Karnataka Weather Updates : ರಾಜ್ಯದ ವಿವಿಧೆಡೆ ಬುಧವಾರವೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 


COMMERCIAL BREAK
SCROLL TO CONTINUE READING

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಕೊಡಗು ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳ ಜತೆಗೆ ಶಿವಮೊಗ್ಗ ಜಿಲ್ಲೆಯ ಒಂದೆರಡು ಸ್ಥಳದಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 


ರಾಜ್ಯದ ಹಲವು ಸ್ಥಳಗಳಲ್ಲಿ ಬುಧವಾರ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಕರಾವಳಿಯಲ್ಲಿ ಬಿರುಗಾಳಿಯ  ಸಾಧ್ಯತೆಯೊಂದಿಗೆ, ಗಾಳಿಯು 55 ಕಿ.ಮೀ. ವೇಗದಲ್ಲಿ ಬೀಸಬಹುದು. ಇದರಿಂದಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ. 


ಇದನ್ನು ಓದಿ : KKR Vs SRH : 159 ರನ್ ಗೆ ಆಲೌಟ್ ಆದ ಹೈದರಬಾದ್, ಗೆಲುವಿನ ಗುರಿ ತಲುಪಿ ಫಿನಾಲೆ ಗೆ ದಾಪುಗಾಲಿಡುತ್ತಾ KKR!!


ಮೇ 20 ರಂದು,ಹವಾಮಾನ ಇಲಾಖೆ ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ ಮತ್ತು ದಾವಣಗೆರೆಯಲ್ಲಿ ಹಳದಿ ಅಲರ್ಟ್ ಮತ್ತು ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಕೊಡಗಿಗೆ ಆರೆಂಜ್ ಅಲರ್ಟ್ ಘೋಷಿಸಿತ್ತು. 


ಗುರುವಾರ, ಮೇ 23 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ ಮತ್ತು ದಕ್ಷಿಣ ಕನ್ನಡದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ವಾರಾಂತ್ಯದಲ್ಲಿ, ಭಾರೀ ಮಳೆಯು ಬೆಂಗಳೂರಿನಲ್ಲಿ ಗಮನಾರ್ಹ ಹಾನಿ ಮತ್ತು ಪ್ರವಾಹಕ್ಕೆ ಕಾರಣವಾಯಿತು. ವಸತಿ ಸಮುಚ್ಚಯದ ನೆಲಮಾಳಿಗೆಯಲ್ಲಿ ಕಾರು, ಬೈಕ್ ಗಳು ಜಖಂಗೊಂಡಿದ್ದು, ನಗರದ ವಿವಿಧೆಡೆ ರಸ್ತೆಗಳು ಜಲಾವೃತಗೊಂಡಿವೆ. ಯಲಹಂಕ, ಬ್ಯಾಟರಾಯನಪುರ, ಹೆಸರಘಟ್ಟ ರಸ್ತೆ, ಹೆಬ್ಬಾಳ ಮತ್ತು ಉತ್ತರ ಬೆಂಗಳೂರಿನ ಇತರ ಭಾಗಗಳು ಮತ್ತು ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ (ಸಿಬಿಡಿ) ನಂತಹ ಪ್ರದೇಶಗಳು ತೀವ್ರ ಪ್ರವಾಹವನ್ನು ಅನುಭವಿಸಿವೆ. 


ಇದನ್ನು ಓದಿ : ದ್ವಿತೀಯ ಪಿಯು ಪರೀಕ್ಷೆ–3 ಪ್ರಕಟ , ಜೂನ್‌ 24ರಿಂದ ಪರೀಕ್ಷೆ ಪ್ರಾರಂಭ 


ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಯ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. 


ಇದೇ 23ರಿಂದ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ. 28ರವರೆಗೂ ರಾಜ್ಯದ ವಿವಿಧೆಡೆ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.