ಬೆಂಗಳೂರು: ಸ್ವಾಮಿ ವಿರೋಧ ಪಕ್ಷದ ನಾಯಕ ಆರ್ ಆಶೋಕ್ ಅವರೇ, ನಿಮ್ಮ ಟ್ವೀಟ್ ನಿಮ್ಮ ಪರಮ ಅಜ್ಞಾನದ ಫಲವೋ? ಅಥವಾ ವಿರೋಧ ಪಕ್ಷದ ನಾಯಕ ಅಸ್ವಿತ್ವದಲ್ಲಿದ್ದಾರೆ ಎಂದು ಜನರಿಗೆ ತಿಳಿಸಲು ಟ್ವೀಟ್ ಮಾಡುತ್ತಿರೋ?? ಇದು ನಮ್ಮನ್ನೂ ಸೇರಿಸಿಕೊಂಡಂತೆ ರಾಜ್ಯದ ಜನಸಾಮಾನ್ಯರಿಗೂ ಅರ್ಥವಾಗದೆ ಇರುವ ಯಕ್ಷ ಪ್ರಶ್ನೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ತಿರುಗೇಟು ನೀಡಿರುವ ಅವರು ನೀವು ಸುಳ್ಳಿನ ಕೋಟೆಯನ್ನು ಎಷ್ಟೇ ದೊಡ್ಡದಾಗಿ ಕಟ್ಟಿದರೂ ಅದರ ಆಯುಷ್ಯ ಕಡಿಮೆ. ನಮ್ಮ ಸತ್ಯದ ಒಂದು ಏಟಿಗೆ ಅದು ಕುಸಿದುಬೀಳುತ್ತಲೇ ಇದೆ.ನೀವು ಮತ್ತೆ ಮತ್ತೆ ಸುಳ್ಳುಗಳನ್ನು ಹೇಳಿ ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುತ್ತಲೇ ಇದ್ದೀರಿ.ಇದು ಮುಂದುವರಿಯಲಿ ಆಲ್ ದಿ ಬೆಸ್ಟ್ ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಇಡೀ ಸಂಪುಟವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಬಸವರಾಜ ಬೊಮ್ಮಾಯಿ ಆರೋಪ


ಈಗ ಸತ್ಯದ ಮಾತುಗಳನ್ನು ಕೇಳುವಂತವರಾಗಿ.ಪ್ರಪ್ರಥಮವಾಗಿ ಸಾರಿಗೆ ಸಂಸ್ಥೆಗಳಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಸೇರ್ಪಡೆಯು ಕೇಂದ್ರ ಸರ್ಕಾರದ ನೀತಿ ಯೋಜನೆಯಂತೆ ಜಾರಿಯಾಗಿದೆ. ಎಲೆಕ್ಟ್ರಿಕ್ ಬಸ್ಸುಗಳನ್ನು ಸಾರಿಗೆ ಸಂಸ್ಥೆಗಳು ನೇರವಾಗಿ ಖರೀದಿಸುವಂತಿಲ್ಲ, ಖಾಸಗಿ ಕಂಪನಿಯವರು ಮಾಲೀಕತ್ವ ಹೊಂದಿರುತ್ತಾರೆ, ಅವರಿಗೆ ಸಬ್ಸಿಡಿಯನ್ನು ಕೇಂದ್ರ ಸರ್ಕಾರವು ನೇರವಾಗಿ ನೀಡುತ್ತದೆ ಹಾಗೂ ಚಾಲಕರನ್ನು ನಿಯೋಜಿಸುವ ಕಾರ್ಯವು ಖಾಸಗಿ ಅವರಿಗೆ ನೀಡಲಾಗಿದೆ‌ ಎಂದರು


ಚಾಲಕರ ವೇತನ, ಆಯ್ಕೆ ಯಾವುದರಲ್ಲಿಯೂ ಸಾರಿಗೆ ಸಂಸ್ಥೆಗಳಿಗೆ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವಿಲ್ಲ. ಬಸ್ಸುಗಳ ಕಾರ್ಯಾಚರಣೆ ಹೊಣೆ ಮಾತ್ರ ಸಾರಿಗೆ ಸಂಸ್ಥೆಗಳದ್ದು,ಈ ವಿಷಯವನ್ನು ಹತ್ತು ಹಲವಾರು ಬಾರಿ ನಮ್ಮ ಸಾರಿಗೆ ಸಚಿವರು ಪ್ರತಿಯೊಂದು ವೇದಿಕೆಯಲ್ಲಿಯೂ ಸ್ಪಷ್ಟಪಡಿಸಿರುತ್ತಾರೆ.ತಮಗೆ ಅದು ಅರ್ಥವಾಗದಿರುವುದು ನಿಜಕ್ಕೂ ಶೋಚನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Bengaluru Liquor Ban for Dry Days: ಬೆಂಗಳೂರಿನಲ್ಲಿ ಮಧ್ಯ ನಿಷೇಧ: ಅಬಕಾರಿ ಇಲಾಖೆ ದಿನಕ್ಕೆ ₹100 ಕೋಟಿ ನಷ್ಟ ಸಾಧ್ಯತೆ


ಯುವಕರಿಗೆ ನಿರುದ್ಯೋಗ ಭಾಗ್ಯ ಕರುಣಿಸಿ, ಸಾರಿಗೆ ಸಂಸ್ಥೆಗಳನ್ನು ಅವನತಿಯತ್ತ ಕೊಂಡ್ಯೊಯ್ದ ಹೆಗ್ಗಳಿಕೆ ತಮ್ಮದೇ ಅಲ್ಲವೇ? ನಾವು ನುಡಿದಂತೆ ನಡೆಯುವವರು, ತಮ್ಮಂತೆ ಬರೀ ಭಾಷಣದಲ್ಲಿ  ಕೋಟಿ ಕೋಟಿ ಉದ್ಯೋಗ ಭಾಗ್ಯ ಕರುಣಿಸಿ, ಯುವಜನರನ್ನು ಶೋಷಿಸುವ ಕಾರ್ಯ ಮಾಡಿಲ್ಲ ಎಂದು ತಿರುಗೇಟು ನೀಡಿದರು


ಸಾರಿಗೆ ಸಂಸ್ಥೆಗಳಲ್ಲಿ ಕಳೆದ 5 ವರ್ಷಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆ ಮಾಡದೇ, ಡಕೋಟ ಬಸ್ಸುಗಳನ್ನು ದಯಪಾಲಿಸಿರುವ ನೀವು ಮಾತನಾಡುವ ಪರಿಗೆ ವಿಷಾದವಲ್ಲದೇ ಮತ್ತೇನು ವ್ಯಕ್ತಪಡಿಸಲು ಸಾಧ್ಯ? ತಮ್ಮ ಬೇಜಾವಬ್ದಾರಿ, ಆಧಾರರಹಿತ, ತಪ್ಪು ಹೇಳಿಕೆಗಳಿಗೆ ಸಂತಾಪ ಸೂಚಿಸುತ್ತಾ ನಿಮಗೆ ನೀವು ನಂಬಿರುವ ದೇವರು ಸತ್ಯ ಹೇಳುವ ಸದ್ಬುದ್ದಿಯನ್ನು ಕರುಣಿಸಲು ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.