ನಾಳೆ ರೈತ ನಾಯಕ ಪುಟ್ಟಣ್ಣಯ್ಯರವರ ಅಂತ್ಯಕ್ರಿಯೆಯಲ್ಲಿ ಯೋಗೇಂದ್ರ ಯಾದವ್ ಭಾಗಿ
ಬೆಂಗಳೂರು:ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಯೋಗೇಂದ್ರ ಯಾದವ್ ರವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.
ಅವರು ಇತ್ತೀಚೆಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ರೈತ ನಾಯಕ ಮತ್ತು ದೇಶದ ಏಕಮಾತ್ರ ಸ್ವರಾಜ್ ಇಂಡಿಯಾ ಪಕ್ಷದ ಶಾಸಕರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯರವರ ಅಂತಿಮ ದರ್ಶನ ಪಡೆಯಲಿದ್ದಾರೆ.
ಗುರುವಾರದಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸ್ವಗ್ರಾಮ ಕ್ಯಾತನಹಳ್ಳಿಯಲ್ಲಿ ನಡೆಯಲಿರುವ ಅಂತ್ಯ ಸಂಸ್ಕಾರದಲ್ಲಿ ಯೋಗೇಂದ್ರ ಯಾದವ್ ಭಾಗವಹಿಸಲಿದ್ದಾರೆ ಎಂದು ಸ್ವರಾಜ ಇಂಡಿಯಾ ಪಕ್ಷದ ಮೂಲಗಳು ತಿಳಿಸಿವೆ.