ಯಾದಗಿರಿ: ಹೈಕೋರ್ಟ್ ಆದೇಶ ಬಂದರು ಸಹ ನಾವು ಹಿಜಾಬ್ (Hijab) ಧರಿಸುತ್ತೇವೆ. ನಮಗೆ ಶಿಕ್ಷಣ ಹಾಗೂ ಹಿಜಾಬ್ (Hijab verdict) ಎರಡೂ ಮುಖ್ಯ. ನಾವು ಹಿಜಾಬ್ ತೆಗೆಯಲ್ಲ ಎಂದು ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿ ಅಸ್ರಾ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Hijab Verdict:ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಬಗ್ಗೆ ಚರ್ಚೆ ಮಾಡುತ್ತೇವೆ- ಎಂಎಲ್ ಸಿ ಸಿ.ಎಂ.ಇಬ್ರಾಹಿಂ


ಹಿಜಾಬ್ (Hijab Row) ಕುರಿತು ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಮಾತನಾಡಿರುವ ಯಾದಗಿರಿ ನಗರದ ಜ್ಯೂನಿಯರ್ ಪಿಯು ಕಾಲೇಜು ವಿದ್ಯಾರ್ಥಿನಿ ಅಸ್ರಾ, ಹಿಜಾಬ್ ಧರಿಸಿ ಪೂರಕ ಪರೀಕ್ಷೆ ಬರೆಯುತ್ತೇವೆ. ಹಿಜಾಬ್ (Karnataka HC Verdict on Hijab) ತೆಗೆದು ಪರೀಕ್ಷೆ ಬರೆಯಬೇಕೆಂದರೆ ನಾವು ಪರೀಕ್ಷೆಯನ್ನೇ ಬರೆಯಲ್ಲ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ವಿದ್ಯಾರ್ಥಿನಿ ಹೇಳಿದ್ದಾರೆ.


ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ (Karnataka High Court) ತೀರ್ಪು ಪ್ರಕಟಿಸಿದೆ. ಹಿಜಾಬ್ ಗೆ ಅವಕಾಶ ಕೋರಿ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಹಿಜಾಬ್ ಇಸ್ಲಾಂ ಧರ್ಮದ ಅವಿಭಾಜ್ಯ ಅಂಗವಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.


ಇದನ್ನೂ ಓದಿ: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ : ಹೈಕೋರ್ಟ್


ಹಿಜಾಬ್ ಧಾರ್ಮಿಕ ನಂಬಿಕೆಯ ಭಾಗವಾಗಿರುವುದರಿಂದ ತರಗತಿಯಲ್ಲಿ ಶಾಲಾ ಸಮವಸ್ತ್ರದ (uniform) ಜೊತೆಗೆ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ , ಉಡುಪಿಯ ವಿದ್ಯಾರ್ಥಿನಿಯರು ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹಿಜಾಬ್ ಗೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಯನ್ನು ರಾಜ್ಯ ಹೈ ಕೋರ್ಟ್ ವಜಾ ಮಾಡಿದೆ. ಈ ಬಗ್ಗೆ ಸಾಕಷ್ಟು ಪರ-ವಿರೋಧ ವ್ಯಕ್ತವಾಗುತ್ತಿದೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.