ವಿಶ್ವ ದರ್ಜೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ: ಪ್ರವಾಸಿ ತಾಣಗಳಿಗೆ ವೋಟ್ ಮಾಡಲು ಆಹ್ವಾನ
ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸಲು ಹಾಗೂ ವಿಶ್ವ ದರ್ಜೆಯಲ್ಲಿ ಅಭಿವೃದ್ಧಿ ಪಡಿಸಲು ಆನ್‌ಲೈನ್ ವೋಟಿಂಗ್ ಕ್ಯಾಂಪೇನ್ ಪ್ರಾರಂಭಿಸಿದ್ದು, ಜಿಲ್ಲೆಯ ನಾಗರಿಕರು ಹಾಗೂ ಪ್ರವಾಸಿಗರು ತಮ್ಮ ಇಷ್ಟದ ಆದ್ಯತೆಯ ಪ್ರವಾಸಿ ತಾಣಗಳಿಗೆ ಆನ್‌ಲೈನ್ ಮೂಲಕ ವೋಟ್ ಮಾಡಬಹುದು ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಬಳ್ಳಾರಿ: ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸಲು ಹಾಗೂ ವಿಶ್ವ ದರ್ಜೆಯಲ್ಲಿ ಅಭಿವೃದ್ಧಿ ಪಡಿಸಲು ಆನ್‌ಲೈನ್ ವೋಟಿಂಗ್ ಕ್ಯಾಂಪೇನ್ ಪ್ರಾರಂಭಿಸಿದ್ದು, ಜಿಲ್ಲೆಯ ನಾಗರಿಕರು ಹಾಗೂ ಪ್ರವಾಸಿಗರು ತಮ್ಮ ಇಷ್ಟದ ಆದ್ಯತೆಯ ಪ್ರವಾಸಿ ತಾಣಗಳಿಗೆ ಆನ್‌ಲೈನ್ ಮೂಲಕ ವೋಟ್ ಮಾಡಬಹುದು ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಲು ಬಳ್ಳಾರಿ ಜಿಲ್ಲೆಯ ಬಳ್ಳಾರಿ ಕೋಟೆ, ನಾಗಲಕೆರೆ, ಸಂಗನಕಲ್ಲು ಹಾಗೂ ಸಂಡೂರು ಪ್ರವಾಸಿ ತಾಣಗಳನ್ನು ಆದ್ಯತಾ ಪ್ರವಾಸಿ ತಾಣಗಳನ್ನಾಗಿ ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ಸ್ವಾತಂತ್ರ್ಯ ದಿನದಂದು ಸಿಹಿ ತಿಂಡಿ ನೀಡಿಲ್ಲ ಎಂದು ಶಿಕ್ಷಕರಿಗೆ ಥಳಿಸಿದ ವಿದ್ಯಾರ್ಥಿಗಳು!
ನಾಗರಿಕರು ಹಾಗೂ ಪ್ರವಾಸಿಗರು ತಮ್ಮ ಇಷ್ಟದ ಆದ್ಯತೆಯ ಪ್ರವಾಸಿ ತಾಣಗಳಿಗೆ ವೋಟ್ ಮಾಡಲು “Dekho Apna Desh, People's Choice 2024” ಕ್ಯಾಂಪೇನ್ ಅಡಿ https://innovateindia.mygov.in/dekho-apna- desh/ ವೆಬ್‌ಸೈಟ್‌ನಲ್ಲಿ ಲಾಗಿನ್ ಆಗುವ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ವೋಟ್ ಮಾಡಿ ಪ್ರಮಾಣ ಪತ್ರ ಪಡೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಕು.
ಪ್ರವಾಸಿ ತಾಣಗಳಿಗೆ ವೋಟ್ ಮಾಡಲು ಸೆ.15 ಅಂತಿಮ ದಿನವಾಗಿದೆ.
ಬಳ್ಳಾರಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪ್ರಚಾರವನ್ನು ನೀಡಲು ಜಿಲ್ಲೆಯ ಎಲ್ಲಾ ನಾಗರಿಕರು ಹಾಗೂ ಪ್ರವಾಸಿಗರು ಸಹಕರಿಸಬೇಕು ಎಂದು ಅವರು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕೋರಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.