ಹುಬ್ಬಳ್ಳಿ: 21 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ, ಮೂವರ ಬಂಧನ

ಪೊಲೀಸರು 21 ಲಕ್ಷ ಮೌಲ್ಯದ ಚಿನ್ನದ ಆಭರಣ, ಕ್ಯಾಮರಾ ಮತ್ತು ಮೋಟಾರ್ಸೈಕಲ್ ಅನ್ನು ವಶಪಡಿಸಿಕೊಂಡಿದ್ದಾರೆ.
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 21 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಇದೊಂದು ಕಳ್ಳರ ಜಾಲವಾಗಿದೆ. ರೂ. 21 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಮಾಹಿತಿ ಮೇರೆಗೆ ಬೆನ್ನಟ್ಟಿ ಮೂವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಓರ್ವ ಹದಿಹರೆಯದವನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇವರನ್ನು ಅಂತರ್ ರಾಜ್ಯ ಗ್ಯಾಂಗ್ ಸ್ಟರ್ ಗಳೆಂದು ಊಹಿಸಲಾಗಿತ್ತು, ಅವರಿಂದ ಚಿನ್ನಾಭರಣದ ಜೊತೆಗೆ ಕ್ಯಾಮರಾ ಮತ್ತು ಮೋಟಾರ್ಸೈಕಲ್ ಅನ್ನು ಕೂಡ ವಶಕ್ಕೆ ಪಡೆಯಲಾಗಿದೆ. ತಲೆಮರಿಸಿಕೊಂಡಿರುವ ಇಬ್ಬರು ಆರೋಪಿಗಳನ್ನು ನಮ್ಮ ತಂಡ ಹುಡುಕುತ್ತಿದೆ ಎಂದು ಪೊಲೀಸ್ ಆಯುಕ್ತ ಎಂ.ಎನ್ ನಾಗರಾಜ್ ಹೇಳಿದ್ದಾರೆ.