ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಪ್ರವಾಸ

ನಿನ್ನೆ  ಡಾ. ಸುಧಾಕರ್ ಪ್ರತಿನಿಧಿಸುವ ಚಿಕ್ಕಬಳ್ಳಾಪುರ ಮತ್ತು ಎಂಟಿಬಿ ನಾಗರಾಜ್ ಸ್ಪರ್ಧಿಸುವ ಹೊಸಕೋಟೆ ಭೇಟಿ ನೀಡಿದ್ದ ಯಡಿಯೂರಪ್ಪ ಇಂದು ರಾಣೆಬೆನ್ನೂರು ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ.

Last Updated : Nov 5, 2019, 08:45 AM IST
ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಪ್ರವಾಸ

ಬೆಂಗಳೂರು: ರಾಜ್ಯ ಸರ್ಕಾರ ಟೇಕ್ ಆಫ್ ಆಗಿಲ್ಲ ಎಂಬ ವ್ಯಾಪಕ ಟೀಕೆ ಇದ್ದರೂ ಕೇರು ಮಾಡದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ 15 ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಕ್ಷೇತ್ರಗಳ ಪ್ರವಾಸದಲ್ಲಿ ನಿರತರಾಗಿದ್ದಾರೆ.

ನಿನ್ನೆ  ಡಾ. ಸುಧಾಕರ್ ಪ್ರತಿನಿಧಿಸುವ ಚಿಕ್ಕಬಳ್ಳಾಪುರ ಮತ್ತು ಎಂಟಿಬಿ ನಾಗರಾಜ್ ಸ್ಪರ್ಧಿಸುವ ಹೊಸಕೋಟೆ ಭೇಟಿ ನೀಡಿದ್ದ ಯಡಿಯೂರಪ್ಪ ಇಂದು ರಾಣೆಬೆನ್ನೂರು ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ. ರಾಣೆಬೆನ್ನೂರು, ಪಕ್ಷೇತರ (ಕೆಪಿಜೆಪಿ) ಶಾಸಕ ಆರ್. ಶಂಕರ್ ಪ್ರತಿನಿಧಿಸುವ ಕ್ಷೇತ್ರ.

ಇದಲ್ಲದೆ ನವೆಂಬರ್ 7ರಂದು ಅನರ್ಹ ಶಾಸಕ ಬಿ.ಸಿ. ಪಾಟೀಲ್ ಪ್ರತಿನಿಧಿಸುವ ಹಿರೆಕೆರೂರು ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಎರಡು ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮತ್ತು ಅಲ್ಲಿ ಸಾರ್ವಜನಿಕ ಸಭೆಗಳಲ್ಲೂ ಭಾಗವಹಿಸಿ ಅನರ್ಹರ ಪರ ಮತಯಾಚನೆ ಮಾಡಲಿದ್ದಾರೆ.
 

More Stories

Trending News