Bangalore:1200 ರೂ. ಗಾಗಿ ಬಿತ್ತು ಹೆಣ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನನ್ನು ಕೊಂದೇ ಬಿಟ್ಟರು..
Boy murder in Bangalore: 1200 ರೂಪಾಯಿಗಾಗಿ ಯುವಕನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು: ಕ್ಷುಲಕ ವಿಚಾರಕ್ಕೆ ಯುವಕರ ನಡುವೆ ಶುರುವಾದ ಜಗಳ ಕೊಲೆಯಲ್ಲಿ (Murder in Bangalore) ಅಂತ್ಯವಾಗಿದೆ. 1200 ರೂಪಾಯಿಗಾಗಿ ಯುವಕನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೆಹಬೂಬ್(19) ಕೊಲೆಯಾದ ಯುವಕ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಎ.ಕೆ ಕಾಲೋನಿಯಲ್ಲಿ ಈ ಕೊಲೆ ನಡೆದಿದೆ. ರಾತ್ರಿ 8 ಗಂಟೆಯ ವೇಳೆ 1200 ರೂಪಾಯಿ ಹಣ ಕೊಡುವ ವಿಚಾರವಾಗಿ ಜಗಳ ಶುರುವಾಗಿದೆ. ಪರಿಚಿತ ಯುವಕರ ನಡುವೆ ಆರಂಭವಾದ ಈ ಗಲಾಟೆ ಕೊಲೆಯಲ್ಲಿ (Young man killed in Bangalore) ಅಂತ್ಯ ಕಂಡಿದೆ.
ಜಗಳ ತಾರಕ್ಕೇರಿದ್ದು ಮೆಹಬೂಬ್ ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಮೆಹಬೂಬ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ತೀವ್ರವಾಗಿ ಗಾಯಗೊಂಡಿದ್ದ ಮೆಹಬೂಬ್ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಲಲಿತ್‌ಕುಮಾರ್ ಹಾಗೂ ಮಣಿಕಂಠ ಎಂಬವರ ನಡುವೆ ಹಣದ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಈ ವೇಳೆ ಲಲಿತ್ ಕುಮಾರ್ ಜತೆ ಮೆಹಬೂಬ್ ಕೂಡ ಇದ್ದ. ಜಗಳ ಅತಿರೇಕಕ್ಕೆ ಹೋಗಿ ಮಣಿಕಂಠ, ಪವನ್, ಕಿರಣ್, ಕಾರ್ತಿಕ್ ಹಾಗೂ ಇತರರು ಮೆಹಬೂಬ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.
ಈ ಸಂಬಂಧ ಕೋಣನಕುಂಟೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ: ಜೈಲಿಗೆ ಹಾಕಿದ್ರು ಪರವಾಗಿಲ್ಲ, ಪಾದಯಾತ್ರೆ ಮಾಡಿಯೇ ತೀರುತ್ತೇವೆ: ಡಿ.ಕೆ.ಶಿವಕುಮಾರ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.