SR Vishwanath : `ಮುಂದಿನ 2 ವರ್ಷ ಯಡಿಯೂರಪ್ಪರೇ ರಾಜ್ಯದ ಸಿಎಂ`
ಬಿಜೆಪಿ ನಾಯಕತ್ವ ಬದಲಾವಣೆ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಆರ್.ವಿಶ್ವನಾಥ್
ಬೆಂಗಳೂರು : ಮುಂದಿನ ಎರಡು ವರ್ಷ ಯಡಿಯೂರಪ್ಪರೇ ಮುಖ್ಯಮಂತ್ರಿ ಹುದ್ದೆಯಲ್ಲಿರುತ್ತಾರೆ. ಮುಂದಿನ ಸಾರ್ವತ್ರಿಕ ವಿಧಾನ ಚುನಾವಣೆಯೂ ಇವರ ನೇತೃತ್ವದಲ್ಲಿಯೇ ನಡೆಯುತ್ತದೆ. ಮುಂದಿನ ಚುನಾವಣೆವರೆಗೂ ಅವರೇ ಇರಲಿದ್ದು, ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.
ಬಿಜೆಪಿ ನಾಯಕತ್ವ ಬದಲಾವಣೆ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಆರ್.ವಿಶ್ವನಾಥ್(SR Vishwanath), ಯಡಿಯೂರಪ್ಪನವರು ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ. ನಮ್ಮ ಪಕ್ಷದ ನಾಯಕರಲ್ಲಿ ಯಾರಾದರೂ ಮುಂದಿನ ಸಿಎಂ ಆಗುತ್ತೇವೆ ಎಂದು ಹೊಸ ಬಟ್ಟೆ ಹೊಲಿಸಿದ್ದರೆ ಅದರ ಆಸೆ ಬಿಡಲಿ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
ಇದನ್ನೂ ಓದಿ : ಕರ್ನಾಟಕದ ಸಾಕ್ಷಿಪ್ರಜ್ಞೆ ಗಾಂಧಿವಾದಿ ಎಚ್.ಎಸ್ ದೊರೆಸ್ವಾಮಿ ಇನ್ನಿಲ್ಲ
ಬಿಜೆಪಿಯವರೇ ಸಿಎಂ ಯಡಿಯೂರಪ್ಪ(BS Yediyurappa) ಅವರ ಬದಲಾವಣೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ತಿರುಗೇಟು ನೀಡಿದ ಎಸ್.ಆರ್.ವಿಶ್ವನಾಥ್, ಅಧಿಕಾರ ಗಗನಕುಸುಮವಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗುವ ತಿರುಕನ ಕನಸು ಕಾಣುತ್ತಿದ್ದಾರೆ. ಬಹುಶಃ 60 ರಿಂದ 70 ಪಂಚೆಗಳನ್ನು ಖರೀದಿಸಿರಬಹುದು. ಆದರೆ, ಸಿದ್ದರಾಮಯ್ಯನವರನ್ನು ಪ್ರತಿಪಕ್ಷದ ನಾಯಕನ ಸ್ಥಾನದಿಂದ ಕಿತ್ತೊಗೆಯಲು ಕಾಂಗ್ರೆಸ್ ನಾಯಕರೇ ಪಣ ತೊಟ್ಟಿದ್ದಾರೆ ಎಂದು ಲೇವಡಿ ಮಾಡಿದರು.
ಇದನ್ನೂ ಓದಿ : K Sudhakar : ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 1.25 ಲಕ್ಷ ಡೋಸ್ COVAXIN ಬಿಡುಗಡೆ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.