ಯೋಗಿ ಆದಿತ್ಯನಾಥ್ ಸರ್ಕಾರ ಪ್ರಜಾಪ್ರಭುತ್ವಕ್ಕೆ ಕಳಂಕ -ಸಿದ್ಧರಾಮಯ್ಯ

ಉತ್ತರಪ್ರದೇಶದ ಪೊಲೀಸರು ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Last Updated : Oct 1, 2020, 11:17 PM IST
 ಯೋಗಿ ಆದಿತ್ಯನಾಥ್ ಸರ್ಕಾರ ಪ್ರಜಾಪ್ರಭುತ್ವಕ್ಕೆ ಕಳಂಕ -ಸಿದ್ಧರಾಮಯ್ಯ title=
Photo Courtsey : Twitter

ಬೆಂಗಳೂರು: ಉತ್ತರಪ್ರದೇಶದ ಪೊಲೀಸರು ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಉ.ಪ್ರದೇಶದಲ್ಲಿ ದಲಿತ ಯುವತಿಯ 'ಹತ್ಯಾಚಾರ'ವಾಗಿದೆ, ಬಿಜೆಪಿಯವರೇನಾದ್ರೂ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ರಾ? -ಸಿದ್ದರಾಮಯ್ಯ

ಈ ಇಬ್ಬರು ನಾಯಕರ ಬಂಧನ ಮತ್ತು ಅವರ ಜೊತೆಗಿನ ಪೊಲೀಸರ ದುರ್ವರ್ತನೆಗೆ ಯೋಗಿ ಆದಿತ್ಯನಾಥ್ ಅವರು ಬೆಲೆ ತೆರಬೇಕಾಗುತ್ತದೆ.ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಪೊಲೀಸರು ಗೃಹಬಂಧನದಲ್ಲಿರಿಸಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದ ಬಣ್ಣ ಬಯಲಾಗುತ್ತದೆ ಎನ್ನುವ ಕಾರಣಕ್ಕೆ ಆ ಕುಟುಂಬದ ಭೇಟಿಗೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಅವಕಾಶ ನೀಡಲಾಗುತ್ತಿಲ್ಲ ಎಂದರು.

ಹತ್ರಾಸ್ ಸಾಮೂಹಿಕ ಅತ್ಯಾಚಾರ: ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಕಾಂಗ್ರೆಸ್

ಉತ್ತರಪ್ರದೇಶದ ಪೊಲೀಸ್ ರಾಜ್ಯದಲ್ಲಿ‌ ಸಂಸದ ರಾಹುಲ್ ಗಾಂಧಿ ಮತ್ತು ನಮ್ಮ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಅವರೇ ಸುರಕ್ಷಿತರಲ್ಲ ಎಂದ‌ ಮೇಲೆ ಅಲ್ಲಿನ‌ ದಲಿತರು,‌ ಮಹಿಳೆಯರು, ರೈತರು, ಕಾರ್ಮಿಕರು ಹೇಗೆ ಸುರಕ್ಷಿತರಾಗಿರಲು ಸಾಧ್ಯ? ಯೋಗಿ ಆದಿತ್ಯನಾಥ್  ಸರ್ಕಾರ ಪ್ರಜಾಪ್ರಭುತ್ವಕ್ಕೆ ಕಳಂಕ ಎಂದು ಸಿದ್ಧರಾಮಯ್ಯ ಟೀಕಾ ಪ್ರಹಾರ ನಡೆಸಿದರು.

ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ಶ್ರೀ‌ಮತಿ ಪ್ರಿಯಾಂಕ ಗಾಂಧಿ ಅವರ ಮೇಲೆ ಪೋಲೀಸರು ಹಲ್ಲೆ ನಡೆಸಿ, ವಶಕ್ಕೆ ಪಡೆದ ಉತ್ತರ ಪ್ರದೇಶ ಸರ್ಕಾರ ಹಾಗೂ ಪೊಲೀಸರ ಕ್ರಮವನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂದೆ ಪ್ರತಿಭಟನೆ ನಡೆಸಿದರು. ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕಿ ಸೌಮ್ಯಾರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

Trending News