'ಜನರೊಂದಿಗೆ ನಿಕಟವಾದ ಸಂಬಂಧವಿಟ್ಟು ಕೆಲಸ ಮಾಡಿ'

ಪಾಲಿಕೆ ನೂತನ ಆಯುಕ್ತರಾದ ತುಷಾರ್ ಗಿರಿನಾಥ್ ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಬಿಬಿಎಂಪಿ ಆವರಣದಲ್ಲಿರುವ ಡಾ.ರಾಜ್ ಕುಮಾರ್ ಗಾಜಿನಮನೆಯಲ್ಲಿ ಸಾವಿರಾರು ಬಿಬಿಎಂಪಿ ಅಧಿಕಾರಿಗಳು ಭಾಗಿಯಾಗಿದ್ದರು.

Written by - Manjunath Hosahalli | Edited by - Manjunath N | Last Updated : May 10, 2022, 07:06 PM IST
  • ಬಿಬಿಎಂಪಿ ಅಧಿಕಾರಿ-ನೌಕರರ ಸಮಸ್ಯೆಗಳಿದ್ದರೆ ತಿಳಿಸಿ ಎಂದಾಗ, ಸಾಕಷ್ಟು ಅಧಿಕಾರಿಗಳು ತಮ್ಮ ಅಹವಾಲುಗಳನ್ನ ಹೇಳಿಕೊಂಡರು,
'ಜನರೊಂದಿಗೆ ನಿಕಟವಾದ ಸಂಬಂಧವಿಟ್ಟು ಕೆಲಸ ಮಾಡಿ' title=

ಬೆಂಗಳೂರು: ಪಾಲಿಕೆ ನೂತನ ಆಯುಕ್ತರಾದ ತುಷಾರ್ ಗಿರಿನಾಥ್ ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಬಿಬಿಎಂಪಿ ಆವರಣದಲ್ಲಿರುವ ಡಾ.ರಾಜ್ ಕುಮಾರ್ ಗಾಜಿನಮನೆಯಲ್ಲಿ ಸಾವಿರಾರು ಬಿಬಿಎಂಪಿ ಅಧಿಕಾರಿಗಳು ಭಾಗಿಯಾಗಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಧಿಕಾರಿಗಳು ನಾಗರಿಕರ ಜೊತೆ ನಿಕಟವಾದ ಸಂಬಂಧವಿಟ್ಟುಕೊಂಡು ಉತ್ತಮ ರೀತಿಯಲ್ಲಿ ಸ್ಪಂದಿಸಿದಾಗ ಮಾತ್ರ ಪಾಲಿಕೆಯ ಮೇಲೆ ಉತ್ತಮ ಅಭಿಪ್ರಾಯ ಬೀರಲು ಸಾಧ್ಯ. ಅಧಿಕಾರಿಗಳ ಮನೋಭಾವ ಬದಲಾದರೆ ಸಮಾಜದಲ್ಲಿ ನಾಗರಿಕರು ಕೂಡ ಸ್ಪಂದಿಸಿ ಅದಕ್ಕೆ ತಕ್ಕಂತೆ ಬದಲಾಗುತ್ತಾರೆ ಎಂದು ತಿಳಿಸಿದರು. 

ಇದನ್ನೂ ಓದಿ: ಬಿಜೆಪಿ ಸೇರ್ತಾರಾ ಸೌರವ್ ಗಂಗೂಲಿ...? ಗಂಗೂಲಿ ಮನೆಯಲ್ಲಿ ಔತಣಕೂಟದಲ್ಲಿ ಭಾಗಿಯಾಗಲಿರುವ ಅಮಿತ್ ಶಾ..!

ಅಧಿಕಾರಿಗಳು ನಿಷ್ಠೆಯಿಂದ ಕೆಲಸ ಮಾಡಿ- ಜನ ತಾನಾಗಿಯೇ ಕೃತಜ್ಞತೆ ಸಲ್ಲಿಸುತ್ತಾರೆ

ಇಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ-ಸಿಬ್ಬಂದಿಗಳು ಸಾಕಷ್ಟು ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಇಲ್ಲಿನ ವ್ಯವಸ್ಥೆಯ ಬಗ್ಗೆ ನಿಮಗೆ ಹೆಚ್ಚಿನ ಹರಿವಿರುತ್ತದೆ.ಸಮಸ್ಯೆ ಎಂದು ಬಂದವರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು.ಅಧಿಕಾರಿಗಳೆಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ನಿಷ್ಠೆಯಿಂದ ಕೆಲಸ ಮಾಡಿದರೆ ನಾಗರಿಕರು ಅದಕ್ಕೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಕನ್ನಡದ ಕೆಜಿಎಫ್ 2 ಸಿನಿಮಾ ನೋಡಿ...ವಾವ್ ಯಶ್..! ಎಂದ ಬಾಲಿವುಡ್ ನಟ ರಣವೀರ್ ಸಿಂಗ್..!

ಪಾಲಿಕೆಯಿಂದ ನಾಗರಿಕರಿಗೆ ಎಲ್ಲಾ ರೀತಿಯಲ್ಲಿ ಸೇವೆ ನೀಡುವ ಅವಕಾಶವಿದ್ದು, ಖಾತಾ ಪ್ರಮಾಣ ಪತ್ರ, ಉದ್ದಿಮೆ ಪರವಾನಗಿ, ಕಟ್ಟಡ ನಕ್ಷೆ ಮಂಜೂರಾತಿ,ಘನತ್ಯಾಜ್ಯ ಸಂಗ್ರಹಣೆ, ರಸ್ತೆ ಅಭಿವೃದ್ಧಿ, ಜನನ ಮತ್ತು ಮರಣ ಪತ್ರಗಳು ಸೇರಿದಂತೆ ಹಲವು ಸೇವೆಗಳನ್ನು ನೀಡುತ್ತೇವೆ.ಆ ಎಲ್ಲಾ ಸೇವೆಗಳು ನಾಗರಿಕರಿಗೆ ಸುಲಭವಾಗಿ ಸಿಗುವಂತಾಗಬೇಕು ಎಂದು ಆಶಿಸಿದರು.

ಬಿಬಿಎಂಪಿ ಅಧಿಕಾರಿ-ನೌಕರರ ಸಮಸ್ಯೆಗಳಿದ್ದರೆ ತಿಳಿಸಿ ಎಂದಾಗ, ಸಾಕಷ್ಟು ಅಧಿಕಾರಿಗಳು ತಮ್ಮ ಅಹವಾಲುಗಳನ್ನ ಹೇಳಿಕೊಂಡರು.ಅದರಲ್ಲೂ ಉನ್ನತ ತರಬೇತಿ ಕಾರ್ಯಾಗಾರ, ನೌಕರರ ಮುಂಬಡ್ತಿ, ಅಭಿಯಂತರ ನೇಮಕಾತಿ, ಅಧಿಕಾರಿ ಸಿಬ್ಬಂದಿಗಳಿಗೆ ಆರೋಗ್ಯ ಸೇವೆಯ ಚಿಕಿತ್ಸೆ ಬಗ್ಗೆ ತಮ್ಮ ಅಹವಾಲುಗಳನ್ನು ಹೇಳಿಕೊಂಡರು. ಇದಕ್ಕೆ ತಕ್ಷಣವೇ ಸ್ಪಂದಿಸಿ ತಮ್ಮ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಬಗೆಹರಿಸುವಂತೆ ಹಿರಿಯ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಆಯುಕ್ತ ತುಷಾರ್ ಗಿರಿನಾಥ್ ನಿರ್ದೇಶನ ನೀಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News