"ಯಡಿಯೂರಪ್ಪ, ಅನಂತ ಕುಮಾರ್, ಜಗದೀಶ್ ಶೆಟ್ಟರ್, ಈಶ್ವರಪ್ಪನವರನ್ನು ಚುನಾವಣಾ ಸಮಯದಲ್ಲಿ ಕಡೆಗಣಿಸಿದ್ದು. ಬಿಜೆಪಿಗೆ ನಷ್ಟವಾಯಿತು"

ಭಾರತೀಯ ಜನತಾ ಪಕ್ಷ ನನಗೆ ತಾಯಿ ಸಮಾನ. ನನಗೆ ಎಲ್ಲಾ ಸ್ಥಾನ ಮಾನ ನೀಡಿರುವುದು ಬಿಜೆಪಿ. ಪಕ್ಷಕ್ಕೆ ಹೀನಾಯ ಸೋಲಾದಾಗ ನಾವೆಲ್ಲರೂ ಸತ್ಯಸಂಗತಿಗಳ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳಲೇಬೇಕು.ಜನತಾ ನ್ಯಾಯಾಲಯದಲ್ಲಿ ಜನರು ತೀರ್ಪು ನೀಡಿದ್ದಾರೆ ಅದಕ್ಕೆ ನಾವು ತಲೆಬಾಗಲೇಬೇಕು. ಅದೇ ಜನಸಾಮಾನ್ಯರು ತಿಳಿಸಿದ ಅಭಿಪ್ರಾಯವನ್ನು ನಾನು ತಿಳಿಸುತ್ತಿದ್ದೇನೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

Written by - Manjunath N | Last Updated : Jun 28, 2023, 09:52 PM IST
  • ಬಿಜೆಪಿ ಪಕ್ಷವನ್ನು ಹಗಲು ರಾತ್ರಿ ಕಟ್ಟಿದ ಹಿರಿಯರಾದ ಯಡಿಯೂರಪ್ಪ, ದಿವಂಗತ ಅನಂತ ಕುಮಾರ್, ಜಗದೀಶ್ ಶೆಟ್ಟರ್, ಈಶ್ವರಪ್ಪ ನವರದ್ದು ಬಹುದೊಡ್ಡ ಪಾತ್ರವಿದೆ.
  • ಅಂಥವರನ್ನು ಚುನಾವಣಾ ಸಮಯದಲ್ಲಿ ಕಡೆಗಣಿಸಿದ್ದು. ಬಿಜೆಪಿಗೆ ನಷ್ಟವಾಯಿತು.ಬಿಜೆಪಿ ರಾಜ್ಯದ ಅಧ್ಯಕ್ಷರಿಗೆ ವಿನಂತಿ ಮಾಡುತ್ತೇನೆ
  • ನಿಮ್ಮ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ತಾವು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.
"ಯಡಿಯೂರಪ್ಪ, ಅನಂತ ಕುಮಾರ್, ಜಗದೀಶ್ ಶೆಟ್ಟರ್, ಈಶ್ವರಪ್ಪನವರನ್ನು ಚುನಾವಣಾ ಸಮಯದಲ್ಲಿ ಕಡೆಗಣಿಸಿದ್ದು. ಬಿಜೆಪಿಗೆ ನಷ್ಟವಾಯಿತು" title=
file photo

ಬೆಂಗಳೂರು: ಭಾರತೀಯ ಜನತಾ ಪಕ್ಷ ನನಗೆ ತಾಯಿ ಸಮಾನ. ನನಗೆ ಎಲ್ಲಾ ಸ್ಥಾನ ಮಾನ ನೀಡಿರುವುದು ಬಿಜೆಪಿ. ಪಕ್ಷಕ್ಕೆ ಹೀನಾಯ ಸೋಲಾದಾಗ ನಾವೆಲ್ಲರೂ ಸತ್ಯಸಂಗತಿಗಳ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳಲೇಬೇಕು.ಜನತಾ ನ್ಯಾಯಾಲಯದಲ್ಲಿ ಜನರು ತೀರ್ಪು ನೀಡಿದ್ದಾರೆ ಅದಕ್ಕೆ ನಾವು ತಲೆಬಾಗಲೇಬೇಕು. ಅದೇ ಜನಸಾಮಾನ್ಯರು ತಿಳಿಸಿದ ಅಭಿಪ್ರಾಯವನ್ನು ನಾನು ತಿಳಿಸುತ್ತಿದ್ದೇನೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆಗೆ ಹೆಚ್ಚು ಹಣ ವಸೂಲಿ ಮಾಡಿದರೆ ಕಠಿಣ ಕ್ರಮ

ಬಿಜೆಪಿ ಪಕ್ಷವನ್ನು ಹಗಲು ರಾತ್ರಿ ಕಟ್ಟಿದ ಹಿರಿಯರಾದ ಯಡಿಯೂರಪ್ಪ, ದಿವಂಗತ ಅನಂತ ಕುಮಾರ್, ಜಗದೀಶ್ ಶೆಟ್ಟರ್, ಈಶ್ವರಪ್ಪ ನವರದ್ದು ಬಹುದೊಡ್ಡ ಪಾತ್ರವಿದೆ. ಅಂಥವರನ್ನು ಚುನಾವಣಾ ಸಮಯದಲ್ಲಿ ಕಡೆಗಣಿಸಿದ್ದು. ಬಿಜೆಪಿಗೆ ನಷ್ಟವಾಯಿತು.ಬಿಜೆಪಿ ರಾಜ್ಯದ ಅಧ್ಯಕ್ಷರಿಗೆ ವಿನಂತಿ ಮಾಡುತ್ತೇನೆ ನಿಮ್ಮ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ತಾವು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ: ಜು. 1ರಿಂದ ಪಡಿತರರಿಗೆ ಅಕ್ಕಿ ಬದಲು ಹಣ : ತಿಂಗಳಿಗೆ ₹170 ನೀಡಲು ಸರ್ಕಾರ ತೀರ್ಮಾನ

ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಮೋದಿಜಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವೆಲ್ಲ ಪಕ್ಷದ ನಾಯಕರು ಕಾರ್ಯಕರ್ತರನ್ನು ಜೋಡಣೆ ಮಾಡಬೇಕು ಎಂದು ಆಗ್ರಹಿಸಿದರು.

ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿ.ಈ ಮಾತನ್ನು ದಾವಣಗೆರೆ ಜಿಲ್ಲೆಯ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಹಿರಿಯರು ಹಾಗೂ ಜನರ ಒತ್ತಾಯಕ್ಕೆ ಮಣಿದು ಹೇಳುತ್ತಿದ್ದೇನೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News