ಹುಬ್ಬಳ್ಳಿ: ಯಡಿಯೂರಪ್ಪ ಅವರಿಗೆ ಯಾವಾಗಲೂ ವಿಧಾನಸೌಧದ ಮೂರನೇ ಮಹಡಿ ಕನಸು ಬೀಳುತ್ತೆ, ಮತ್ಯಾವ ಕನಸೂ ಬಿಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವ್ಯಂಗ್ಯ ಮಾಡಿದರು. 


COMMERCIAL BREAK
SCROLL TO CONTINUE READING

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಯಾವಾಗಲು ಸರ್ಕಾರ ಬೀಳುತ್ತೆ ಅಂತ ಹೇಳಿಕೆ ನೀಡುತ್ತಲೇ ಇರುತ್ತಾರೆ. ಆದರೆ ಅದೆಲ್ಲಾ ಸುಳ್ಳು. ಸರ್ಕಾರ ಸುಭದ್ರವಾಗಿದೆ. ದೀಪಾವಳಿ ಬಳಿಕ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.


ಮುಂದುವರೆದು ಮಾತನಾಡಿದ ಅವರು, ಶನಿವಾರ ರಾಜ್ಯದ ಎರಡು ವಿಧಾನಸಭೆ ಮತ್ತು ಮೂರು ಲೋಕಸಭೆ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ. ಆದರೆ ಶಿವಮೊಗ್ಗದಲ್ಲಿ ತುಂಬಾ ಫೈಟ್ ಇದೆ. ಆದರೂ ಗೆಲುವು ನಮ್ಮದೇ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. 


ರೈತರ ಸಾಲ ವಿಚಾರವನ್ನು ಸಮನ್ವಯ ಸಮಿತಿಯಲ್ಲಿ ಚರ್ಚೆ ಮಾಡಿ, ನಾವು ಅನುಮತಿ ಕೊಟ್ಟಿದ್ದೇವೆ. ಈಗ ನವೆಂಬರ್ ತಿಂಗಳಲ್ಲಿ ರೈತರಿಗೆ ಸಾಲ ವಿಮೋಚನಾ ಪತ್ರ ನೀಡಲಾಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.


ರೈತರ ಸಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರೈತರಿಗೆ ಬ್ಯಾಂಕುಗಳ ನೋಟಿಸ್ ನೀಡುತ್ತಿರುವ ವಿಚಾರ ಗೊತ್ತಿಲ್ಲ. ಇದರ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ಮೊನ್ನೆ ಮುಖ್ಯಮಂತ್ರಿಗಳು ಸಾಲ ವಿಮೋಚನಾ ಪತ್ರ ರೈತರಿಗೆ ನೀಡುವುದಾಗಿ ಹೇಳಿದ್ದಾರೆ ಎಂದು ವಿವರಿಸಿದರು.