CM Siddaramaiah vs HD Kumaraswamy: ಹೌದು, ನಾನು ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್. ಇಲ್ಲ ಎಂದವರು ಯಾರು? ಅವರಿಗೆ ನಾನು ವಿಲನ್ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.


COMMERCIAL BREAK
SCROLL TO CONTINUE READING

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ತಾಜ್ ನಲ್ಲಿ ಇದ್ದೆ ಅಂತ ಪದೇ ಪದೇ ಹೇಳ್ತಾರೆ. ತಾಜ್ ನಲ್ಲಿ ನಾನು ಮೋಜು ಮಸ್ತಿ ಮಾಡ್ತಿರಲಿಲ್ಲ. ಅಭಿವೃದ್ಧಿ ಕೆಲಸದ ಚರ್ಚೆ ಮಾಡ್ತಿದ್ದೆ. ನನ್ನ ಬಳಿ ಎಲ್ಲಾ ದಾಖಲಾತಿ ಇದೆ ಎಂದು ಅವರು ಟಾಂಗ್ ನೀಡಿದರು.


ಇದನ್ನೂ ಓದಿ- ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಖಳನಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ


ನನ್ನನ್ನು ಕಾಂಗ್ರೆಸ್ ನಾಯಕರು ಸಿಎಂ ಎನ್ನುವ ಗೌರವ ಇಲ್ಲದೆ ಪಪೇಟ್ ರೀತಿಯಲ್ಲಿ ನಡೆಸಿಕೊಂಡು ಅಪಮಾನ ಮಾಡಿದರು. ನಾನು ಸಿಎಂ ಆದಾಗ ಕಾಂಗ್ರೆಸ್ ಶಾಸಕರು ಇಸ್ಪೀಟ್ ಎಲೆ ಎಸೆದ ಹಾಗೆ ಅವರ ಅಹವಾಲುಗಳನ್ನು ನನ್ನ ಟೇಬಲ್ ಮೇಲೆ ಎಸೆಯುತ್ತಿದ್ದರು. ಅಂತಹವರು ನನ್ನ ಬಗ್ಗೆ ವಿಲನ್ ಎಂದು ಹೇಳುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು ಕುಮಾರಸ್ವಾಮಿ.


ಸರಕಾರ ಬೀಳಿಸಿದ್ದು ಸಿದ್ದರಾಮಯ್ಯ:
ನನ್ನ ನೇತೃತ್ವದ ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ ಅವರೇ. ಇದರಲ್ಲಿ ಎರಡು ಮಾತಿಲ್ಲ. ಬಿಜೆಪಿ‌ಯವರು ಸರ್ಕಾರ ಬೀಳಿಸಿದ್ದರು ಅಂತ ಹೇಳಿದ್ದೆ. ಆದರೆ ಅದಕ್ಕೆ ಬಿತ್ತನೆ ಹಾಕಿದ್ದು ಇದೇ ಸಿದ್ದರಾಮಯ್ಯ ಎಂದ ಅವರು ರಮೇಶ್ ಜಾರಕಿಹೋಳಿ ಯಾರು? ಅವರಿಗೂ ನನಗೂ ಯಾವ ಶತ್ರುತ್ವ ಇತ್ತಾ? ಬೆಳಗಾವಿ ರಾಜಕೀಯ ಸರಿ ಮಾಡಿ ಎಂದು ನಾನು ಇವರಿಗೆ ಹೇಳಿದೆ. ಇವರು ಸರಕಾರ ಬಿದ್ದು ಹೋಗಲಿ ಎಂದು ಸುಮ್ಮನಿದ್ದರು. ಆಗ ಬಿಜೆಪಿ‌ ಜತೆ ಕೈ ಜೋಡಿಸಿದ್ದು ಸಿದ್ದರಾಮಯ್ಯ. ಅದಕ್ಕೆ ‌ಸಮ್ಮಿಶ್ರ ಸರಕಾರ ಬಿದ್ದು ಹೋಯಿತು ಎಂದು ಅವರು ನೇರ ಆರೋಪ ಮಾಡಿದರು.


ಇದನ್ನೂ ಓದಿ- ನಾನು ಯಾವುದರ ಬಗ್ಗೆಯೂ ಮಾತಾಡಲ್ಲ, ನಿಮಗೆ ಗೊತ್ತಾಗುತ್ತದೆ : ಡಿಸಿಎಂ


ಇಬ್ಬರು ಪಕ್ಷೇತರ ಶಾಸಕರನ್ನು ಮಂತ್ರಿ ಮಾಡಿಸಿದ್ದು ಸಿದ್ದರಾಮಯ್ಯ. ಬಿ.ಸಿ.ಪಾಟೀಲ್ ಅವರನ್ನು ಮಂತ್ರಿ ಮಾಡಲು ಹೇಳಿದ್ದೆ. ಆದರೆ‌ ಸಿದ್ದರಾಮಯ್ಯ ಮಾಡಲಿಲ್ಲ. ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಶ್ರೀಮಂತ ಪಾಟೀಲ್, ಆರ್.ಶಂಕರ್ ಅವರನ್ನು ರೆಸಾರ್ಟ್ ನಿಂದ ಕಳಿಸಿದ್ದು ಇದೇ ಸಿದ್ದರಾಮಯ್ಯ ಎಂದು ಟೀಕಾ ಪ್ರಹಾರ ನಡೆಸಿದ ಅವರು ಅಪ್ಪ ನಿಮಗೊಂದು ನಮಸ್ಕಾರ. 14 ತಿಂಗಳು ನನ್ನನ್ನ ಅಧಿಕಾರದಲ್ಲಿ ಇಟ್ಟಿದ್ದಕ್ಕೆ ನಮೋ ನಮಃ.  ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಎಂದು  ಅವರು ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದರು.


ಗೃಹಲಕ್ಷ್ಮಿ ರಾಜಸ್ಥಾನದಲ್ಲಿ ಯಾಕೆ 10 ಸಾವಿರ‌ ಕೊಡ್ತಿದ್ದೀರಾ? ಎಲ್ಲಾ ಕಡೆ ಗ್ಯಾರಂಟಿಗಳನ್ನು ಕೊಡುತ್ತಿದೆ ಕಾಂಗ್ರೆಸ್. ಈ ಕಾರಣಕ್ಕೆ ಎಲ್ಲ ಯೋಜನೆಗಳು ಹಳ್ಳ ಹಿಡಿದು ಹೋಗಿವೆ. ನಿಮ್ಮ ಗ್ಯಾರಂಟಿಗಳ ಬಗ್ಗೆ ಜನ ಛೀ ಥೂ ಎಂದು ಉಗಿಯೋ ಕಾಲ ಬರುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.