೆ.

ಅವಳಿ-ಜವಳಿ, ತ್ರಿವಳಿ ಮತ್ತು 4 ಮಕ್ಕಳಾಗುವುದಕ್ಕೆ ಅನುವಂಶಿಯ ಅಂಶಗಳೇ ಕಾರಣ ಎಂದು ಹೆರಿಗೆ ಮಾಡಿಸಿದ ಸರ್ಜಿ ಆಸ್ಪತ್ರೆಯ ಹಿರಿಯ ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞರಾದ ಡಾ.ಚೇತನಾ ಎನ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಟಿಪ್ಪು ಕೇವಲ ಮತಾಂಧನಷ್ಟೇ ಅಲ್ಲ, ಕನ್ನಡ ದ್ವೇಷಿ ಕೂಡ: ಬಿಜೆಪಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News