ಹೌದು. ನಾನು ಲಕ್ಕಿ ಡಿಪ್ ಸಿಎಂ, ಏನೀಗ?: ‘ಆಪರೇಷನ್ ಕಮಲ’ದ ವಿರುದ್ಧ ಎಚ್‌ಡಿಕೆ ಆಕ್ರೋಶ

ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Written by - Puttaraj K Alur | Last Updated : Jul 6, 2022, 03:09 PM IST
  • ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರ್ಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ
  • ನಿಮ್ಮಲ್ಲೆಷ್ಟು ಲಕ್ಕಿಡಿಪ್‍ಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ
  • ಲಕ್ಕಿಡಿಪ್ ಸಿಎಂ ಎಂಬುದು ‘ಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ? ಎಂದು ಪ್ರಶ್ನಿಸಿದ ಎಚ್‍ಡಿಕೆ
ಹೌದು. ನಾನು ಲಕ್ಕಿ ಡಿಪ್ ಸಿಎಂ, ಏನೀಗ?: ‘ಆಪರೇಷನ್ ಕಮಲ’ದ ವಿರುದ್ಧ ಎಚ್‌ಡಿಕೆ ಆಕ್ರೋಶ title=
‘ಆಪರೇಷನ್ ಕಮಲ’ದ ವಿರುದ್ಧ HDK ಆಕ್ರೋಶ

ಬೆಂಗಳೂರು: ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ? ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಎಚ್‍.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರ್ಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್‌ʼಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ. ಲಕ್ಕಿಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ‘ಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ?’ ಎಂದು ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದ್ದಾರೆ.

ಇದನ್ನೂ ಓದಿ: Chandrashekhar Guruji Murder: ಗುರೂಜಿ ಹಂತಕರು ಯಾರು? ಕೊಲೆಗೆ ಕಾರಣವೇನು..?

‘ಇನ್ನು ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಿಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು!! ‘ಮಿಷನ್‌ ದಕ್ಷಿಣ್‌ʼ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ʼನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ. ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜೊತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ’ ಎಂದು ಎಚ್‍ಡಿಕೆ ಕುಟುಕಿದ್ದಾರೆ.

‘ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ‘ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ’ ಎನ್ನುವುದೂ ಗೊತ್ತಿದೆ. ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ? ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ‘ಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ ‘ಪರಿವಾರಕೋಟಿ’ಯನ್ನೇ ಬರೆಯಬಹುದು’ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಇದನ್ನೂ ಓದಿ: ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸದ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News