ಬೆಂಗಳೂರು :  ರಾಜ್ಯದಲ್ಲಿ ಗೋಹತ್ಯಾ ನಿಷೇಧ ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಲು  ಸರ್ಕಾರ ನಿರ್ಧರಿಸಿದೆ. ಈ ಹಿಂದೆ ಮೇಲ್ಮನೆಯಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಅಂಗೀಕಾರವಾಗಲಿಲ್ಲ. ವಿಧೇಯಕ ಅಂಗೀಕಾರವಾಗಿರದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ತರಲು ಸಂಪುಟ  ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಪ್ರಸ್ತಾವನೆಯನ್ನು ಹಸ್ತಾಕ್ಷರಕ್ಕಾಗಿ ರಾಜ್ಯಪಾಲರ ಬಳಿಗೆ ಕಳುಹಿಸಲಾಗುವುದು. ರಾಜ್ಯಪಾಲರ ಹಸ್ತಾಕ್ಷರ ಬಿದ್ದ ತಕ್ಷಣ ಸುಗ್ರೀವಾಜ್ಞೆ ಜಾರಿಗೆ ಬರಲಿದೆ.


COMMERCIAL BREAK
SCROLL TO CONTINUE READING


ರಾಜ್ಯದಲ್ಲಿ ಗೋಹತ್ಯೆ ನಿಷೇಧ (Anti Cow Slaughter ) ಜಾರಿಗೆ ತರುವ ಉದ್ದೇಶದಿಂದ   ಸುಗ್ರೀವಾಜ್ಞೆ ತರಲು  ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ.  ಈ ಬಗ್ಗೆ ಮಾತನಾಡಿದ ಸಚಿವ ಪ್ರಭು ಚೌಹಾಣ್, ( Prabhu Chowhan) ಗೋಹತ್ಯೆ ನಿಷೇಧಕ್ಕಾಗಿ   ಸುಗ್ರೀವಾಜ್ಞೆ ತರಲು ಸಚಿವ ಸಂಪುಟದಲ್ಲಿ (Cabinet) ಒಪ್ಪಿಗೆ ಸಿಕ್ಕಿದೆ. ವಿಧಾನ ಪರಿಷತ್ ನಲ್ಲಿ ವಿಧೇಯಕ ಅಂಗೀಕಾರ ಆಗಿರಲಿಲ್ಲ. ಹೀಗಾಗಿ ಸುದೀರ್ಘ ಚರ್ಚೆ ಮಾಡಿ ಸುಗ್ರೀವಾಜ್ಞೆಗೆ (Ordinance) ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ. ನಮ್ಮ ಉದ್ದೇಶ ಗೋವುಗಳ ಸಂರಕ್ಷಣೆ. ಈ ಕಾಯ್ದೆ ಅನುಷ್ಠಾನಕ್ಕೆ ಶ್ರಮಪಟ್ಟು ದುಡಿಯುವುದಾಗಿ ತಿಳಿಸಿದ್ದಾರೆ.


ಗೋವಾದಲ್ಲಿ ಗೋ ಮಾಂಸ ಸರಬರಾಜಿಗೆ ಟೆಂಡರ್ ಪಡೆದಿದ್ದೀರಾ : ಸಿಟಿ ರವಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ


ಗೋವು ನಮ್ಮ ರೈತರ ಜೀವನಾಧಾರದ ಮೂಲವಾಗಿದೆ. ಇತ್ತೀಚಿನ ದಿನಗಳಲ್ಲಿ ಗೋವುಗಳ ಸಂಖ್ಯೆಯಲ್ಲಿ  ಗಣನೀಯ ಇಳಿಕೆ ಕಂಡು ಬಂದಿದ್ದು, ಇದು ಆತಂಕದ ವಿಚಾರವಾಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.  ಪಕ್ಷಭೇದವನ್ನು ಮರೆತು ಗೋವುಗಳ ಸಂರಕ್ಷಣೆಗೆ ಎಲ್ಲರೂ ಮುಂದಾಗುವಂತೆ  ಸಚಿವ  ಪ್ರಭು ಚೌಹಾಣ್ ಕರೆ ನೀಡಿದ್ದಾರೆ. ರಾಜಕೀಯ ದುರುದ್ದೇಶಕ್ಕಾಗಿ,  ಮಸೂದೆಯನ್ನು ವಿರೋಧಿಸಿ ಜನರ ಮನಸ್ಸಿನಲ್ಲಿ ತಪ್ಪು ಕಲ್ಪನೆ ಮೂಡಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. 


ಅಕ್ರಮ ಗೋವುಗಳ ಸಾಗಣೆ ಮತ್ತು ವಧೆ ತಡೆಯುವುದು ನಮ್ಮ ತುರ್ತು ಆದ್ಯತೆಯಾಗಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ (Anti Cow Slaughter Bill) ಜಾರಿಗೆ ಬಂದರೆ ಈ ಅಕ್ರಮಗಳಿಗೆ ಕಡಿವಾಣ ಬೀಳಲಿದೆ ಎಂದರು.


ALSO READ : ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ: ಸದನದಲ್ಲಿ ಮೊಳಗಿತು ಜೈ ಶ್ರೀರಾಮ್ ಘೋಷಣೆ!


ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ( B S Yadiyurappa) ಹಾಗೂ ನನ್ನ ಎಲ್ಲ ಸಚಿವ ಸಂಪುಟ ಸಹೋದ್ಯೋಗಿಗಳಿಗೆ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ (Naleen Kumar Kateel) ಅವರಿಗೆ ರಾಜ್ಯದ ಎಲ್ಲ ಗೋವುಗಳ ಸಂರಕ್ಷಣೆಯಲ್ಲಿ ತೊಡಗಿರುವುವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G


iOS Link - https://apple.co/3loQYe
 
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.