)
Yathindra Siddaramaiah about the next CM of Karnataka: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ ನಡೆದ ಶ್ರೀ ಸಂತ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಯತೀಂದ್ರ ಸಿದ್ದರಾಮಯ್ಯ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಬಗ್ಗೆ ಹೇಳಿಕೆ ನೀಡಿದ್ದಾರೆ.
ʼನಮ್ಮ ತಂದೆಯವರು ತಮ್ಮ ರಾಜಕೀಯ ಕೊನೆಗಾಲದಲ್ಲಿದ್ದಾರೆ. ವೈಚಾರಿಕವಾಗಿ ಪ್ರಗತಿಪರ ತತ್ವ ಸಿದ್ದಾಂತ ಇರುವ ನಾಯಕರು ಬೇಕು. ಸತೀಶ್ ಜಾರಕಿಹೊಳಿಯವರು ಈ ಜವಾಬ್ದಾರಿ ನಿಭಾಯಿಸುತ್ತಾರೆ. ಜಾರಕಿಹೊಳಿ ಅವರು ಮಾದರಿಯಾಗಿ ನಮ್ಮನ್ನು ಮುನ್ನಡೆಸುತ್ತಾರೆ. ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಸತೀಶ್ ಜಾರಕಿಹೊಳಿಯವರು ಸೂಕ್ತʼ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಹೇಳಿಕೆ ನೀಡುವ ಮೂಲಕ ಯತೀಂದ್ರ ಅವರು, ನವೆಂಬರ್ ಕ್ರಾಂತಿ ಮುನ್ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ, ಜಾರಕಿಹೊಳಿ ಕುಟುಂಬಕ್ಕೆ ಸಿಎಂ ಪಟ್ಟ ಒಲಿಯುವ ಸಾಧ್ಯತೆ ಎದ್ದು ತೋರುತ್ತಿದೆ. ಆದರೆ ಈ ಹೊಸ ಪರ್ವ ಈ ವರ್ಷದಲ್ಲೇ ಆಗಲಿದೆಯೇ? ಅಥವಾ ಮುಂದಿನ ವರ್ಷ ನಡೆಯಲಿದೆಯೇ? ಎಂದು ಸ್ಪಷ್ಟವಿಲ್ಲ.