ಧಾರಾಕಾರ ಮಳೆ, ಜಲ ದಿಗ್ಬಂಧನಗೊಂಡ ಯಲ್ಲಮ್ಮವಾಡಿ ಯಲ್ಲಮ್ಮ ದೇವಸ್ಥಾನ

ಅಥಣಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ಯಲ್ಲಮ್ಮವಾಡಿ ಕೆರೆ ತುಂಬಿ ದೇವಸ್ಥಾನ ಮುಂಭಾಗದ ಹಳ್ಳದಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದು, ದೇವಸ್ಥಾನ ಸುತ್ತಲೂ ನೀರು ಆವರಿಸಿದೆ. ನವರಾತ್ರಿ ಹಬ್ಬದ ಪ್ರಯುಕ್ತ ದಿನನಿತ್ಯ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಾರೆ. ಸದ್ಯ ದೇವಸ್ಥಾನ ಜಲ ದಿಗ್ಬಂಧನಗೊಂಡ ಹಿನ್ನೆಲೆ ಭಕ್ತರು ಹಳ್ಳ ದಾಟಿಕೊಂಡು ದೇವರ ದರ್ಶನವನ್ನು ಪಡೆಯುತ್ತಿದ್ದಾರೆ. 

Written by - Yashaswini V | Last Updated : Sep 30, 2022, 07:56 AM IST
  • ರಾಜ್ಯದಲ್ಲಿ ಯಲ್ಲಮ್ಮವಾಡಿ ಯಲ್ಲಮ್ಮ ದೇವಿ ದೇವಸ್ಥಾನ ಎರಡನೆ ದೊಡ್ಡ ದೇವಾಲಯ ಎಂದು ಪ್ರಖ್ಯಾತಿ ಹೊಂದಿದೆ.
  • ಸದ್ಯ ನವರಾತ್ರಿ ಆಚರಣೆಯಲ್ಲಿರುವ ಭಕ್ತರಿಗೆ ಮಳೆರಾಯನ ದೇವರ ದರ್ಶನಕ್ಕೆ ಅಡಚಣೆ ಉಂಟಾಗಿದೆ.
  • ಎರಡು ತಿಂಗಳು ಪೂರ್ಣವಾಗುವ ಮೊದಲೇ ಎರಡನೇ ಬಾರಿಗೆ ದೇವಾಲಯ ಜಲ ದಿಗ್ಬಂಧನಕ್ಕೆ ಒಳಗಾಗಿದೆ.
ಧಾರಾಕಾರ ಮಳೆ, ಜಲ ದಿಗ್ಬಂಧನಗೊಂಡ ಯಲ್ಲಮ್ಮವಾಡಿ ಯಲ್ಲಮ್ಮ ದೇವಸ್ಥಾನ  title=
Rain Effect

ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗಡಿನಾಡು ಶಕ್ತಿ ದೇವತೆ ಯಲ್ಲಮ್ಮವಾಡಿ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಜಲ ದಿಗ್ಬಂಧನಗೊಂಡಿದೆ. 

ಅಥಣಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ಯಲ್ಲಮ್ಮವಾಡಿ ಕೆರೆ ತುಂಬಿ ದೇವಸ್ಥಾನ ಮುಂಭಾಗದ ಹಳ್ಳದಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದು, ದೇವಸ್ಥಾನ ಸುತ್ತಲೂ ನೀರು ಆವರಿಸಿದೆ. ನವರಾತ್ರಿ ಹಬ್ಬದ ಪ್ರಯುಕ್ತ ದಿನನಿತ್ಯ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಾರೆ. ಸದ್ಯ ದೇವಸ್ಥಾನ ಜಲ ದಿಗ್ಬಂಧನಗೊಂಡ ಹಿನ್ನೆಲೆ ಭಕ್ತರು ಹಳ್ಳ ದಾಟಿಕೊಂಡು ದೇವರ ದರ್ಶನವನ್ನು ಪಡೆಯುತ್ತಿದ್ದಾರೆ. 

ಇದನ್ನೂ ಓದಿ- "ಸಂವಿಧಾನಕ್ಕೆ ಗೌರವ ಕೊಡದ ಲೂಟಿ ರವಿಯಿಂದ ಕಾಂಗ್ರೆಸ್ ಕಲಿಯಬೇಕಿಲ್ಲ"

ರಾಜ್ಯದಲ್ಲಿ ಯಲ್ಲಮ್ಮವಾಡಿ ಯಲ್ಲಮ್ಮ ದೇವಿ ದೇವಸ್ಥಾನ ಎರಡನೆ ದೊಡ್ಡ ದೇವಾಲಯ ಎಂದು ಪ್ರಖ್ಯಾತಿ ಹೊಂದಿದೆ. ಸದ್ಯ ನವರಾತ್ರಿ ಆಚರಣೆಯಲ್ಲಿರುವ ಭಕ್ತರಿಗೆ ಮಳೆರಾಯನ ಅಬ್ಬರದಿಂದ ದೇವರ ದರ್ಶನಕ್ಕೆ ಅಡಚಣೆ ಉಂಟಾಗಿದೆ. 

ಇದನ್ನೂ ಓದಿ- ರಾಜ್ಯದಲ್ಲಿ ಹೊಸದಾಗಿ 4000 ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಕ್ರಮ..!

ಎರಡು ತಿಂಗಳು ಪೂರ್ಣವಾಗುವ ಮೊದಲೇ ಎರಡನೇ ಬಾರಿಗೆ ದೇವಾಲಯ ಜಲ ದಿಗ್ಬಂಧನಕ್ಕೆ ಒಳಗಾಗಿದೆ. ಇದರಿಂದಾಗಿ  ಹಳ್ಳದ ಪಕ್ಕದಲ್ಲಿ ಮಂಗಳ ದ್ರವ್ಯಗಳ ವ್ಯಾಪಾರಸ್ಥರು ಪರದಾಡುವಂತಾಗಿದ್ದು ತಮ್ಮ ವಸ್ತುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News