ಬೆಂಗಳೂರು : ಯಲಹಂಕ ನ್ಯೂಟೌನ್ ಪೊಲೀಸರ ಮೇಲೆ ಹಲ್ಲೆ ಮಾಡಿ ಪುಂಡಾಟ ಮೆರೆದಿದ್ದ ಇಬ್ಬರು ಆರೋಪಿಗಳನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಲಾಗಿದೆ. ಧೀರಜ್ ಮತ್ತು ಮನೋಜ್ ವಿರುದ್ಧ ಪೊಲೀಸರು ರೌಡಿಶೀಟ್ ಓಪನ್ ಮಾಡಿದ್ದಾರೆ. ಡಿಸೆಂಬರ್ 7ರ ತಡರಾತ್ರಿ ಯಲಹಂಕ ಬಳಿಯ ಚಿಕ್ಕಬೆಟ್ಟಹಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದಿತ್ತು.


COMMERCIAL BREAK
SCROLL TO CONTINUE READING

ಅಷ್ಟಕ್ಕೂ ಅಲ್ಲಿ ಆಗಿದ್ದೇನು..?


ಆರೋಪಿಗಳು ಯಲಹಂಕ ನಿವಾಸಿಗಳಾಗಿದ್ದು, ಗಸ್ತು ತಿರುಗುತ್ತಿದ್ದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹಾಗೂ ಪೊಲೀಸ್ ಪೇದೆ(Sub-Inspector and Constables) ಮೇಲೆ ಹಲ್ಲೆ ನಡೆಸಿದ್ದರು. ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಶ್ರೀಶೈಲ ಮತ್ತು ಪೊಲೀಸ್ ಪೇದೆ ಅಸ್ಲಾಂ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದರು.


ಇದನ್ನೂ ಓದಿ : Bengaluru:ಸಿಲಿಕಾನ್ ಸಿಟಿಯಲ್ಲಿ ಜೀವಂತ ಮೊಸಳೆ ಮರಿ ಮಾರಾಟಕ್ಕೆ ಯತ್ನಿಸಿದವರ ಬಂಧನ


ಗಲಾಟೆಗೆ ಕಾರಣವೇನು?


ಘಟನೆ ನಡೆದ ಚಿಕ್ಕಬೆಟ್ಟಹಳ್ಳಿಯಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರು(Police) ಬೈಕ್‌ನಲ್ಲಿ ರೌಂಡಿಂಗ್ಸ್ ಹಾಕುತ್ತಿದ್ದರು. ಈ ವೇಳೆ ಕಿರಿದಾದ ರಸ್ತೆಯಲ್ಲಿ ಎದುರಾಗಿ ಬರುತ್ತಿದ್ದ ಆರೋಪಿಗಳ ಕಾರನ್ನು ಪೊಲೀಸರು ಅಡ್ಡಗಟ್ಟಿ ವಿಚಾರಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ರಸ್ತೆಯ ಒಂದು ಬದಿಯಲ್ಲಿ ಸಂಚಾರ ನಿರ್ಬಂಧವಾಗಿತ್ತು. ಹೀಗಾಗಿ ಮತ್ತೊಂದು ಬದಿಯಲ್ಲಿ ಎರಡೂ ದಿಕ್ಕಿನ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಘಟನೆ ವೇಳೆ ಬಂಧಿತರು ಮತ್ತೊಂದು ದಿಕ್ಕಿನಲ್ಲಿ ಬರುತ್ತಿದ್ದರು. ಇದರಿಂದ ಬೇರೆ ಸವಾರರಿಗೆ ಸಮಸ್ಯೆಯಾಗುತ್ತಿದೆ ಎಂದು  ಗಮನಿಸಿದ ಕರ್ತವ್ಯ ನಿರತ ಪೊಲೀಸರು ಕಾರನ್ನು ಅಡ್ಡಗಟ್ಟಿದ್ದಾರೆ. ಆದರೆ ಈ ವೇಳೆ ಮಾತಿಗೆ ಮಾತು ಬೆಳೆದಿದೆ.


ಇದೇ ಸಂದರ್ಭದಲ್ಲಿ ಆರೋಪಿಗಳು ಮಾಸ್ಕ್(Mask) ಹಾಕದೆ ಇರುವುದನ್ನು ಪೊಲೀಸರು ಪ್ರಶ್ನಿಸಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಆರೋಪಿಗಳು ಏಕಾಏಕಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿತ್ತು.


ಇದನ್ನೂ ಓದಿ : Covid-19 Positivity Rate : ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಕಡಿಮೆ, 3ನೇ ಅಲೆ ಲಕ್ಷಣ ಇಲ್ಲ ಎಂದ ತಜ್ಞರು


ತಮ್ಮ ಮೇಲೆ ಹಲ್ಲೆ ಆಗುತ್ತಿದ್ದಂತೆ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಪೊಲೀಸರು ಮತ್ತಷ್ಟು ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಆರೋಪಿಗಳ ವಿರುದ್ಧ ರೌಡಿಶೀಟ್ ಓಪನ್ ಆಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.