ಬಸ್ ನಿಲ್ದಾಣ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ.

Updated: Jan 12, 2019 , 02:35 PM IST
ಬಸ್ ನಿಲ್ದಾಣ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ಬಸ್ ನಿಲ್ದಾಣದ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಶಾಂತಿನಗರ ಬಸ್ ನಿಲ್ದಾಣದಲ್ಲಿ ಶನಿವಾರ ಮುಂಜಾನೆ ನಡೆದಿದೆ. 

ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಸ್ವಾತಿ ಡಿಲಕ್ಸ್ ಹೋಟೆಲ್​ ಕಟ್ಟಡದ 7ನೇ ಮಹಡಿಯಲ್ಲಿ ಉಳಿದುಕೊಂಡಿದ್ದ 30 ವರ್ಷದ ಕಾರ್ಮಿಕ ಇಂದು ಬೆಳಗಿನ ಜಾವ 2.30ರ ಸಮಯದಲ್ಲಿ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾನೆ. ಈತನೊಂದಿಗೆ ಇತರ ಕಾರ್ಮಿಕರೂ ವಾಸವಿದ್ದರು ಎಂದು ಮೂಲಗಳು ತಿಳಿಸಿವೆ. 

ಆದರೆ ಈತನ ಸಾವಿಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಕಾರ್ಮಿಕನನ್ನು ಕಟ್ಟಡ ಮೇಲಿನಿಂದ ಯಾರೋ ತಳ್ಳಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವಿಲ್ಸನ್ ಕಾರ್ಡನ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.