ಬೆಂಗಳೂರು : ರಾಜ್ಯ ಸರ್ಕಾರ ಲಾಕ್ ಡೌನ್ ಮಾರ್ಗಸೂಚಿಗಳನ್ನ ಮತ್ತೆ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.


COMMERCIAL BREAK
SCROLL TO CONTINUE READING

ಹೌದು, ಹೊಸ ಮಾರ್ಗಸೂಚಿ(New Guidelines)ಗಳಲ್ಲಿ ಸಂತೆ ಮತ್ತು ಮಾರುಕಟ್ಟೆಗಳನ್ನ ಸಂಪೂರ್ಣ ಬಂದ್ ಮಾಡಿ ನಿನ್ನೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 


ಇದನ್ನೂ ಓದಿ : BS Yediyurappa : 'ರಾಜ್ಯದ ಕೊರೋನಾ ಲಸಿಕೆ ಕೊರತೆಯನ್ನ 2-3 ದಿನಗಳಲ್ಲಿ ಬಗೆಹರಿಸಲಾಗುವುದು' 


ಇನ್ನು ಬೆಳಗ್ಗೆ 6 ರಿಂದ 12 ರವರೆಗೆ ದಿನಸಿ ಅಂಗಡಿಗಳು ತೆರೆಯಲು ಅವಕಾಶ ನೀಡಲಾಗಿದೆ. ಅಲ್ಲದೆ, ಮಾರುಕಟ್ಟೆ(Market), ವಾರದ ಸಂತೆಗಳನ್ನು ಬಂದ್ ಮಾಡಲಾಗಿದ್ದು, ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ತಳ್ಳು ಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.


ಇದನ್ನೂ ಓದಿ : Covid Protocol : ಬೈಎಲೆಕ್ಷನ್ ಮತ ಎಣಿಕೆಗೆ ತೆಗೆದುಕೊಳ್ಳಲಿದೆ ಹೆಚ್ಚು ಸಮಯ..!


ಪ್ರಸ್ತುತ ಮಾರುಕಟ್ಟೆಗಳಲ್ಲಿ ಆಗುತ್ತಿರುವ ಜನಸಂದಣಿ/ನೂಕು ನುಗ್ಗಲುಗಳನ್ನು ತಪ್ಪಿಸಲು ದಿನಾಂಕ 2/5 /2021 ಅಂದರೆ ಇಂದಿನಿಂದ ಅನ್ವಯವಾಗುವಂತೆ ಎಲ್ಲ ರೀತಿಯ ಸಂತೆ, ವಾರದ ಸಂತೆಗಳನ್ನ  ನಿರ್ಬಂಧಿಸಲಾಗಿದೆ. ಇದರ ಬದಲಿಗೆ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಹಾಪ್ ಕಾಮ್ಸ್, ಎಲ್ಲ ಹಾಲಿನ ಬೂತುಗಳು ತಳ್ಳುವಗಾಡಿಮೂಲಕ ಹಣ್ಣು, ತರಕಾರಿಗಳನ್ನು(Vegetables) ದುಬಾರಿ ಬೆಲೆಗೆ ಮಾರಾಟ ಮಾಡದೆ, ಮಾರುಕಟ್ಟೆ ಬೆಲೆಗೆ ಮಾರಾಟ ಮಾಡುವುದು ಹಾಗೂ ಕೋವಿಡ್-19 ನಿಯಮಗನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ : Corona Vaccine: ಆದಷ್ಟು ಬೇಗ ಕೊರೋನಾ ಲಸಿಕೆ ಕೊರತೆ ನಿವಾರಿಸಿ, ಎಲ್ಲರಿಗೂ ಲಸಿಕೆ ಕೊಡಿ-ಸಿದ್ದರಾಮಯ್ಯ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.