ಫೆ.25 ರಂದು ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ಭರ್ತಿಗಾಗಿ ಲಿಖಿತ ಪರೀಕ್ಷೆ

 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ (ಸಿವಿಲ್)(ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‍ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷಯನ್ನು ಫೆಬ್ರವರಿ 25, 2024 ರಂದು ಬೆಳಿಗ್ಗೆ 11 ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು.

Written by - Manjunath N | Last Updated : Feb 14, 2024, 04:05 PM IST
  • ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು,
  • ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
  • ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ, ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದೆ
ಫೆ.25 ರಂದು ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ಭರ್ತಿಗಾಗಿ ಲಿಖಿತ ಪರೀಕ್ಷೆ title=
ಸಾಂಧರ್ಭಿಕ ಚಿತ್ರ

ಧಾರವಾಡ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ (ಸಿವಿಲ್)(ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‍ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷಯನ್ನು ಫೆಬ್ರವರಿ 25, 2024 ರಂದು ಬೆಳಿಗ್ಗೆ 11 ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು.

ಆದ್ದರಿಂದ, ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್‍ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ ಹಾಗೂ ಸದರಿ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಈ ಕೆಳಕಂಡ ವಸ್ತ್ರ ಸಂಹಿತೆಯನ್ನು ಪಾಲಿಸತಕ್ಕದ್ದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ ಅವರು ತಿಳಿಸಿದ್ದಾರೆ.

ಇದನ್ನೂ ಓದಿ- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ : ಯಾರಾಗಲಿದ್ದಾರೆ ಬಿಜೆಪಿ ಅಭ್ಯರ್ಥಿ..?

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್‍ಗಳು ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸತಕ್ಕದ್ದಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸತಕ್ಕದ್ದಲ್ಲ. ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸಿರಬೇಕು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ- Rahul Gandhi: ವಯನಾಡ್ ಕ್ಷೇತ್ರದ ಮೇಲೆ CPI ಕಣ್ಣು! ಲೋಕ ಚುನಾವಣೆಯಲ್ಲಿ ರಾಹುಲ್ ಗಾಂಧಿಗೆ ಕುತ್ತುತರುತ್ತಾ ಮಿತ್ರಪಕ್ಷ?

ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬೂಚಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ.

ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ, ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News